ಕೊಪ್ಪಳದಲ್ಲಿ ಬಿಜೆಪಿ ಮಾಧ್ಯಮ ಪ್ರಕೋಷ್ಠ ಸುದ್ದಿಗಾರರ ಪ್ರಶ್ನೆಗೆ ಸಂಸದರಿಂದ ಉತ್ತರ

ಇಂದು ಕೊಪ್ಪಳದ ಬಿಎಸ್ ಪವರ್ ಹೋಟೆಲ್ನಲ್ಲಿ ಬಿಜೆಪಿಯ ಮಾಧ್ಯಮ ಪ್ರಕೋಷ್ಠ ಕಾರ್ಯಕ್ರಮ ನಡೆಯಿತು, ಮೋದಿ ಸರ್ಕಾರದ ಎಂಟು ವರ್ಷಗಳ ಸಾಧನೆ ಕುರಿತು ಮಾಧ್ಯಮದೊಂದಿಗೆ ಸಂಸದ ಸಂಗಣ್ಣ ಕರಡಿ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದ ಸಂಗಣ್ಣ ಕರಡಿ ಮೋದಿ ಅವರು ಮಾಡಿದ ಮತ್ತು ಮೋದಿ ಸರಕಾರ ಮಾಡಿದ ಜನಪರ ಸಾಧನೆಗಳನ್ನು ಮಾಧ್ಯಮದವರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟರು.

ಮಾಧ್ಯಮದವರು ಕೇಳಿದ ಸಾಕಷ್ಟು ಪ್ರಶ್ನೆಗಳಿಗೆ ಸಂಸದರು ಸಮರ್ಥವಾಗಿ ಉತ್ತರಿಸಿದರು
ನೀರಾವರಿ, ಭತ್ತ ಕರದಿ ಕೇಂದ್ರ ಮತ್ತು ಸರ್ಕಾರ ಮಾಡಿರುವ ಯೋಜನೆಗಳು ಸರಿಯಾಗಿ ಸಾಕಾರಗೊಳ್ಳುತ್ತಿಲ್ಲ ಅನ್ನುವ ಅನೇಕ ಪ್ರಶ್ನೆಗಳಿಗೆ ಉತ್ತರ ನೀಡಿದ್ದಲ್ಲದೆ ಸಮಸ್ಯೆಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು.
ಮಾಧ್ಯಮ ಪ್ರಕೋಷ್ಠ ದಲ್ಲಿ ಸಂಸದರಿಗೆ ಜೊತೆಯಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ್ ಯುವ ಮುಖಂಡ ನವೀನ್ ಗುಳಗಣ್ಣನವರ್ ಮತ್ತು ಚಂದ್ರಶೇಖರ್ ಪಾಟೀಲ್ ಇದ್ದರು

ಪ್ರಧಾನ ಮಂತ್ರಿಗಳ ಎಂಟು ವರ್ಷಗಳ ಸಾಧನೆ 8 ಜನಪ್ರಿಯ ಯೋಜನೆಗಳು

1)ಪ್ರಧಾನ್ ಮಂತ್ರಿ ಆವಾಸ್ ಯೋಜನೆ: ಪ್ರಧಾನಿ ಮೋದಿ ಸರ್ಕಾರದ ಪ್ರಮುಖ ಯೋಜನೆಯಾದ ಪ್ರತಿಯೊಬ್ಬರಿಗೂ ಮನೆ ಎಂಬ ಪರಿಕಲ್ಪನೆಯ “ ಪ್ರಧಾನ್ ಮಂತ್ರಿ ಆವಾಸ್ ಯೋಜನೆಯನ್ನು 2015ರ ಜೂನ್ ನಲ್ಲಿ ಪ್ರಾರಂಭಿಸಲಾಗಿತ್ತು. ಪಿಎಂಎವೈ ಯೋಜನೆಯು ದೇಶದಲ್ಲಿನ ವಸತಿ ರಹಿತ ಜನರ ಜೀವನವನ್ನು ಉತ್ತಮಗೊಳಿಸುವ ಯೋಜನೆಯಾಗಿದೆ. ಕಡಿಮೆ ಆದಾಯ ಹೊಂದಿದ, ಮಧ್ಯಮ ವರ್ಗದ ಹಾಗೂ ಆರ್ಥಿಕವಾಗಿ ದುರ್ಬಲವಾದ ಸುಮಾರು ಎರಡು ಕೋಟಿ ಜನರಿಗೆ ಮನೆ ನಿರ್ಮಿಸಿ ಕೊಡುವ ಗುರಿ ಈ ಯೋಜನೆಯದ್ದಾಗಿತ್ತು.

2)ಉಜ್ವಲಾ ಯೋಜನೆ: ಪ್ರಧಾನ್ ಮಂತ್ರಿ ಉಜ್ವಲಾ ಯೋಜನೆ ಎಂಬುದು ನರೇಂದ್ರ ಮೋದಿ ಸರ್ಕಾರದ ಮಹತ್ವದ ಹೆಜ್ಜೆಯಾಗಿದೆ. ಮಹಿಳೆಯರ ಮತ್ತು ಮಕ್ಕಳ ಆರೋಗ್ಯವನ್ನು ಕಾಪಾಡಲು ಶುದ್ಧ ಅಡುಗೆ ಇಂಧನವನ್ನು ಒದಗಿಸುವ ಯೋಜನೆಯಾಗಿದೆ. ಅಷ್ಟೇ ಅಲ್ಲ ಯಾವುದೇ ಭದ್ರತಾ ಠೇವಣಿ ಇಲ್ಲದೆ ಎಲ್ ಪಿಜಿ ಪಡೆಯುವ ವ್ಯವಸ್ಥೆ ಇದಾಗಿದೆ. 2016ರ ಮೇ 1ರಂದು ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದರು. ಮುಂದಿನ ಮೂರು ವರ್ಷಗಳಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಸುಮಾರು 5 ಕೋಟಿ ಕುಟುಂಬಗಳಿಗೆ ಎಲ್ ಪಿಜಿ ಸಂಪರ್ಕ ನೀಡಲಾಗುತ್ತದೆ.

3)ಜನ-ಧನ್ ಯೋಜನೆ: 2014ರ ಆಗಸ್ಟ್ 15ರಂದು ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ್ ಮಂತ್ರಿ ಜನ್ ಧನ್ ಯೋಜನೆಯನ್ನು ಘೋಷಿಸಿದ್ದರು. ಆಗಸ್ಟ್ 28ರಂದು ಯೋಜನೆಯನ್ನು ಪ್ರಾರಂಭಿಸಿದ್ದು, ಸ್ಕಾಲರ್ ಶಿಪ್, ಸಬ್ಸಿಡಿ, ಪಿಂಚಣಿ ಹಾಗೂ ಕೋವಿಡ್ ಪರಿಹಾರ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ಯೋಜನೆ ಇದಾಗಿದೆ. ಈ ಯೋಜನೆಯಡಿ ಒಟ್ಟು 44 ಕೋಟಿಗೂ ಹೆಚ್ಚು ಖಾತೆಗಳಿದ್ದು, ಈವರೆಗೆ 1,50,939 ಕೋಟಿ ರೂಪಾಯಿ ಹಣದ ವಹಿವಾಟು ನಡೆದಿದೆ.

4)ಕಿಸಾನ್ ಸಮ್ಮಾನ್ ನಿಧಿ: ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಶೇ.100ರಷ್ಟು ಧನಸಹಾಯ ನೀಡುವ ಭಾರತ ಸರ್ಕಾರದ ಯೋಜನೆಯಾಗಿದೆ. ಈ ಯೋಜನೆ ಮೂಲಕ ಪ್ರತಿ ವರ್ಷ ಅರ್ಹ ಕೃಷಿಕರಿಗೆ ಆರು ಸಾವಿರ ರೂ. ಗೌರವ ಧನ ನೀಡಲಾಗುತ್ತಿದೆ. ಈ ಹಣವು ತಲಾ 2 ಸಾವಿರ ರೂ.ಗಳಂತೆ 3 ಕಂತುಗಳಲ್ಲಿ ಕೃಷಿಕರ ಖಾತೆಗೆ ಜಮಾ ಆಗುತ್ತದೆ. ಕೇಂದ್ರ ಸರ್ಕಾರ ನೀಡುವ ಹಣ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ.

5) ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ: 2020ರ ಮಾರ್ಚ್ ನಲ್ಲಿ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ಘೋಷಿಸಲಾಗಿತ್ತು. ಇದು ಕೋವಿಡ್ ಸೋಂಕಿಗೆ ತುತ್ತಾಗುವ ಬಡವರಿಗೆ ಧನಸಹಾಯ ನೀಡುವ ಯೋಜನೆಯಾಗಿದ್ದು, ಸುಮಾರು 1.70 ಲಕ್ಷ ಕೋಟಿ ರೂಪಾಯಿಯ ಯೋಜನೆಯಾಗಿದೆ. ಈ ಯೋಜನೆಯಿಂದ ಆಹಾರ ಮತ್ತ ಹಣ ಕೈಯಲ್ಲಿದ್ದರೆ ಬಡತನದಿಂದ ಹೊರಬರಲು ಹಾಗೂ ಯಾವುದೇ ಅಗತ್ಯ ವಸ್ತುಗಳನ್ನು ಖರೀದಿಸಲು ತೊಂದರೆ ಅನುಭವಿಸಬೇಕಾಗಿಲ್ಲ.

6)ಜಲ ಜೀವನ್ ಮಿಷನ್: ಜಲ ಜೀವನ್ ಮಿಷನ್ ಯೋಜನೆಯು 2024ರ ವೇಳೆಗೆ ಗ್ರಾಮೀಣ ಭಾರತದ ಎಲ್ಲಾ ಮನೆಗಳಿಗೆ ವೈಯಕ್ತಿಕವಾಗಿ ಕುಡಿಯುವ ನೀರನ್ನು ಒದಗಿಸುತ್ತದೆ. ಈ ಯೋಜನೆಯು ಮೂಲಭೂತ ಅವಶ್ಯಕತೆಗಳನ್ನು ಕಡ್ಡಾಯವಾಗಿ ಕಾರ್ಯಗತಗೊಳಿಸಲಿದೆ. ಜಲ ಜೀವನ್ ಮಿಷನ್ ಅನ್ನು ಸಮುದಾಯವನ್ನು ಸಂಪರ್ಕಿಸುವ ವಿಧಾನವನ್ನು ಆಧರಿಸಿದ್ದು, ಇದು ನೀರಿನ ಕುರಿತ ಪೂರಕ ಮಾಹಿತಿ ಮತ್ತು ಶಿಕ್ಷಣ, ಸಂವಹನವನ್ನು ಒಳಗೊಂಡಿರುತ್ತದೆ.

7)ಆಯುಷ್ಮಾನ್ ಭಾರತ್ ಯೋಜನೆ: 2017ರಲ್ಲಿ ರಾಷ್ಟ್ರೀಯ ಆರೋಗ್ಯ ನೀತಿಯಡಿ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್ ಅಥವಾ ಆರೋಗ್ಯಕರ ಭಾರತ ಎಂಬ ವಿಶಿಷ್ಟ ಯೋಜನೆಯನ್ನು ಜಾರಿಗೊಳಿಸಿದ್ದರು. ಇದು ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆ. ಈ ಯೋಜನೆಯಡಿ ಪ್ರತಿ ಬಡ ಕುಟುಂಬಕ್ಕೆ 5 ಲಕ್ಷ ರೂಪಾಯಿ ವಿಮಾ ಭದ್ರತೆ ಲಭ್ಯವಾಗಲಿದ್ದು, ಈಗಾಗಲೇ ದೇಶದಲ್ಲಿ ಸುಮಾರು 10 ಕೋಟಿಗೂ ಹೆಚ್ಚು ಬಡವರು ಯೋಜನೆಯ ಲಾಭ ಪಡೆದಿದ್ದಾರೆ.

ಆಯುಷ್ಮಾನ್ ಯೋಜನೆಯ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತದೆ. ಆಯುಷ್ಮಾನ್ ಭಾರತ್, ಪ್ರಾಥಮಿಕ, ಮಾಧ್ಯಮಿಕ ಮತ್ತು ತೃತೀಯ ಹಂತದಲ್ಲಿ ಆರೋಗ್ಯವನ್ನು ಸಮಗ್ರವಾಗಿ ಪರಿಹರಿಸುವ ಗುರಿಯನ್ನು ಹೊಂದಿದೆ.

8)ಸ್ವಚ್ಛ ಭಾರತ್ ಮಿಷನ್: 2014ರ ಅಕ್ಟೋಬರ್ 2ರಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ್ ಮಿಷನ್ ಯೋಜನೆಗೆ ಚಾಲನೆ ನೀಡಿದ್ದರು. ದೇಶಾದ್ಯಂತ ತ್ಯಾಜ್ಯ ನಿರ್ಮೂಲನೆ, ಶೌಚಾಲಯ ನಿರ್ಮಾಣದ ಗುರಿಯನ್ನು ಈ ಯೋಜನೆ ಹೊಂದಿದೆ. ಸ್ವಚ್ಛ ಭಾರತ್ ಅಭಿಯಾನದಡಿ ದೇಶದ ಎಲ್ಲಾ ಗ್ರಾಮಗಳು, ಗ್ರಾಮ ಪಂಚಾಯ್ತಿಗಳು, ಜಿಲ್ಲೆಗಳು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 2019ರ ಅಕ್ಟೋಬರ್ 2ರೊಳಗೆ ಬಯಲು ಶೌಚ ಮುಕ್ತ ಎಂದು ಘೋಷಿಸಿಕೊಂಡಿತ್ತು.

News banner

Leave a Reply

Your email address will not be published.

ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ
error: Content is protected !!