ಸರ್ಕಾರಿ ಕನ್ನಡ ಶಾಲೆಗಳ ವಿಲೀನಕ್ಕೆ ಖಂಡನೆ: ಕರವೇ – ಪಂಪಣ್ಣ ನಾಯಕ

ಗಂಗಾವತಿ: ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಸಚಿವರು ರಾಜ್ಯದ ೧೩೮೦೦ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಮುಂದಾದ ವಿಷಯವಾಗಿ ಪತ್ರಿಕೆಯಲ್ಲಿ “೧೩೮೦೦ ಸರ್ಕಾರಿ ಶಾಲೆಗಳ ವಿಲೀನ?” ಎಂಬ ಶೀರ್ಷಿಕೆಯಲ್ಲಿ ಸುದ್ದಿ ಬಿತ್ತರವಾಗಿದ್ದು, ಅದರ ವಿರುದ್ಧ ರಾಯಭಾಗ ತಾಲೂಕಿನ ನಿಡಗುಂದಿ ಅಂಬೇಡ್ಕರ್ ನಗರದ ಸ.ಹಿ.ಪ್ರಾ ಶಾಲೆಯ ಸಹಶಿಕ್ಷಕ ವೀರಣ್ಣ ತಿಪ್ಪಣ್ಣ ಮಡಿವಾಳ ಇವರು ಶಿಕ್ಷಣ ಸಚಿವರ ಹೇಳಿಕೆಯ ಪರವಿರೋಧವಾಗಿ ಪತ್ರಿಕೆಯಲ್ಲಿ “ಅದು ೧೩೮೦೦ ಸರ್ಕಾರಿ ಶಾಲೆಗಳ ವಿಲೀನ ಅಲ್ಲ, ಅಷ್ಟೂ ಶಾಲೆಗಳ ಹತ್ಯಾಕಾಂಡ.. ಸರಕಾರಿ ಶಾಲೆ ಮಕ್ಕಳ ಭವಿಷ್ಯದ ಮಾರಣಹೋಮ” ಎಂಬ ಶೀರ್ಷಿಕೆಯಡಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸದರಿ ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಿಸಲು ಸರ್ಕಾರ ಮುಂದಾಗಿದ್ದು ತೀವ್ರ ಖಂಡನೀಯವಾಗಿದೆ ಎಂದು ಕರವೇ ಕೊಪ್ಪಳ ಜಿಲ್ಲಾಧ್ಯಕ್ಷರಾದ ಪಂಪಣ್ಣ ನಾಯಕ ಪ್ರಕಟಣೆಯಲ್ಲಿ ಕಿಡಿಕಾರಿದರು.

ಅವರು ತಹಶೀಲ್ದಾರರ (ಶಿರಸ್ತೇದಾರ ನಾಗವೇಣಿ) ಮುಖಾಂತರ ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಮಾತನಾಡುತ್ತಿದ್ದರು. ಸದರಿ ಶಿಕ್ಷಕರ ಹೇಳಿಕೆಯು ಸರ್ಕಾರಿ ಕನ್ನಡ ಶಾಲೆಗಳ ಉಳಿವಿನ ಪರವಾಗಿ ಇದ್ದು, ಸದರಿ ಶಿಕ್ಷಕರ ವಿರುದ್ಧ ಸರ್ಕಾರ ಯಾವುದೆ ಕ್ರಮಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿಕೊಳ್ಳುತ್ತಿದ್ದು, ಅಲ್ಲದೇ ೧೩೮೦೦ ಸರ್ಕಾರಿ ಶಾಲೆಗಳ ವಿಲೀನ ಪ್ರಕ್ರಿಯೆ ನಿಜವೇ ಆದಲ್ಲಿ ನಮ್ಮ ಕರವೇ ತೀವ್ರ ಖಂಡಿಸುತ್ತದೆ. ಅಲ್ಲದೇ ಕರ್ನಾಟಕದಲ್ಲಿ ಸಾಕಷ್ಟು ಕನ್ನಡ ಶಾಲೆಗಳು ಈಗಾಗಲೇ ಅವನತಿ ಅಂಚಿನಲ್ಲಿವೆ. ಉದಾಹರಣೆಗೆ ಹೇಳಬೇಕೆಂದರೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿರುವ ಸರಕಾರಿ ಬಾಲಕರ ಜೂನಿಯರ್ ಪ್ರೌಢಶಾಲೆ ಕಟ್ಟಡವು ತುಂಬಾ ಶಿಥಿಲಗೊಂಡು ಪೂರ್ಣ ಪ್ರಮಾಣದ ಅವನತಿ ಅಂಚಿನಲ್ಲಿದೆ. ಇದೇ ರೀತಿ ರಾಜ್ಯದಲ್ಲಿ ಎಷ್ಟೋ ಕನ್ನಡ ಶಾಲೆಗಳು ಅವನತಿ ಅಂಚಿನಲ್ಲಿವೆ. ಸರ್ಕಾರ ಈ ಶಾಲೆಗಳನ್ನು ಅಭಿವೃದ್ಧಿಪಡಿಸುವುದನ್ನು ಬಿಟ್ಟು, ವಿಲೀನಗೊಳಿಸುವ ಪ್ರಕ್ರಿಯೆ ಎಷ್ಟು ಸರಿ?

ಕೂಡಲೇ ಸರ್ಕಾರ ಸರ್ಕಾರಿ ಕನ್ನಡ ಶಾಲೆಗಳ ವಿಲೀನ ಪ್ರಕ್ರಿಯೆಗೆ ಮುಂದಾಗದೇ, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಒತ್ತು ಕೊಡಬೇಕು. ಅಂದಾಗ ಮಾತ್ರ ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆ ಉಳಿಯಲು ಸಾಧ್ಯವಾಗಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಶಿಕ್ಷಣ ಸಚಿವರ ಹೇಳಿಕೆಯ ಪ್ರತ್ಯುತ್ತರ ಹೇಳಿಕೆ ನೀಡಿದ ಶಿಕ್ಷಕನ ಮೇಲೆ ಯಾವುದೇ ಕ್ರಮಕ್ಕೆ ಮುಂದಾಗದೇ ಅವನತಿ ಅಂಚಿನ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಸರ್ಕಾರಕ್ಕೆ ನಮ್ಮ ಕರವೇ ಒತ್ತಾಯಿಸುತ್ತಾ ಮನವಿ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರವೇ ಪದಾಧಿಕಾರಿಗಳಾದ ಹುಸೇನಸಾಬ್, ಶಂಕರ ಪೂಜಾರಿ, ಉಮೇಶ ಬಂಡಿ, ಶರಣು ನಾಯಕ ಆಟೋ, ಪುಂಡಲಿಕ ಬಿಸಲದನ್ನಿಸ, ಅಂಜಿ ಪೂಜಾರಿ, ಹುಲುಗಪ್ಪ, ಭರಮಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published.

ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಕೊಪ್ಪಳದ ನಾಲ್ಕು ವರ್ಷದ ಬಾಲಕ ಅಗಸ್ತ್ಯನಿಗೆ ಒಲಿದ ಒಲಿದ ನೊಬೆಲ್ ಪ್ರಶಸ್ತಿ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ಎಲ್ಲಾ ಪ್ರಕರಣದಲ್ಲೂ ಅಟ್ರಾಸಿಟಿ ಕಾಯ್ದೆ ಬೇಡ: ಸಂತ್ರಸ್ಥ ದಲಿತನಾದ ಮಾತ್ರಕ್ಕೆ ಕಾಯಿದೆ ಅನ್ವಯಿಸಲ್ಲ; ಹೈಕೋರ್ಟ್ ಮಹತ್ವದ ಆದೇಶ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ - ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ
error: Content is protected !!