ನೀರಾವರಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ; ಶಾಸಕ ರಾಘವೇಂದ್ರ ಹಿಟ್ನಾಳ್ ಸುದ್ದಿಗೋಷ್ಠಿ

– ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮಾಹಿತಿ:
ಕೊಪ್ಪಳ: ತಾಲೂಕಿನ ಕೆರೆಹಳ್ಳಿ ಮತ್ತು 103 ಜನವಸತಿಗಳಿಗೆ ಜನಜೀವನ ಮಿಷನ್ ಅಡಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ 260 ಕೋಟಿ ರೂಪಾಯಿ ವೆಚ್ಚದಲ್ಲಿ ಸೌಲಭ್ಯ ಕಲ್ಪಿಸುವ ಯೋಜನೆಗೆ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ಜನರ ಶುದ್ಧ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಲಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಾಗಿ ಅಂತರ್ಜಲ ಮೂಲವನ್ನು ಅವಲಂಬಿಸಿದೆ.
ಹಳ್ಳಿಗಳಲ್ಲಿ ನೀರಿನ ಕೊರತೆಯಿದೆ. ಆದ್ದರಿಂದ, ತುಂಗಭದ್ರಾ ಜಲಾಶಯದ ಹಿನ್ನೀರನ್ನು ಜಲಮೂಲವನ್ನಾಗಿ ಪರಿಗಣಸಿ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ರೂಪಿಸಲಾಗಿದೆ.
ಕೇಂದ್ರ ಪುರಸ್ಕೃತ ಜಲ ಜೀವನ್ ಮಿಷನ್ ಯೋಜನೆಯಡಿ ಕೇಂದ್ರ ಹಾಗೂ ರಾಜ್ಯ ಸರಕಾರದ ಅನುದಾನದ ಅಡಿಯಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಯೋಜನೆಗೆ ರಾಜ್ಯ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸುಮಾರು 260 ಕೋಟಿ ರೂಪಾಯಿ ಯೋಜನೆ ಇದಾಗಿದೆ. ಶೀಘ್ರವೇ ಟೆಂಡರ್ ಕರೆಯಲಾಗುವುದು. ಗುತ್ತಿಗೆದಾರರು 18 ತಿಂಗಳ ಕಾಲಮಿತಿ ಒಳಗೆ ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. 5 ವರ್ಷಗಳ ಕಾಲ ಯೋಜನೆಯ ಸಂಪೂರ್ಣ ನಿರ್ವಹಣೆ ಮತ್ತು ಕಾರ್ಯಾಚರಣೆ ಮಾಡಬೇಕು ಎಂಬ ಷರತ್ತು ವಿಧಿಸಲಾಗಿದೆ. ಪ್ರತಿ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಿಸಿ ಅದರ ಮೂಲಕ ನೀರು ಸರಬರಾಜು ಮಾಡಲಾಗುವುದು ಎಂದು ಶಾಸಕ ಹಿಟ್ನಾಳ್ ಹೇಳಿದರು.
ನೀರಾವರಿ ಯೋಜನೆಗೆ ರಾಜ್ಯ ಸರಕಾರ ಸಹಕಾರ ನೀಡುತ್ತಿಲ್ಲ. ಆದ್ದರಿಂದ ಕೆಲವು ಯೋಜನೆಗಳು ಅಪೂರ್ಣವಾಗಿವೆ. ಮುಂದಿನ ದಿನಗಳಲ್ಲಿ ಯೋಜನೆ ಪೂರ್ಣಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದರು.

ರಾಜ್ಯ ಸರಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರ ಕ್ಷೇತ್ರಕ್ಕೆ ತಲಾ 50 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರತಿಪಕ್ಷಗಳ ಶಾಸಕರ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಅನುದಾನ ನೀಡಲಾಗಿದೆ. ಈ ತಾರತಮ್ಯ ನೀತಿ ಸರಿಯಲ್ಲ ಎಂದು ಕಿಡಿಕಾರಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಜುಲ್ಲು ಖಾದ್ರಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೂಳಪ್ಪ ಹಲಗೇರಿ,ಜಿಲ್ಲಾ ಕಾಂಗ್ರೆಸ್ ವಕ್ತಾರ ರವಿ ಕುರುಗೋಡು ಇದ್ದರು.

Leave a Reply

Your email address will not be published.

ಪಿಎಫ್ ಐ ಸೇರಿ ಹಲವು ಸಂಘಟನೆಗಳು ಭಾರತದಲ್ಲಿ ಬ್ಯಾನ್ - ಪಿಎಫ್ ಐ ಸೇರಿ ಹಲವು ಸಂಘಟನೆಗಳು ಭಾರತದಲ್ಲಿ ಬ್ಯಾನ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ನಮ್ಮ ವಿರುದ್ಧ ಷಡ್ಯಂತ್ರ ನಡೆದಿದೆ; ಸಿ ಎಫ್ ಐ ರಾಜ್ಯ ಕಾರ್ಯದರ್ಶಿ ಸರ್ಪರಾಜ್ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ - ಕೊಪ್ಪಳದಲ್ಲಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದ (NIA) ಎನ್ಐಎ
error: Content is protected !!