ಕೊಪ್ಜಳ: ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಾಣಿಕೆಗೆ ಹಾಗೂ ಕಾರಟಗಿ ತಾಲ್ಲೂಕಾಧ್ಯಕ್ಷರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಕಾರಟಗಿಯ ಹಸೀಲ್ದಾರರಾದ ಮಾನ್ಯ ಎಮ್. ಬಸವರಾಜ ಅವರಿಗೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮತ್ತು ಅಕ್ರಮ ದಂದೆ ತಡೆಗಟ್ಟಲು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಬಸವನಗೌಡ ಪೊಲೀಸ್ ಪಾಟೀಲ್, ಕೊಪ್ಪಳ ಜಿಲ್ಲಾ ಅಧ್ಯಕ್ಷರಾದ ಬಿ.ಗಿರಿಶಾನಂದ ಜ್ಞಾನಸುಂದರ, ಕೊಪ್ಪಳ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಹನುಮಂತ ಬೆಸ್ತರ್, ಜಿಲ್ಲಾ ಗೌರವ ಅಧ್ಯಕ್ಷರಾದ ಸಂಜಯ ಕಟವಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥಗೌಡ ಆನೆಗೊಂದಿ, ಕನಕಗಿರಿ ತಾಲೂಕ ಅಧ್ಯಕ್ಷರಾದ ಅನಿಲ ಬಿಜ್ಜಳ, ಗಂಗಾವತಿ ತಾಲೂಕ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಸಿಂಧನೂರು ತಾಲೂಕ ಅಧ್ಯಕ್ಷರಾದ ಗಂಗಣ್ಣ ಡಿಶ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ವೀರಭದ್ರಪ್ಪ ಪಲ್ಲೇದ್, ಕುಕನೂರು ತಾಲೂಕು ಯುವ ಘಟಕದ ಅಧ್ಯಕ್ಷರಾದ ಆನಂದ ಬಂಡಿ, ಕನಕಗಿರಿ ತಾಲ್ಲೂಕು ಯುವ ಘಟಕ ಅಧ್ಯಕ್ಷರಾದ ಮಂಜುನಾಥ, ಕೊಪ್ಪಳ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮೊಗಿನ, ಕಾರಟಗಿ ತಾಲ್ಲೂಕು ಉಪಾಧ್ಯಕ್ಷ ದುರ್ಗೇಶ, ಗಂಗಾವತಿ ನಗರ ಅಧ್ಯಕ್ಷ ಯಮನೂರ ಭಟ್, ಹಾಗೂ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು.