ರಾಜ್ಯ ಸುದ್ದಿ

ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಅಂಗನವಾಡಿಗಳಲ್ಲಿ ಎಲ್ಕೆಜಿ ಯುಕೆಜಿ ಶಿಕ್ಷಣ

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಮಣಿದ ಸರ್ಕಾರ ಸಹಮತ ವ್ಯಕ್ತಪಡಿಸಿದ ಸಿಎಂ

ಬೆಂಗಳೂರು: ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಸಿಎಂ ಸಮ್ಮತಿ ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ಅಂಗನವಾಡಿ

ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ (LKG, UKG) ಶಿಕ್ಷಣ ನೀಡುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ತೀರ್ಮಾನಿಸಲಾಗಿದ್ದು, ಗುಣಮಟ್ಟದ ಶಿಕ್ಷಣ ಹಾಗೂ ಪೌಷ್ಠಿಕ ಆಹಾರ ನೀಡುವುದೇ ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಮುಖ್ಯಮಂತ್ರಿಯವರು ಸಹಮತ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಇಲಾಖೆಐ ಮೂಲಕವೇ ಸಮವಸ್ತ್ರ, ಪುಸ್ತಕ, ಬ್ಯಾಗ್ ನೀಡಲು ತೀರ್ಮಾನಿಸಲಾಗಿದೆ. ಜೊತೆಗೆ ಶಾಲೆಗಳ ಮಾದರಿಯಲ್ಲೆ ವರ್ಗಾವಣೆ ಪತ್ರ (ಟಿಸಿ) ನೀಡಲು ಕ್ರಮವಹಿಸಲಾಗುವುದು ಎಂದರು.

ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಕಲಿಸುವ ಚಿಂತನೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅಂಗನವಾಡಿ

ಪೂರ್ವಪ್ರಾಥಮಿಕ ಶಿಕ್ಷಣ ಆರಂಭಿಸುವ ಸಂಬಂಧ ಈಗಾಗಲೇ ಅಂಗನವಾಡಿ ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಾಗಿದೆ. ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಶಿಕ್ಷಕಿಯರ ಪೈಕಿ ೯ ಸಾವಿರ ಮಂದಿ ಪದವಿ ಪಡೆದವರಾಗಿದ್ದರೆ, ಒಂದೂವರೆ ಸಾವಿರಕ್ಕಿಂತಲೂ ಹೆಚ್ಚು ಮಂದಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹೀಗಾಗಿ, ಗುಣಮಟ್ಟದ ಶಿಕ್ಷಣ ನೀಡಿಕೆಗೆ ಯಾವುದೇ ಸಮಸ್ಯೆ ಆಗದು ಎಂದು ಹೇಳಿದ ಸಚಿವರು, ಯಾರನ್ನೂ ಕೆಲಸದಿಂದ ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯಲ್ಲಿ ಶಾಲಾ ಮತ್ತು ಪ್ರಾಥಮಿಕ ಶಿಕ್ಷಣದ ಸಚಿವ ಮಧು ಬಂಗಾರಪ್ಪ‌, ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚೆಗೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಕಲ್ಯಾಣ ಕರ್ನಾಟಕ ವಿಭಾಗ ಹಾಗೂ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದಿತ್ತು. ತಜ್ಞರ ಸಮಿತಿ ರಚಿಸುವಂತೆ ಸಾಲು ಸಾಲು ಪ್ರತಿಭಟನೆ ಅಧಿಕಾರಿಗಳೊಟ್ಟಿಗೆ ಸಭೆ ನಡೆಸಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button