
ಕೊಪ್ಪಳ :- ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಅವರ ಪುತ್ರ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಈ.ಕಾಂತೇಶ್ ಅವರು ದಿನಾಂಕ 18-10-2024 ಇಂದು ಕೊಪ್ಪಳಕ್ಕೆ ಆಗಮಿಸುತ್ತಿದ್ದಾರೆ. ಕೊಪ್ಪಳ ನಗರದ ಹೊಸಪೇಟೆ ರಸ್ತೆಯಲ್ಲಿರುವ ಶೋಭಾ ಡೇ ಹೋಟೆಲ್ ನಲ್ಲಿ ಜರುಗುವ ಕುರುಬ ಸಮಾಜದ ಸಂಘಟನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಸಭೆಯಲ್ಲಿ ಕೊಪ್ಪಳ ಜಿಲ್ಲೆ ಹಾಗೂ ತಾಲೂಕು ಹಾಲುಮತ ಮಹಾಸಭಾ ಸಂಘಟನೆ ಪದಾಧಿಕಾರಿಗಳು ರಾಯಣ್ಣ ಯುವ ಬ್ರಿಗೇಡ್ ಪದಾಧಿಕಾರಿಗಳು, ತಾಲೂಕು ಕುರುಬ ಸಮಾಜ ಸಂಘಟನೆ ಪದಾಧಿಕಾರಿಗಳು ಸಮಾಜದ ವಿವಿಧ ಸಂಘಟನೆಗಳು ಸಭೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಹಾಲುಮತ ಮಹಾ ಸಭಾ ಪ್ರಧಾನ ಕಾರ್ಯದರ್ಶಿ ಗವಿರಾಜ್ ಹಾಲವರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ….




