ಕೊಪ್ಪಳಜಿಲ್ಲಾ ಸುದ್ದಿಗಳು

ಮಧುಮೇಹ ಖಾಯಿಲೆಯನ್ನು ತಡೆಗಟ್ಟುವಲ್ಲಿ ವೈದ್ಯಾಧಿಕಾರಿಗಳ ಪಾತ್ರ ಬಹು ಮುಖ್ಯ: ಡಾ.ಲಿಂಗರಾಜು.ಟಿ

ಕೊಪ್ಪಳ: ಮಧುಮೇಹ ಖಾಯಿಲೆಯ ನಿಯಂತ್ರಣ ಮತ್ತು ತಡೆಗಟ್ಟುವಲ್ಲಿ ವೈದ್ಯಾಧಿಕಾರಿಗಳ ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳ ಪಾತ್ರ ಬಹು ಮುಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು.ಟಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ ಹಾಗೂ ಎನ್.ಸಿ.ಡಿ. ಕೋಶ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಶುಕ್ರವಾರದಂದು ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ವಿಶ್ವ ಮಧುಮೇಹ ದಿನಾಚರಣೆಯ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ ಇದರ ಉದ್ದೇಶ ಮಧುಮೇಹ ಖಾಯಿಲೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಚಿಕಿತ್ಸೆ ನೀಡುವುದಾಗಿದೆ. ಜೀವನಶೈಲಿಯಿಂದ ಬರುವ ರೋಗಗಳಲ್ಲಿ ಮಧುಮೇಹ ಕೂಡ ಒಂದಾಗಿದ್ದು, ಜೀವನಶೈಲಿಯನ್ನು ಬದಲಾವಣೆ ಮಾಡಿ ಪೌಷ್ಠಿಕ ಆಹಾರ ಸೇವನೆ, ದೈಹಿಕ ಚಟುವಟಿಕೆಯಿಂದ ಇರುವುದು. 30 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಪ್ರತಿ ವರ್ಷಕ್ಕೆ ಒಂದು ಬಾರಿ ರಕ್ತ ಪರೀಕ್ಷೆ ಮಾಡಿಸುವಂತೆ ಅರಿವು ಮೂಡಿಸುವುದು ಹಾಗೂ ಪತ್ತೆಯಾದ ಮಧುಮೇಹ ರೋಗಿಗಳಿಗೆ ಚಿಕಿತ್ಸೆ ನೀಡುವುದು ಎಲ್ಲಾ ವೈದ್ಯಾಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಂದಕುಮಾರ್ ಹೆಚ್. ಪ್ರಸ್ತಾವಿಕವಾಗಿ ಮಾತನಾಡಿ ಮಧುಮೇಹ ಖಾಯಿಲೆ ಕುರಿತು ಮಧುಮೇಹ ಮತ್ತು ಯೋಗಕ್ಷೇಮ ಎಂಬ ಘೋಷ ವಾಕ್ಯದೊಂದಿಗೆ ಈ ವರ್ಷ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಹಾಗೂ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಕಾರ್ಯಕ್ರಮದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಮತ್ತು ತಪಾಸಣಾ ಶಿಬಿರ ಹಮ್ಮಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮಧುಮೇಹಿಗಳು ಸರಿಯಾಗಿ ಚಿಕಿತ್ಸೆ ಪಡೆಯುವುದರ ಮೂಲಕ ಖಾಯಿಲೆಯನ್ನು ದೂರವಿಡಬಹುದು. ಜೀವನ ಶೈಲಿ ರೋಗಗಳು ಇಂದಿನ ವೈದ್ಯಲೋಕಕ್ಕೆ ಸವಾಲಾಗಿವೆ ಮನುಷ್ಯ ಆಧುನಿಕನಾದಂತೆ ಆತನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥö್ಯಕ್ಕೆ ಹೆಚ್ಚಿನ ತೊಂದರೆಗಳು ಕಾಣಿಸಿಕೊಂಡು ಆಹಾರ ಕ್ರಮದಲ್ಲಿನ ಬದಲಾವಣೆ, ದೈಹಿಕ ಚಟುವಟಿಕೆ ಇಲ್ಲದ ಜೀವನ ಹಾಗೆ ಮಾನಸಿಕ ಒತ್ತಡದಿಂದಾಗಿ ಅನೇಕ ರೋಗಗಳು ಶಾರೀರಿಕ ಹಾಗೂ ಮಾನಸಿಕವಾಗಿ ದಾಳಿ ಮಾಡುತ್ತವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರವೀಂದ್ರನಾಥ ಎಮ್.ಹೆಚ್, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಶಶಿಧರ, ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ.ಪ್ರಕಾಶ ಹೆಚ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ವೆಂಕಟೇಶ, ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ಮೆಡಿಸಿನ್ ಪ್ರೋಫೆಸರ್À ಡಾ.ಶಿವಕುಮಾರ ಸೇರಿದಂತೆ ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ಕಾರಗೃಹದಲ್ಲಿ ಜಾಗೃತಿ ಕಾರ್ಯಕ್ರಮ: ನವೆಂಬರ್ 14 ರಂದು ಜಿಲ್ಲಾ ಕಾರಗೃಹದಲ್ಲಿ ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರವನ್ನು ನಡೆಸಿ ನ್ಯೂನತೆಯುಳ್ಳವರಿಗೆ ಚಿಕಿತ್ಸೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಪರ್ವತಗೌಡ ದಂತ ವೈದ್ಯಾಧಿಕಾರಿ ಡಾ.ಮಾರುತಿ, ಜಿಲ್ಲಾ ಎನ್.ಸಿ.ಡಿ. ಕಾರ್ಯಕ್ರಮ ಸಂಯೋಜಕಿ ಡಾ.ಜಯಶ್ರೀ ಕಮತೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ, ಜಿಲ್ಲಾ ಕಾರಾಗೃಹದ ಅಧೀಕ್ಷಕ ಶ್ರೀ ರಾಮು ಸೇರಿದಂತೆ ಇತರ ಸಿಬ್ಬಂದಿಗಳು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button