ಬಸವರಾಜ ರಾಯರೆಡ್ಡಿಗೆ ಸಂಪುಟ ದರ್ಜೆ ಸ್ಥಾನ.. ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರಾಗಿ ನೇಮಕ
ಕೊಪ್ಪಳ.
ಯಲಬುರ್ಗಾ ಶಾಸಕ ಬಸವರಾಯ ರಾಯರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಿ ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲಾಗಿದೆ.
ಶುಕ್ರವಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧಿನ ಕಾರ್ಯದರ್ಶಿ ಟಿ.ಎ.ಮೊಹ್ಮದ್ ಅಕ್ಬರ್ ಅವರು ಅಧಿಕೃತವಾಗಿ ಆದೇಶ ಮಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ ಕೊಪ್ಪಳ ಜಿಲ್ಲೆಯಷ್ಟೆ ಅಲ್ಲ ರಾಜ್ಯದಲ್ಲಿ ಪ್ರಭಾವ ಹೊಂದಿದ್ದರು ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಕಾಂಗ್ರೆಸ್ ಸರಕಾರದಲ್ಲಿ ಸಚಿವ ಸ್ಥಾನ ನೀಡಿದ್ದಿಲ್ಲ. ಹೀಗಾಗಿ ರಾಯರೆಡ್ಡಿ ಅವರು ತೆರೆ ಮರೆಯಲ್ಲಿ ಸರಕಾರ ಮತ್ತು ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಅಸಮಾಧಾನ ಹೊರ ಹಾಕುತ್ತಿದ್ದರು. ಮತ್ತು ಇತ್ತೀಚಿಗೆ ರಾಜಕಾರಣದ ಬಗ್ಗೆಯೇ ಭ್ರಮನಿರನಗೊಂಡಂತೆ ಹೇಳಿಕೆ ನೀಡುತ್ತಿದ್ದರು. ಇದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರಕಾರಕ್ಕೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಮುಜರವಾಗುತ್ತಿತ್ತು. ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಕಾಂಗ್ರೆಸ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿತು. ರಾಯರೆಡ್ಡಿ ಅವರನ್ನು ಕಡೆಗಣಿಸಿದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಲಿದೆ ಎಂಬುದನ್ನು ಅರಿತ ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅವರಿಗೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರನ್ನಾಗಿ ನೇಮಕ ಮಾಡಿ ಸಂಪುಟ ದರ್ಜೆಯ ಸಚಿವ ಸ್ಥಾನಮಾನ ನೀಡಿ ಅಧಿಕಾರ ನೀಡಲಾಗಿದೆ. ಬಸವರಾಯ ರಾಯರೆಡ್ಡಿ ಈ ಸ್ಥಾನ ವಹಿಸಿಕೊಂಡು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವ ರೀತಿ ಬಲ ತುಂಬುತ್ತಾರೆ ಎಂಬುದು ಕಾದು ನೋಡಬೇಕಿದೆ.