ಅಕ್ರಮ ಪಡಿತರ ಅಕ್ಕಿ ಸಾಗಾಟಕ್ಕೆ ಕ್ರಮ ವಹಿಸಿ: ದೊಡ್ಡನಗೌಡ
ಕೊಪ್ಪಳ ಡಿಸೆಂಬರ್ 08: ಸರಕಾರದ ಪಡಿತರ ಅಕ್ಕಿಸಾಗಾಟ ಮಾಡುವ ವ್ಯಕ್ತಿಗಳ ಮೇಲೆ ಕ್ರಮ ವಹಿಸಿ ಎಂದು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್ ಹೇಳಿದರು. ಅವರು ಶನಿವಾರ ಮಧ್ಯಾಹ್ನ ಕೊಪ್ಪಳ ನಗರದ ಜಿಲ್ಲಾ ಪಂಚಾಯತ ಜೆ.ಹೆಚ್ ಪಾಟೇಲ್ ಸಭಾಂಗಣದಲ್ಲಿ ನೆಡೆದ 2ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೊಪ್ಪಳದಲ್ಲಿ ಮತ್ತು ಗಂಗಾವತಿ ನಗರದ ಶರಣಬಸವೇಶ್ವರ ನಗರ ಸೇರಿದಂತೆ ಜಿಲ್ಲೆಯ ಸರಕಾರದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುವವರ ವಿರುದ್ಧ ಅಕ್ರಮ ತೆಗೆದುಕೊಳ್ಳಬೇಕು. ಆದರೆ ನೀವು ಅಕ್ರಮ ಅಕ್ಕಿ ಸಾಗಾಟ ಮಾಡುವ ಗಾಡಿ ಚಾಲಕ,ಗಾಡಿ ಮೇಲೆ ಪ್ರಕರಣ ದಾಖಲು ಮಾಡಿ, ನಂತರ ಯಾರು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುವ ವ್ಯಕ್ತಿಗಳ ಮೇಲೆ ಪ್ರಕರಣ ದಾಖಲು ಮಾಡಬೇಕು ಎಂದರು.ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಆಹಾರ ಇಲಾಖೆಯ ಅಧಿಕಾರಿಗಳಾದ ರೇಷ್ಮಾ ರುಹೀನಾ ರವರು ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ನಗರ ಠಾಣೆಯಲ್ಲಿ ದಾಖಲಾದ ಬಗ್ಗೆ ಮಾಹಿತಿ ಪಡೆದು ಹೇಳುತ್ತೇನೆ ಎಂದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್ ಅರಸಿದ್ದಿ ರವರು ಗಾಡಿ,ಚಾಲಕನ ಮೇಲೆ ದಾಖಲಾದ ಪ್ರಕರಣೆ ತನಿಖೆ ಮಾಡಿ ಯಾರು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುವವರ ವಿರುದ್ಧ ಪ್ರಕರಣ ದಾಖಲು ಮಾಡುತ್ತೇವೆ ಎಂದರು.ನಂತರ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಮಾತನಾಡಿ, ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಪಡಿತರ ಅಕ್ಕಿ ಮಾರಾಟಕ್ಕೆ ಕಡಿವಾಣ ಹಾಕಬೇಕು ಇಲ್ಲ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂದರು.ಈ ಸಂದರ್ಭದಲ್ಲಿ ಕೊಪ್ಪಳ ಸಂಸದರಾದ ಕೆ ರಾಜಶೇಖರ ಹಿಟ್ನಾಳ, ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ, ಕೊಪ್ಪಳ ಜಿಲ್ಲಾ ಪಂಚಾಯತ ಸಿಇಓ ರಾಹುಲ್ ರತ್ನಂ ಪಾಂಡೆಯ ಸೇರಿದಂತೆ ಇತರರು ಇದ್ದರು.