ಗಂಗಾವತಿತಾಲೂಕ ಸುದ್ದಿಗಳು

ಪಂಚಮಸಾಲಿ ಹೊರಾಟಗಾರರ ಮೇಲೆ ಲಾಟಿಚಾರ್ಜ್: ಪರಣ್ಣ ಮುನವಳ್ಳಿ ಖಂಡನೆ

ಗಂಗಾವತಿ.11

ತಮ್ಮ ಹಕ್ಕಿಗಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜದ ಹೋರಾಟಗಾರರ ಮೇಲೆ ಲಾಟಿ ಚಾರ್ಜ್ ಮಾಡಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವ ರಾಜ್ಯದ ಕಾಂಗ್ರೆಸ್ ಸರಕಾರದ ನಡೆ ಅತ್ಯಂತ ಖಂಡನೀಯವಾಗಿದೆ. ಪ್ರತಿಭಟನೆ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತೆರಳಿ 2ಎ ಮಿಸಲಾತಿ ಭರವಸೆ ನೀಡದೇ ಶಾಂತಿ ಕದಡಿಸುವ ಕೆಲಸ ಮಾಡಿದ್ದಾರೆ. ಈ ಘಟನೆಯ ಕಿಚ್ಚು ರಾಜ್ಯಾದ್ಯಂತ ಹಬ್ಬುವ ಮುಂಚೆ ಮುಖ್ಯಮಂತ್ರಿಗಳು ತಕ್ಷಣ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಘೋಷಣೆ ಮಾಡಬೇಕು ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಅಗ್ರಹಿಸಿದ್ದಾರೆ.

ಕಳೆದ ದಿನ ಬೆಳಗಾವಿಯಲ್ಲಿ ನಡೆದ ಪ್ರತಿಭಟನಾ ನಿರತರ ಮೇಲಿನ ಲಾಟಿ ಚಾರ್ಜ್‌ನ್ನು ಅವರು ಖಂಡಿಸಿ ಮಾಧ್ಯಮದವ ಮೂಲಕ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪಂಚಮಸಾಲಿ ಸಮಾಜ ಬಸವ ಜಯಮೃತ್ಯುಂಜಸ್ವಾಮಿಗಳ ನೇತೃತ್ವದಲ್ಲಿ ಕಳೆದ ಹಲವು ವರ್ಷಗಳಿಂದ ೨ಎ ಮಿಸಲಾತಿಗಾಗಿ ಹೋರಾಟ ನಡೆಸುತ್ತಾ ಬಂದಿದೆ. ಹಿಂದಿನ ಬಿಜೆಪಿ ಸರಕಾರ ಕೆಲವು ಮಾರ್ಪಾಡುಗಳನ್ನು ಮಾಡಿ ಸಮಾಜದ ಬೇಡಿಕೆಯನ್ನು ಮನ್ನಿಸಿ 2ಡಿ ಮೀಸಲಾತಿ ನೀಡಿತ್ತು. ಆದರೆ ಈಗ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡಿ ಸಮಾಜದ ಬೇಡಿಕೆಯನ್ನು ಈಡೇರಿಸಬೇಕಿತ್ತು. ಮತ್ತು ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಮುಖ್ಯಮಂತ್ರಿಗಳು ಈಗ ಸಮಾಜದ ಬೇಡಿಕೆಗೆ ಕಿಂಚಿತ್ತು ಸ್ಪಂದಿಸುತ್ತಿಲ್ಲ. ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಜಯಮೃತ್ಯುಂಜಯ ಸ್ವಾಮಿಗಳು ಮತ್ತು ಸಮಾಜದ ಮುಖಂಡರು ಮುಂಚಿತವಾಗಿಯೇ ತಿಳಿಸಿದ್ದರು. ಮತ್ತು ಅಧಿವೇಶನದ ಪ್ರಾರಂಭವಾಗುತ್ತಿದ್ದಂತೆ ಅವರು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರು. ಆದರೆ ಪೊಲೀಸ್ ಅಧಿಕಾರಿಗಳು ಪರಿಸ್ಥಿತಿಯನ್ನು ಅವಲೋಕಿಸಿ ಮುಖ್ಯಮಂತ್ರಿಗಳನ್ನು ಸ್ಥಳಕ್ಕೆ ಕರೆಯಿಸಿ ಹೋರಾಟ ಶಾಂತಿಯುತಗೊಳಿಸುವುದ ಬದಲು ಲಾಟಿ ಚಾರ್ಜ್ ಮಾಡಿ ಜನರನ್ನು ಭಯ ಬಿಳಿಸುವ ಕೆಲಸ ಮಾಡಿದ್ದಾರೆ. ಲಾಟಿ ಚಾರ್ಜ್ ಮಾಡಿ ಸರಕಾರ ಪಂಚಮಸಾಲಿ ಸಮಾಜದ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲು ಮುಂದಾಗಿದೆ. ಸರಕಾರದ ಈ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯಮಂತ್ರಿಗಳು ಈಗಲಾದರೂ ಎಚ್ಚೆತ್ತುಕೊಂಡು ತಕ್ಷಣ ಪಂಚಮಸಾಲಿ ಸಮಾಜದ ಬೇಡಿಕೆಯನ್ನು ಈಡೇರಿಸುವ ಕೆಲಸ ಮಾಡಬೇಕು. ಅದೇ ರೀತಿ ಇನ್ನುಳಿದ ಹಲವು ಸಮುದಾಯಗಳು ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದು, ಅವರನ್ನು ಕರೆದು ಮಾತುಕತೆ ನಡೆಸಿ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡಿ ಕನ್ನಡ ನಾಡಿನಲ್ಲಿ ಶಾಂತಿ ಕಾಪಾಡಬೇಕು. ಇಲ್ಲದಿದ್ದರೆ ಸರಕಾರ ಮತ್ತು ಸಿಎಂ ನಡೆಯ ವಿರುದ್ಧ ನಾವು ಕೂಡಾ ಹೊರಾಟ ನಡೆಸಲು ಮುಮದಾಗುತ್ತೇವೆ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಎಚ್ಚರಿಸಿದರು.

 

 

Related Articles

Leave a Reply

Your email address will not be published. Required fields are marked *

Back to top button