
ಗಂಗಾವತಿ: ತಾಲೂಕಿನ ಸಣಾಪುರ ಘಟನೆಯ ಬಗ್ಗೆ ತಮ್ಮ ಜಾಲತಾ ಣಗಳ ಮೂಲಕ ಪ್ರತಿಕ್ರಿಯಿಸಿರುವ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಹಂಪಿಯಲ್ಲಿ ಪೊಲೀಸ್ ಸಬ್ ಡಿವಿ ಷನ್ ಪುನಃ ತೆರೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿ ಗಳಾಗಿದ್ದ ಯಡಿಯೂರಪ್ಪನವರ ಸರ್ಕಾರದಲ್ಲಿ ನಾನು ಅಖಂಡ ಬ ಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವ ನಾಗಿದ್ದೆ. ಸಿಎಂ ಅವರ ಸಹಕಾರದೊ ಂದಿಗೆ ಹಂಪಿಯಲ್ಲಿ ಪೊಲೀಸ್ ಸಬ್ ಡಿವಿಷನ್ ವ್ಯವಸ್ಥೆಯನ್ನು ಕಲ್ಪಿಸಲಾ ಗಿದ್ದು, ಡಿಎಸ್ಪಿ ಮಟ್ಟದ ಅಧಿಕಾರಿ ಯನ್ನು ನೇಮಿಸಿ 32 ಪೊಲೀಸ್ ತಂಡಗಳನ್ನು ರಚಿಸಿ ಅವರಿಗೆ ದ್ವಿಚಕ್ರ ವಾಹನವನ್ನು ನೀಡುವ ಮೂಲಕ ಹಂಪಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಆನೆಗೊಂದಿ ಸಹ ಒಳಗೊಂಡಿರುವ ಕಾರಣ ಎರಡು ಐತಿಹಾಸಿಕ ಸ್ಥಳ ಗಳಿಗೆ ಆಗಮಿಸುವ ದೇಶ ವಿದೇಶದ ಪ್ರವಾಸಿಗರ ರಕ್ಷಣೆಗೆ ಹಗಲಿರುಳು ಗಸ್ತು ತಿರುಗುವ ಉತ್ತಮ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿತ್ತು ಎಂದು ನೆನಪಿಸಿದ್ದಾರೆ.
ದುರಾದೃಷ್ಟಕರ ಸಂಗತಿ ಎಂದರೆ ನಂತರ ಬಂದ ಸರ್ಕಾರ ಆ ಪೊ ಲೀಸ್ ಸಬ್ ಡಿವಿಷನ್ ಅನ್ನು ಸಂ ಪೂರ್ಣವಾಗಿ ಸ್ಥಗಿತಗೊಳಿಸಿ ಅದನ್ನು ಬೇರೆಡೆಗೆ ಸ್ಥಳಾಂತರಗೊಳಿಸಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ನಾನು ರಾಜ್ಯ ಸರ್ಕಾರಕ್ಕೆ ಆಗ್ರಹಿಸುವುದರ ಬದಲು ಅತ್ಯಂತ
ವಿನಮ್ರವಾಗಿ ವಿನಂತಿಸುತ್ತೇನೆ. ಹಂಪಿ ಹಾಗೂ ಆನೆಗೊಂದಿಗೆ ಆಗಮಿಸುವ ದೇಶ-ವಿದೇಶಗಳ ಪ್ರವಾಸಿಗರ ರಕ್ಷಣೆ ಗಾಗಿ ಈ ಹಿಂದೆ ಕಲ್ಪಿಸಲಾಗಿದ್ದ ಪೊ ಲೀಸ್ ಸಬ್ ಡಿವಿಷನ್ ಹಂಪಿಯಲ್ಲಿ ಪುನಃ ತೆರೆಯುವುದರ ಜೊತೆಗೆ, ಆನೆಗೊಂದಿಯಲ್ಲಿ ಪ್ರತ್ಯೇಕ ಪೊಲೀಸ್ಠಾಣೆ ನಿರ್ಮಿಸಿ ಉತ್ತಮ ಭದ್ರತಾ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ. ಭಾರತದಲ್ಲಿಯೇ ಅತಿ ಹೆಚ್ಚು ದೇಶ-ವಿದೇಶಗಳ ಪ್ರವಾಸಿಗರು ಆಗಮಿಸುವ ಪ್ರಸಿದ್ದ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣಗಳಾಗಿರುವ ಹಂಪಿ ಮತ್ತು ಆನೆಗೊಂದಿ ಭಾಗದ ಪ್ರತಿ ಯೊಬ್ಬರ ಸುರಕ್ಷತೆ ಕಾಪಾಡುವಲ್ಲಿ ಸರ್ಕಾರ ಬದ್ಧತೆ ತೋರಲಿ ಎಂಬುವುದು ನನ್ನ ಆಶ ಯವಾಗಿದೆ” ಎಂದು ತಮ್ಮ ಸಾಮಾ ಜಿಕ ಜಾಲತಾಣಗಳ ಖಾತೆಯಲ್ಲಿ ಈ ವಿಷಯದ ಕುರಿತು ವ್ಯಕ್ತಪಡಿಸುತ್ತಾರೆ