ರಾಜ್ಯ ಸುದ್ದಿ
ಕರೋನ ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿ

ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ 85 ವರ್ಷದ ವ್ಯಕ್ತಿಯೊಬ್ಬರು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮೃತಪಟ್ಟಿದ್ದಾರೆ.
ಉಸಿರಾಟದ ಸಮಸ್ಯೆ ಹಾಗೂ ಬಹು ಅಂಗಾಂಗ ವೈಫಲ್ಯಕ್ಕೆ ಒಳಗಾಗಿದ್ದ ಅವರು, ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ 17ಕ್ಕೆ ಮರಣ ಹೊಂದಿದ ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈಗ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರ್ಷ ವರದಿಯಾದ ಕೋವಿಡ್ ಮೊದಲ ಮರಣ ಪ್ರಕರಣ ಇದಾಗಿದೆ.
ರಾಜ್ಯದಲ್ಲಿ ಶನಿವಾರ 108 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಐದು ಮಂದಿಗೆ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳು 38ಕ್ಕೆ ಏರಿಕೆಯಾಗಿದೆ.