ಟ್ರಾಫಿಕ್ ಪೊಲೀಸರ ಎಡವಟ್ಟು ಮಂಡ್ಯದಲ್ಲಿ ಮಗು ಸಾವು

ಮಂಡ್ಯ: ಸಂಚಾರ ಪೊಲೀಸರ ಎಡವಟ್ಟಿನಿಂದ ಮಗು
ಸಾವನ್ನಪ್ಪಿದ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಳಿ ಸೋಮವಾರ (ಮೇ 26) ನಡೆದಿದೆ. ತಪಾಸಣೆ ವೇಳೆ ಬೈಕ್ ಅಡ್ಡಗಟ್ಟಿದಾಗ ಕೆಳಗೆ ಬಿದ್ದ ಮಗು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದೆ.
ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ಮಹೇಶ್ ಪುತ್ರಿ ರಿತಿಕ್ಷಾ (3) ಮೃತಪಟ್ಟ ಮಗು.
ಘಟನೆ ವಿವರ: ಮಹೇಶ್ ಅವರು ತನ್ನ ಪತ್ನಿ ಹಾಗೂತನ್ನ ಮೂರು ವರ್ಷದ ಮಗಳನ್ನು ಮಿಮ್ಸ್ ಆಸ್ಪತ್ರೆಗೆ ನಾಯಿ ಕಡಿತದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಕರೆತರುತ್ತಿದ್ದರು. ಈ ವೇಳೆ ಸಂಚಾರಿ ಪೊಲೀಸರು ಹೆಲೈಟ್ ಧರಿಸದಿರುವ ಬೈಕ್ ಸವಾರರ ತಡೆದು ತಪಾಸಣೆ ನಡೆಸುತ್ತಿದ್ದರು.
ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಆತಂಕಗೊಂಡಿದ್ದಾರೆ. ಈ ವೇಳೆ ಮಗು ಬೈಕ್ ನಿಂದ ಬಿದ್ದು ಸಾವನ್ನಪ್ಪಿದೆ.
ಜನರ ಆಕ್ರೋಶ
ಪೊಲೀಸರ ಎಡವಟ್ಟಿಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಸಾರ್ವಜನಿಕರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಹೆದ್ದಾರಿಯಲ್ಲಿಯೇ ಮಗುವಿನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪೋಷಕರ ಕ್ಷಮೆಯಾಚಿಸಿದರು. ಮೂವರು ಸಂಚಾರಿ ಪೊಲೀಸರ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸ್ಥಳಕ್ಕೆ ಶಾಸಕ ರವಿಕುಮಾರ್ ಗೌಡ ಗಣಿಗ ಭೇಟಿ ನೀಡಿ ಸಿಎಂ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.