ಕಾರಟಗಿ

ಕಾರಟಗಿ ಪುರಸಭೆ ಪೌರ ಸೇವಾ ಪೌರಕಾರ್ಮಿಕರು ಮತ್ತು ಪುರಸಭೆ ನೌಕರರ 2ನೆ ದಿನದ ಅನಿರ್ದಿಷ್ಟಾವಧಿ ಮುಷ್ಕರ

ವರದಿ ಸುಂದರರಾಜ್ BA ಕಾರಟಗಿ

ಕಚೇರಿ ಸಾರ್ವಜನಿಕರ ಸೇವಾ ಕಾರ್ಯ ಸ್ಥಗಿತ ಪುರಸಭೆ ಪೌರ ನೌಕರರ ಅನಿರ್ದಿಷ್ಟಾವಧಿ ಧರಣಿ

ಕಾರಟಗಿ ; ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ನೇತೃತ್ವದಲ್ಲಿ ರಾಜ್ಯದ್ಯಂತ ಅನಿರ್ದಿಷ್ಟ ಅವಧಿ ಮುಷ್ಕರ ಹಮ್ಮಿಕೊಳ್ಳಲಾಗಿದ್ದು ಕಾರಟಗಿ ಪುರಸಭೆ ಪೌರ ಸೇವಾ ಪೌರಕಾರ್ಮಿಕರು ಮತ್ತು ಪುರ ಸಭೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡು ಸರ್ಕಾರ ಈ ಕೂಡಲೇ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿದ್ದಾರೆ, ಕುಡಿಯುವ ನೀರು ಸರಬರಾಜು ಸೇವೆಯನ್ನು ಹೊರತುಪಡಿಸಿ ಎಲ್ಲಾ ಕಾರ್ಯಗಳನ್ನು ಸ್ಥಗಿತಗೊಳಿಸಿದ್ದಾರೆ ಪುರಸಭೆ ಮುಂಭಾಗದಲ್ಲಿ ಅಧಿಕಾರಿಗಳು ಮತ್ತು ಪುರಸಭೆಯ ಪೌರಕಾರ್ಮಿಕರು ಎಲ್ಲಾ ಕೆಲಸ ಕಾರ್ಯಗಳನ್ನು ಬಿಟ್ಟು ಕಚೇರಿಯ ಕೆಲಸಗಳನ್ನು ಮತ್ತು ಪೌರ ಸೇವಾ ಸ್ವಚ್ಛತಾ ಕಾರ್ಯಗಳನ್ನು ಸ್ಥಗಿತಗೊಳಿಸಿ ಹೋರಾಟವನ್ನು

ನಡೆಸುತ್ತಿದ್ದರೆ, ಪುರಸಭೆಗೆ ಬಂದ ಸಾರ್ವಜನಿಕರು ಬರಿಗೈಯಲ್ಲಿ ಹಿಂತಿರುಗುತ್ತಿದ್ದಾರೆ ಅಧಿಕಾರಿಗಳು ಪೌರ ಕಾರ್ಮಿಕರು ಮುಷ್ಕರದಲ್ಲಿ ತೊಡಗಿರುವುದರಿಂದ ವಾರ್ಡ್ ಗಳಲ್ಲಿ ಕಸವಿಲೇವಾರಿ ಆಗದೆ ಎಲ್ಲೆಂದರಲ್ಲಿ ಕಸ ಸಂಗ್ರಹವಾಗುತ್ತಿದೆ, ಇದು ಯಾವುದಕ್ಕೂ ಕಿವಿಗೊಡದೆ ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಮುಷ್ಕರ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ

ಬೇಡಿಕೆಗಳು ;ನೌಕರರ ಸಂಘದ ಬೇಡಿಕೆಗಳು; ರಾಜ್ಯದ ಎಲ್ಲಾ ನಗರ ಸ್ಥಳೀಯ ನೌಕರರನ್ನು ರಾಜ್ಯ ಸರ್ಕಾರಿ ನೌಕರರು ಎಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆ.ಜಿ.ಐ.ಡಿ. ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒರಗುತ್ತಿಗೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಕಾರ್ಮಿಕರು, ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್, ಗಾರ್ಡಿನರ್, ಸ್ಯಾನಿಟರಿ ಸೂಪರ್‌ವೈಸರ್, ಕಂಪ್ಯೂಟರ್ ಆಪರೇಟರ್, ಯುಜಿಡಿ ಸಹಾಯಕರು ಸೇರಿದಂತೆ ವಿವಿಧ ವೃಂದದ ಹೊರಗುತ್ತಿಗೆ ಕಾರ್ಮಿಕರನ್ನು ನಗರ ಸ್ಥಳೀಯ ಸಂಸ್ಥೆಗಳಿಂದ ನೇರ ಪಾವತಿಗೆ ಒಳಪಡಿಸುವುದು.

ದಿನಗೂಲಿ ಕ್ಷೇಮಾಭಿವೃದ್ಧಿ ಸಮಾನ ಕೆಲಸಕ್ಕೆ ಸಮಾನ ವೇತನ ಈ ನೌಕರರನ್ನು ಖಾಯಂ ಮಾಡುವುದು.

ವಿಶೇಷ ನೇಮಕಾತಿಯಡಿ ಖಾಯಂಗೊಂಡ ನೌಕರರಿಗೆ ಎಸ್.ಎಫ್.ಸಿ ವೇತನ ಅನುದಾನದಿಂದ ವೇತನ ನೀಡುವುದು.

Related Articles

Leave a Reply

Your email address will not be published. Required fields are marked *

Back to top button
error: Content is protected !!