ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಸೈಯದ್ ಅಸ್ಲಾಂ ಒತ್ತಾಯ

ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದ ನಟ ಕಮಲ್ ಹಾಸನ್ ಒಬ್ಬ ಸ್ಟಾರ ನಟನಾಗಿ ಬೆಳೆಯುವುದಕ್ಕೆ ಕೇವಲ ಒಂದು ಭಾಷೆ ಕಾರಣವಾಗಿರುವುದಿಲ್ಲ ಎಂಬುದನ್ನು ಮನದಟ್ಟ ಮಾಡಿಕೊಳ್ಳಬೇಕು. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ತಮಿಳು ನಟ ಕಮಲ್ ಹಾಸನ್ ಇವರು ವಿವಾದಿತ ಹೇಳಿಕೆಯನ್ನು ನೀಡಿರುವುದು ನಮ್ಮ 6.5 ಕೋಟಿ ಕನ್ನಡಾಭಿನಾಗಳಿಗೆ ತುಂಬಾ ನೋವುಂಟು ಮಾಡಿರುತ್ತಾರೆ. ತನ್ನ ರಾಜಕೀಯ ಬೇಳೆ ಬೆಯಿಸಿಕೊಳ್ಳುವ ಉದ್ದೇಶ ದಿಂದ ಹಾಗೂ ತಮಿಳು ಜನರ ಮತಗಳ ಮೇಲೆ ಕಣ್ಣು ಇಟ್ಟಿರುವ ಇವರು ತಮ್ಮ ಹೊಸ ಚಲಚಿತ್ರ “ಥಗ್‌ಲೈಫ್” ಧ್ವನಿಸುರಳಿ ಬಿಡುಗಡೆ ಸಂದರ್ಭದಲ್ಲಿ ಅಸಂಬಂದ್ಧ ಹೇಳಕೆ 6.5 ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಭಾರತದಲ್ಲಿ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಂತಹ ಏಕೈಕ ಭಾಷೆ ಎಂದರೆ ಅದು ಕನ್ನಡ ಭಾಷೆ ಮತ್ತು ಕನ್ನಡ ಭಾಷೆಗೆ ತನ್ನದೇ ಆದ 4000 ವರ್ಷಗಳ ಇತಿಹಾಸವನ್ನು ಹೊಂದಿರುವ ನಮ್ಮ ಕನ್ನಡ ಭಾಷೆಗೆ ಅವಮಾನ ಮಾಡಿರುವ ನಟ ಕಮಲ್ ಹಾಸನ್ ಇವರು ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆದು ಕನ್ನಡಿಗರಿಗೆ ಕ್ಷಮೆ ಕೇಳಬೇಕು. ಒಂದು ವೇಲೆ ಕನ್ನಡಿಗರಿಗೆ ಕ್ಷಮೆ ಕೇಳದೇ ಹೋದಲ್ಲಿ ಜೂನ್-6 ರಂದು ಶುಕ್ರವಾರ ಅವರ ಥಗ್‌ಲೈಫ್” ಚಿತ್ರವನ್ನು ಕರ್ನಾಟಕದ ಯಾವುದೇ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳಿಸಲು ಕನ್ನಡ ಜಾಗೃತಿ ವೇದಿಕೆ ಅವಕಾಶವನ್ನು ನೀಡುವುದಿಲ್ಲ ಎಂದು ಕೊಪ್ಪಳ ಜಿಲ್ಲಾಧ್ಯಕ್ಷ ಸೈಯದ್ ಅಸ್ಲಾಂ ಇವರು ಪತ್ರಿಕೆಯ ಮೂಲಕ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.