ಜಿಬಿ ನ್ಯೂಸ್ ಕನ್ನಡ ಆರ್ಟಿಕಲ್

ಶಾಲೆಯವರು ನಡೆಸಿದ ವಿಶ್ವ ಪರಿಸರ ದಿನಾಚರಣೆ ಬಲ್ಡೋಟ ಕಂಪನಿಯ ಸಾಧನ ಸಮಾವೇಶದಂತೆ ಗೋಚರಿಸಿತಾ?

ಬಲ್ಡೋಟ್ ಕಾರ್ಖಾನೆಯ ಸಾಧನ ಸಮಾವೇಶವಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಕೊಪ್ಪಳ ಜೂನ್ 11: ಜೂನ್ ತಿಂಗಳಲ್ಲಿ ದೇಶಾದ್ಯಂತ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನ ಆಚರಣೆ ಮಾಡಲಾಗುತ್ತಿದೆ. ಆದರೆ ಕೊಪ್ಪಳ ಪಟ್ಟಣದ ಮಂಗಳಾಪುರ ರಸ್ತೆಯಲ್ಲಿರುವ ನ್ಯೂ ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಬಲ್ಡೋಟ್ ಕಾರ್ಖಾನೆಯ ಸಾಧನ ಸಮಾವೇಶವಾಯಿತಾ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಹೌದು ಬಲ್ಡೋಟ್ ಹಾಗೂ ಎಂ. ಎಸ್‌.ಪಿ.ಎಲ್ ಪೆಲೆಟ್ ಪ್ಲಾಂಟ್ ಹಾಲವರ್ತಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಕೊಪ್ಪಳ, ನ್ಯೂ ಎಕ್ಸಲೆಂಟ್ ಪಬ್ಲಿಕ್ ಶಾಲೆ, ಕೊಪ್ಪಳ ಸಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲಪ್ಪ ಬಿರಾದರ್ ಚಾಲನೆ ನೀಡಿದರು. ನಂತರ ಶ್ರೀಶೈಲಪ್ಪ ಬಿರಾದರ್ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳು ತಮ್ಮ ಮನೆ ಬಳಿ ಜಾಗ ಇದ್ದರೆ ಗಿಡಮರಗಳನ್ನು ಬೆಳೆಸಿ ಸಂರಕ್ಷಿಸಬೇಕು ಅಥವಾ ಮನೆ ಬಳಿ ಜಾಗ ಇಲ್ಲವಾದಲ್ಲಿ ಶಾಲೆ ಬಳೆ ಗಿಡಮರಗಳನ್ನ ಬೆಳೆಸಿ ಸಂರಕ್ಷಿಸುವ ಮೂಲಕ ಪರಿಸರ ರಕ್ಷಿಸಬೇಕು ಎಂದು ಸಲಹೆ ನೀಡಿದರು.

ನಂತರ ಎಂ.ಎಸ್.ಪಿ.ಎಲ್ ಕಾರ್ಖಾನೆಯ ಮುಖ್ಯಸ್ಥರಾದ ಮುರಳಿಧರಂ ಮಾತನಾಡಿ ಬಲ್ದೋಟ ಹಾಗೂ ಎಂ.ಎಸ್.ಪಿ.ಎಲ್ ಕಾರ್ಖಾನೆಯ ನೇತೃತ್ವದಲ್ಲಿ ಪ್ರತಿ ವರ್ಷವೂ ಸಾಮಾಜಿಕ ಕಾರ್ಯಗಳನ್ನ ಮಾಡುತ್ತಾ ಬಂದಿದ್ದೇವೆ. ಗ್ರಾಮೀಣ ಭಾಗದ ಮಹಿಳೆಯರಿಗಾಗಿ ಸ್ವಸಹಾಯ ಗುಂಪುಗಳ ಮೂಲಕ ಮಹಿಳಾ ಸಬಲೀಕರಣ ಕಾರ್ಯಕ್ರಮ, ಯುವಕರಿಗೆ ಕೌಶಲ್ಯ ತರಬೇತಿ, ಪರಿಸರ ಸಂರಕ್ಷಣೆ ಜಾಗೃತಿ, ಕಲೆ ಮತ್ತು ಸಂಸ್ಕೃತಿ, ಗ್ರಾಮೀಣ ಕ್ರೀಡೆಗಳ ಉತ್ತೇಜನಕ್ಕೆ ಆದ್ಯತೆ ನೀಡುವದು.ಖಾಸಗಿ ಸಾರ್ವಜನಿಕ ಪಾಲುದಾರಿಕೆಯೊಂದಿಗೆ 10 ಗ್ರಾಮಗಳಲ್ಲಿ 10 ಆರ್ ಒ ಪ್ಲಾಂಟ್ ಗಳನ್ನು 16 ವರ್ಷಗಳಿಂದ ಸಮರ್ಥವಾಗಿ ನಡೆಸುತ್ತಿದ್ದೇವೆ. 20 ಹಳ್ಳಿಗಳಲ್ಲಿ ಒಟ್ಟು 2,100 ಗೃಹ ಶೌಚಾಲಯ 5,000 ಕ್ಕೂ ಹೆಚ್ಚು ಗ್ರಾಮಸ್ಥರಿಗೆ ಯಶಸ್ವಿಯಾಗಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಕೋವಿಡ್ ಸಮಯದಲ್ಲಿ, ನಾವು 8,079 ಪಡಿತರ ಕಿಟ್‌ಗಳನ್ನು ವಿತರಿಸಿದ್ದೇವೆ ಎಂದರು.

ಇದಲ್ಲದೇ 4,003 ಕ್ಕೂ ಹೆಚ್ಚು ಜನರು ಕ್ಯಾನ್ಸರ್ ತಪಾಸಣಾ ಶಿಬಿರ, ವಾಕ್ ಮತ್ತು ಶ್ರವಣ ಶಿಬಿರ ಅದರಲ್ಲಿ ಸಾವಿರಕ್ಕೂ ಹೆಚ್ಚು ಜನರಿಗೆ ಶ್ರವಣ ಸಾಧನ, ಕೃತಕ ಕಾಲು ಜೋಡಣೆ ಶಿಬಿರ, ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡಲಾಗಿದೆ.

52 ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಪ್ರೊಜೆಕ್ಟ‌ರ್ ಅಳವಡಿಕೆ, 5ಮಿನಿ ಸೈನ್ಸ್ ಲ್ಯಾಬ್‌, 823 ಗ್ರಾಮೀಣ ವಿದ್ಯಾರ್ಥಿನಿಯರಿಗೆ ಪದವಿ ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಲು ವಿದ್ಯಾರ್ಥಿವೇತನವನ್ನು ನೀಡಿ ಉತ್ತೇಜಿಸಿದ್ದೇವೆ. ಶಿಕ್ಷಣವನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಸಂಚಾರಿ ಗ್ರಂಥಾಲಯ ವಾಹನವನ್ನು ನೀಡಲಾಗಿದೆ. ಗ್ರಾಮೀಣ ಮಹಿಳೆಯರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸಲು, 19 ಗ್ರಾಮಗಳಲ್ಲಿ 167 ಸ್ವಸಹಾಯ ಸಂಘಗಳನ್ನು ನಡೆಸುತ್ತಿದ್ದೇವೆ. ಸ್ವಸಹಾಯ ಸಂಘಗಳು 2,254 ಗ್ರಾಮೀಣ ಕುಟುಂಬಗಳಿಗೆ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡಿವೆ.190 ಕುಟುಂಬಗಳನ್ನು ಪಶುಸಂಗೋಪನೆ ಕಾರ್ಯಕ್ರಮದಡಿಯಲ್ಲಿ ಬೆಂಬಲಿಸಿ, ಪ್ರೋತ್ಸಾಹಿಸಲಾಗಿದೆ.

ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ (ಅವರ್ತ ನಿಧಿ) ಒದಗಿಸಿ, ಆದಾಯ ಉತ್ಪಾದನಾ ಚಟುವಟಿಕೆಗಳನ್ನು ನಡೆಸಲು ಪ್ರೋತ್ಸಾಹಿಸಲಾಗಿದೆ. ಕೊಪ್ಪಳ ನಗರದಲ್ಲಿ ಕಳೆದ ವರ್ಷ 4,000 ಕ್ಕೂ ಹೆಚ್ಚು ಗಿಡಗಳನ್ನು ನೆಟ್ಟಿದ್ದೇವೆ.
LPG ಸಂಪರ್ಕ ಪಡೆಯಲು 1,289 ಕುಟುಂಬಗಳಿಗೆ ಸಹಾಯ ಮಾಡಲಾಗಿದೆ. ಗ್ರೀನ್ ಕೊಪ್ಪಳ ಕಾರ್ಯಕ್ರಮದಡಿಯಲ್ಲಿ ಸುಮಾರು 1,00,000 ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ. ಸಾರ್ವಜನಿಕ ಉದ್ಯಾನವನಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದ್ದು ಒಂದರ PDO (ರೂಪುರೇಷ) ಸಿದ್ಧಪಡಿಸಲಾಗಿದೆ ಎಂದು ಹೇಳುವ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಕಾರ್ಖಾನೆಯ ಸಾಧನ ಸಮಾವೇಶ ರೀತಿ ವಿದ್ಯಾರ್ಥಿಗಳಿಗೆ ಹೇಳುವ ಮೂಲಕ ಇಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವು ಬಲ್ಡೋಟ್ ಹಾಗೂ ಎಂ.ಎಸ್.ಪಿ.ಎಲ್ ಕಾರ್ಖಾನೆಯ ಸಾಧನ ಸಮಾವೇಶವಾಯಿತಾ ಎಂಬ ಪ್ರಶ್ನೆ ವ್ಯಕ್ತವಾಗಿದೆ.ಈ ಸಂದರ್ಭದಲ್ಲಿ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕ್ರಯ್ಯ, ಶಾಲಾ ಮುಖ್ಯಸ್ಥ ಮಲ್ಲಿಕಾರ್ಜುನ್ ಚೌಕಿಮಠ, ಎಮ್.ಎಸ್.ಪಿ.ಎಲ್ ಸಿಎಸ್ ಫಂಡ್ ಅಧ್ಯಕ್ಷ ಕೆ.ಎಚ್ ರಮೇಶ, ಭಾರತ ಸ್ಕೌಟ್ ಗೈಡ್ಸ್ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಮುಖ್ಯ ಆಯುಕ್ತ ಎಚ್.ಎಮ್. ಸಿದ್ರಾಮಸ್ವಾಮಿ, ಸೇರಿದಂತೆ ಶಾಲಾ ಶಿಕ್ಷಕರು, ಸಾರ್ವಜನಿಕರು, ವಿದ್ಯಾರ್ಥಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!