ಕೊಪ್ಪಳಜಿಲ್ಲಾ ಸುದ್ದಿಗಳು

ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿಳಲಿ.ಡಾ. ಬಸವರಾಜ ಕ್ಯಾವಟರ್ ಆಗ್ರಹ.

ಕೊಪ್ಪಳದ ಮರಳು ದಂಧೆಯ ಹಿಂದೆ ಯಾರ ಕೈವಾಡ ಇದೆ ಅಂತ ಅಧಿಕಾರಿಗಳಿಗೆ ಗೊತ್ತಿದ್ದರೂ ಕೂಡ ಅಧಿಕಾರಿಗಳು ಅಂತಹ ಅಕ್ರಮ ಮರಳು ತಂದೆಯನ್ನ ನಿಲ್ಲಿಸುತ್ತಿಲ್ಲ ಮತ್ತು ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಗುಮಾನಿ ಕೊಪ್ಪಳ ಜಿಲ್ಲೆಯಲ್ಲಿ ಹರಿದಾಡುತ್ತಿದೆ

ಕೊಪ್ಪಳ: ಕೊಪ್ಪಳ ತಾಲೂಕಿನ ಅಳವಂಡಿ ಹೋಬಳಿಯಲ್ಲಿ ಅಕ್ರಮ‌ವಾಗಿ ಮರಳು ಸಾಗಾಣಿಕೆ ಮಿತಿ ಮೀರಿದೆ. ಐದು ದಿನಗಳ ಹಿಂದೆ ಅಧಿಕಾರಿಗಳು ದಾಳಿ ನಡೆಸಿ, ಕಡಿವಾಣ ಹಾಕಿದ್ದರೂ ಇದಕ್ಕೆ ಶಾಶ್ವತ ಅಂಕುಶ ಬಿಳಬೇಕಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿರುವ ವೈದ್ಯ ಬಸವರಾಜ ಕ್ಯಾವಟರ್ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹಿರೇಸಿಂದೋಗಿ ಹಳ್ಳದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಾಣಿಕೆಯನ್ನು ಈಚೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಇನ್ನಿತರ ಇಲಾಖೆ ಒಳಗೊಂಡ ಅಧಿಕಾರಿಗಳ ತಂಡ ದಾಳಿ ನಡೆಸಿ, ಮರಳಿನ ಬೋಟ್ ಗಳನ್ನು ಧ್ವಂಸಗೊಳಿಸಿದೆ. ಅಲ್ಲದೆ, ಅಪಾರ ಪ್ರಮಾಣದ ಮರಳು ವಶ ಪಡಿಸಿಕೊಂಡಿದೆ. ಆದರೆ, ಈವರೆಗೂ ಯಾರ ಮೇಲೆಯೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೇ ಇರುವುದು ಅಚ್ಚರಿ ತಂದಿದೆ.

ಈ ಭಾಗದಲ್ಲಿ ಮರಳು ದಂಧೆ ಬಹಿರಂಗವಾಗಿ ನಡೆಸುತ್ತಿರುವವರು ಯಾರು ಎಂಬುದು ಜಗಜ್ಜಾಹಿರು ಆಗಿದ್ದರೂ ಪೊಲೀಸರು ಕೂಡ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹಿರೇಹಳ್ಳ ವ್ಯಾಪ್ತಿಯಲ್ಲಿನ ಹೂಳು ತೆಗೆದು ರೈತರಿಗೆ ಅನುಕೂಲವಾಗಲೆಂದು ಅನುಕೂಲ ಕಲ್ಪಿಸಲಾಗಿದೆ. ಆದರೆ, ರಾಜಕೀಯ ಪ್ರೇರಿತ ಶಕ್ತಿಗಳು, ನಿಸರ್ಗದ ಸಂಪತ್ತನ್ನು ಹಾಡುಹಗಲೇ ಕೊಳ್ಳೆ ಹೊಡೆಯುತ್ತಿವೆ.
ಇದಕ್ಕೆ ಆಡಳಿತದಲ್ಲಿರುವ ಜನಪ್ರತಿನಿಧಿಗಳು ಬೆಂಗಾವಲಾಗಿರುವುದು ದುರದೃಷ್ಟಕರ.

ಇದಲ್ಲದೇ ಕೊಪ್ಪಳ ತಾಲೂಕಿನ ಕುಣಿಕೇರಿ ಗ್ರಾಮದಲ್ಲಿರುವ ಕೆರೆಯ ಅಪಾರ ಪ್ರಮಾಣದ ಮಣ್ಣನ್ನು ಅನಧಿಕೃತವಾಗಿ ಸಾಗಾಟ ಮಾಡುತ್ತಿರುವ ಪ್ರಕರಣ ಈಚೆಗೆ ಬೆಳಕಿಗೆ ಬಂದಿತ್ತು. ಇಂತಹ ಹಲವು ಘಟನೆಗಳು ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿವೆ. ಇದರಿಂದ ನಿಸರ್ಗದ ಮೇಲೆ ಗಂಭೀರ ಪರಿಣಾಮ ಬಿರುತ್ತಿದೆ. ಆಡಳಿತ ಪಕ್ಷದ ಜನಪ್ರತಿನಿಧಿಗಳು ಇಂತಹ ಅಕ್ರಮಗಳಿಗೆ ಕಡಿವಾಣ ಹಾಕುವುದು ಬಿಟ್ಟು ದಂಧೆಕೋರರ ಪರವಾಗಿ ಕೆಲಸ ಮಾಡುತ್ತಿರುವುದು ನಿಜಕ್ಕೂ ದುರಂತದ ಸಂಗತಿಯಾಗಿದೆ. ಇನ್ನಾದರೂ ಇಂತಹ ಪ್ರಕರಣಗಳಿಗೆ ಕಡಿವಾಣ ಬಿಳಬೇಕಿದೆ. ನಿಸರ್ಗದ ಸಂಪತ್ತು ಉಳಿಯಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಡಾ. ಬಸವರಾಜ್ ಎಸ್ ಕ್ಯಾವಟರ್
ರಾಜ್ಯ ಕಾರ್ಯಕಾರಿಣಿ ಸದಸ್ಯರು, ಕೊಪ್ಪಳ

    

Related Articles

Leave a Reply

Your email address will not be published. Required fields are marked *

Back to top button
error: Content is protected !!