ಕೊಪ್ಪಳಜಿಲ್ಲಾ ಸುದ್ದಿಗಳು

ಅಕ್ರಮ ಮರಳು ಸಾಗಾಟ ತಡೆಯಿರಿ; ಕೊಪ್ಪಳ ಬಿಜೆಪಿಯಿಂದ ಡಿಸಿ ಮತ್ತು ಎಸ್ಪಿ ಗೆ ಮನವಿ

ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹೇರಳವಾಗಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಿ ಎಂದು ಜಿಲ್ಲಾ ಬಿಜೆಪಿ ಘಟಕದ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಜಿಲ್ಲಾಡಳಿತ ಭವನದಲ್ಲಿ ಡಿಸಿ ಸುರೇಶ ಇಟ್ನಾಳ್ ಹಾಗೂ ಎಸ್ಪಿ ಕಚೇರಿಯಲ್ಲಿ ಎಸ್ಪಿ ಡಾ.ರಾಮ.ಎಲ್.ಅರಸಿದ್ದಿ ಅವರಿಗೆ ಮನವಿ ಸಲ್ಲಿಸಿ, ಆಗ್ರಹಿಸಿದ ಬಿಜೆಪಿ ನಾಯಕರು, ಕೂಡಲೇ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಿ, ಇಲ್ಲದಿದ್ದರೇ ನಿಸರ್ಗದ ಸಂಪತ್ತು ವ್ಯಾಪಕ ಪ್ರಮಾಣದಲ್ಲಿ ಹಾಳಾಗಲಿದೆ ಎಂದು ಕಿಡಿಕಾರಿದರು.

ಕಳೆದ ಹಲವು ತಿಂಗಳಿಂದ ಕೊಪ್ಪಳ ತಾಲೂಕಿನ ಅಳವಂಡಿ ಹೋಬಳಿ, ಕಿನ್ನಾಳ, ಓಜನಹಳ್ಳಿ ಸೇರಿದಂತೆ ವಿವಿದೆಡೆ ವ್ಯಾಪಕವಾಗಿ ಅಕ್ರಮವಾಗಿ ಮರಳನ್ನು ಸಾಗಾಟ ಮಾಡಲಾಗುತ್ತಿದೆ.

ಈ ಪೈಕಿ ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಬಳಿ ಈಚೆಗೆ ದಾಳೆ ನಡೆಸಿ, ಅಕ್ರಮ ಮರಳನ್ನು ವಶಪಡಿಸಿಕೊಂಡಿರುವುದು ಸುತ್ಯಾರ್ಹ.

ಇದೇ ರೀತಿ ಉಳಿದ ಕಡೆ ದಾಳಿ ನಡೆದು, ದಂಧೆಕೋರರಿಗೆ ಕಡಿವಾಣ ಬಿಳಲಿ ಎಂದು ಒತ್ತಾಯಿಸಿದರು.

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಬಸವರಾಜ ಧಡೆಸೂಗೂರು, ರಾಜ್ಯಕಾರ್ಯಕಾರಿಣಿ ಸದಸ್ಯರಾದ ಡಾ. ಬಸವರಾಜ್ ಕ್ಯಾವಟರ್, ಪ್ರಮುಖರಾದ ಶ್ರೀ ಚಂದ್ರಶೇಖರ ಕವಲೂರ್, ಕೊಪ್ಪಳ ಗ್ರಾಮೀಣ ಮಂಡಲ ಅಧ್ಯಕ್ಷರಾದ ಶ್ರೀ ಪ್ರದೀಪ್ ಹಿಟ್ನಾಳ್, ನಗರ ಮಂಡಲ ಅಧ್ಯಕ್ಷರಾದ ಶ್ರೀ ರಮೇಶ ಕವಲೂರ್, ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಗಣೇಶ ಹೊರತಟ್ನಾಳ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸುನಿಲ್ ಹೆಸರೂರ್, ಶ್ರೀ ಉಮೇಶ್ ಹಿರೇಮಠ, ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಶ್ರೀಮತಿ ವಾಣಿಶ್ರೀ ಹಿರೇಮಠ, ಶ್ರೀಮತಿ ಕೀರ್ತಿ ಪಾಟೀಲ್ ಭಾಗಿಯಾಗಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!