ಶಿವರಾಜ ತಂಗಡಗಿ ಭ್ರಷ್ಟ ಸಚಿವ; ಶಾಸಕ ದೊಡ್ಡನಗೌಡ ಪಾಟೀಲ್ ಆರೋಪ

ಕೊಪ್ಪಳ ಜುಲೈ,09:ಮಠದ ಜೀರ್ಣೋದ್ಧಾರಕ್ಕಾಗಿ 3.5 ಕೋಟಿ ರೂ. ಅನುದಾನ ಮಂಜೂರಾಗಿದ್ದು ಅನುದಾನ ಬಿಡುಗಡೆ ಮಾಡಲು ಸಚಿವರಾದ ಶಿವರಾಜ್ ತಂಗಡಗಿಯವರು 25 ಪರ್ಸೆಂಟ್ ಕಮಿಷನ್ ಕೇಳಿದ್ದಾರೆ ಎಂದು ಸ್ವಾಮೀಜಿ ಆರೋಪ ಮಾಡಿದ್ದಾರೆ.ಇದರಿಂದ ಕನಕಗಿರಿ ಕ್ಷೇತ್ರದ ಶಾಸಕರು ಹಾಗೂ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ರವರು ಭ್ರಷ್ಟ ಸಚಿವರಾಗಿದ್ದಾರೆ ಎಂದು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದರು.

ಮಂಗಳವಾರ ಕೊಪ್ಪಳ ನಗರದ ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್ ಮಾತನಾಡಿ, ಗಾಣಿಗ ಮಠದ ಅನುದಾನ ಬಿಡುಗಡೆಗೆ ಸಚಿವ ಶಿವರಾಜ್ ತಂಗಡಗಿ ಕಮಿಷನ್ ಕೇಳಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ಪೂರ್ಣಾನಂದ ಪುರಿ ಸ್ವಾಮೀಜಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಆದಿಯಾಗಿ ಮಂತ್ರಿಗಳು, ಕಾಂಗ್ರೆಸ್ ಶಾಸಕರು ಲಂಚ ಹೊಡೆಯುವುದರಲ್ಲೇ ನಿರತರಾಗಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಮರಿಚಿಕೆಯಾಗಿದೆ. ಕಾಂಗ್ರೆಸ್ ಪಕ್ಷದ ಸಚಿವರು ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಈ ಸಂದರ್ಭದಲ್ಲಿ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ, ಬಿಜೆಪಿ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಬಸವರಾಜ್ ದಡೆಸುಗೂರು, ಬಿಜೆಪಿ ಪಕ್ಷದ ಮುಖಂಡರು ಉಪಸ್ಥಿತರಿದ್ದರು.