ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ದಂಧೆ ಮುಚ್ಚಿ ಹಾಕುವ ಪ್ರಯತ್ನದಲ್ಲಿ ಇದ್ದಾರೆ ಹಿಟ್ನಾಳ ಬ್ರದರ್ಸ್; ಜನಾರ್ಧನ್ ರೆಡ್ಡಿ ಅಕ್ರೋಶ

ಕೊಪ್ಪಳ ಜುಲೈ,09: ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ್ ರೆಡ್ಡಿ ರವರು ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ, ಜೂಜಾಟ, ಡ್ರಗ್ಸ್ ದಂಧೆ ವಿರುದ್ಧ ಕೊಪ್ಪಳದಲ್ಲಿ ಆಕ್ರೋಶ ಹೊರ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಮಂಗಳವಾರ ಕೊಪ್ಪಳ ಪಟ್ಟಣದ ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ಬಿಜೆಪಿ ಪಕ್ಷದ ರಾಜ್ಯ ಮುಖಂಡರು ಹಾಗೂ ಗಂಗಾವತಿ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ಧನ್ ರೆಡ್ಡಿ ರವರು, ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಕೊಪ್ಪಳ ಸಂಸದ ಕೆ ರಾಜಶೇಖರ್ ರವರು ಡ್ರಗ್ಸ್ ದಂಧೆ ಗಂಗಾವತಿಗೆ ಸೀಮಿತ ಎಂಬ ಅಣೆಪಟ್ಟೆ ಕಟ್ಟುತ್ತಿರುವುದು ಸರಿಯಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ದಂಧೆಗಳ ತಾಣವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ, ಜೂಜಾಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ. ಕೊಪ್ಪಳ ಅಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧ ರವರು ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಿದ್ರು, ಈಗಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಕ್ರಮ ದಂಧೆಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಅಕ್ರಮ ಮರಳುದಂದೆ ಜೂಜಾಟ ವಿರುದ್ಧ ಕ್ರಮ ತೆಗೆದುಕೊಳ್ಳದೆ ಹೋದರೆ ಬಿಜೆಪಿ ಪಕ್ಷದಿಂದ ನಾವೇ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ. ಸರ್ಕಾರ ಬಡವರಿಗಾಗಿ ಇರುವ ಅನ್ನಭಾಗ್ಯ ಯೋಜನೆ ಮೂಲಕ ಪೂರೈಸುತ್ತಿರುವ ಪಡಿತರ ಅಕ್ಕಿ ಸಾಗಟ ಮಾಡುವ ಲಾರಿ ಮಾಲಕರಿಗೆ ಹಣ ಕೊಟ್ಟಿಲ್ಲ. ಚುನಾವಣೆ ಬಂದಾಗ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಅವರ ಖಾತೆಗೆ ಹಾಕುವ ಮೂಲಕ ಜನರ ದಿಕ್ಕನ್ನ ತಪ್ಪಿಸುತ್ತಾರೆ. ಅಕ್ರಮ ಮರಳು ದಂಧೆ, ಜೂಜಾಟ, ಡ್ರಗ್ಸ್ ದಂಧೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್, ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಕನಕಗಿರಿ ಕ್ಷೇತ್ರದ ಮಾಜಿ ಶಾಸಕರಾದ ಬಸವರಾಜ್ ದಡೆಸುಗೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.