Blog

ಅಂಬೇಡ್ಕರ್ ಮೂರ್ತಿಗೆ ಅವಮಾನ: ಪ್ರತಿಭಟನೆ ಹೆಚ್.ಆರ್.ಶ್ರೀನಾಥ ಖಂಡನೆ: ಕ್ರಮಕ್ಕೆ ಅಗ್ರಹ

ಗಂಗಾವತಿ.
ನಗರದ ಅಂಬೇಡ್ಕರ್ ಮೂರ್ತಿಗೆ ಅವಮಾನ ಮಾಡಿರುವ ಘಟನೆಯನ್ನು ಮಾಜಿ ಎಂಎಲ್‌ಸಿ ಹೆಚ್.ಆರ್.ಶ್ರೀನಾಥ ಖಂಡಿಸಿದ್ದು, ತಕ್ಷಣ ಕಿಡಿಕೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಸೋಮವಾರ ಬೆಳೆಗ್ಗೆ ಘಟನೆಯನ್ನು ಖಂಡಿಸಿ ವಿವಿಧ ದಲಿತಪರ ಸಂಘಟನೆ ಮುಖಂಡರು, ಹೋರಾಟಗಾರರು ವೃತ್ತದಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು ಸ್ಥಳದಲ್ಲಿದ್ದ ಹೆಚ್ಚುವರಿ ಎಸ್‌ಪಿ, ಡಿವೈಎಸ್‌ಪಿ, ತಹಶೀಲ್ದಾರ, ಪೌರಾಯುಕ್ತರಿಗೆ ಸೂಚನೆ ನೀಡಿ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಿದರು. ನಗರದಲ್ಲಿ ಅಂಬೇಡ್ಕರ್ ಮೂರ್ತಿಗೆ ಯಾರೋ ಕಿಡಿಗೇಡಿಗಳು ಅವಮಾನ ಮಾಡಿರುವುದು ಖಂಡನೀಯವಾಗಿದೆ. ಘಟನೆಗೆ ಕಾರಣರಾಗಿರುವವರನ್ನು ತಕ್ಷಣ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು. ನಗರದಲ್ಲಿ ಶಾಂತಿ, ಸುವವ್ಯಸ್ಥೆ ಕಾಪಾಡಲು ಎಲ್ಲರು ಮುಂದಾಗಬೇಕು. ಈ ರೀತಿ ಘಟನೆ ನಡೆದಿರುವುದು ಕೇವಲ ದಲಿತರಿಗೆ ಅಷ್ಟೇ ಅಲ್ಲ. ನಮಗೆಲ್ಲ ನೋವ್ವಾಗಿದೆ. ಇಂತಹ ಸೂಕ್ಷ್ಮ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಸೂಚನೆ ನೀಡಿದರು. ಮತ್ತು ಸಂಘಟನೆಯ ಮುಖಂಡರೊಂದಿಗೆ ಚರ್ಚಿಸಿ ಇದನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸೋಣ. ಆದರೆ ಅಂಬೇಡ್ಕರ್ ಮೂರ್ತಿಯನ್ನು ಈಗ ಸ್ವಚ್ಚಗೊಳಿಸಿ ಪೂಜೆ ಸಲ್ಲಿಸೋಣ. ಎರಡು ದಿನದಲ್ಲಿ ಕಿಡಿಗೇಡಿಗಳನ್ನು ಬಂಧಿಸಲು ಗಡುವು ನೀಡೋಣ ಎಂದು ಸಮಾಧಾನಪಡಿಸಿದರು. ಸ್ಥಳಕ್ಕೆ ಹೆಚ್ಚುವರಿ ಎಸ್‌ಪಿ ಹೇಮಂತಕುಮಾರ ಆಗಮಿಸಿ ಈಗಾಗಲೇ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಿಡಿಗೇಡಿಗಳನ್ನು ಪತ್ತೆ ಹೆಚ್ಚಲು ಪೊಲೀಸ್ ತಿಂಡ ನಿಯೋಜಿಸಲಾಗುತ್ತಿದೆ. ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಎಲ್ಲಾ ಅಧಿಕಾರಿಗಳ ಭರವಸೆಗೆ ಒಪ್ಪಿದ ಪ್ರತಿಭಟನಾಕಾರರು ಎರಡು ದಿನದಲ್ಲಿ ಕಿಡಿಗೇಡಿಗಳನ್ನು ಬಂಧಿಸುವಂತೆ ಗಡುವು ನೀಡಿ ಪ್ರತಿಭಟನೆ ಅಂತ್ಯಗೊಳಿಸಿ ಅಂಬೇಡ್ಕರ್ ಮೂರ್ತಿ ಸ್ವಚ್ಚಗೊಳಿಸಿ ಹಾರ ಹಾಕಿ ಪೂಜೆ ಸಲ್ಲಿಸಿದರು. ವಾತಾವರಣ ತಿಳಿಗೊಳಿಸಿದರು.

Related Articles

Leave a Reply

Your email address will not be published. Required fields are marked *

Back to top button