ಶ್ರೀರಾಮಮಂದಿರ ಉದ್ಘಾಟನೆಗೆ ಕೈಜೋಡಿಸಿದ ಕಾಂಗ್ರೆಸ್
ಶ್ರೀರಾಮಮಂದಿರ ಉದ್ಘಾಟನೆಗೆ ಕೈಜೋಡಿಸಿದ ಕಾಂಗ್ರೆಸ್
ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ಎಲ್ಲಾ ದೇವಸ್ಥಾನಗಳಲ್ಲಿ ಜ.22ರಂದು ವಿಶೇಷ ಪೂಜೆಗೆ ಸರ್ಕಾರ ಆದೇಶ
ಸಮರ್ಥವಾಣಿ ವಾರ್ತೆ
ಬೆಂಗಳೂರು,ಜ.8: ಅಯೋಧ್ಯೆ ಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ದಿನಗಣನೆ ಪ್ರಾರಂಭವಾಗಿದೆ. ಶ್ರೀರಾಮ ಮಂದಿರ ಉದ್ಘಾಟನೆಯ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ದೊಡ್ಡ ಮಟ್ಟದ ವಾಕ್ಸಮರ ನಡೆಯುತ್ತಿದೆ. ರಾಮಮಂದಿರ ನಿರ್ಮಾಣದ ಸಂಕಲ್ಪ ಮಾಡಿ ಪ್ರಾರಂಭವಾಗಿರುವ ಬಿಜೆಪಿ ಈಗ ರಾಮಮಂದಿರ ಉದ್ಘಾಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿ ರುವುದು ಸಹಜ ಪ್ರಕ್ರೀಯೆ. ಆದರೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸುತ್ತಾ ಬಂದಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದ್ದು, ರಾಜ್ಯದಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯ ವಿಷಯವನ್ನು ಬಿಜೆಪಿಗೆ ಲಾಭವಾಗು ವುದಕ್ಕೆ ಬ್ರೇಕ್ ಹಾಕಲು ಮುಂದಾಗಿ ಈಗ ಕಾಂಗ್ರೆಸ್ ಸರಕಾರ ಮಂದಿರ ಉದ್ಘಾಟನೆಗೆ ಸಂಪೂರ್ಣ ಸಹಕಾರ ನೀಡಲು ಮುಂದಾ ಗಿದೆ. ಈ ನಿಮಿತ್ಯ ಜ.೨೨ ರಂದು ಅಯೋಧ್ಯೆ ಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಸಮಯದಲ್ಲಿ ರಾಜ್ಯದಲ್ಲಿ ರುವ ಧಾರ್ಮಿಕ ಧತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಿಂದು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಆದೇಶ ಮಾಡಿ ಹಿಂದೂಗಳ ಭಾವನಗೆ ಬೆಂಬಲ ನೀಡಿ ತನ್ನ ವಿರೋಧವನ್ನು ಬದಿಗೆ ಸರಿಸಿದೆ. ಇದು ಬಿಜೆಪಿಗೂ ಬಿಸಿ ತುಪ್ಪವಾಗಿ ಪರಿಣಮಿಸಿದೆ.
ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಜ.೬ ರಂದು ವಿಶೇಷ ಆದೇಶ ಹೊರಡಿಸಿದ್ದು, ಜ.೨೨ ರಂದು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಹೊಸದಾಗಿ ನಿರ್ಮಿಸಿರುವ ಶ್ರೀರಾಮ ಮಂದಿರ ಉದ್ಘಾಟನೆ ಯಾಗುತ್ತಿದೆ. ಅಂದು ರಾಮ ಮಂದಿರದಲ್ಲಿ ಶ್ರೀರಾಮನ ವಿಗ್ರಹ ಪ್ರಾಣ ಪ್ರತಿಷ್ಟಾಪನೆ ನಡೆಯಲಿದೆ. ಇದು ರಾಜ್ಯದ ಜನತೆಗೂ ಒಳ್ಳೆಯ ಸಂಗತಿಯಾಗಿದೆ. ಈ ಹಿನ್ನೆಲೆಯಲ್ಲಿ ಅಂದು ನಡೆಯುವ ವಿಶೇಷ ಸಂದರ್ಭದಲ್ಲಿ ರಾಜ್ಯದ ಜನತೆಗೆ ಒಳ್ಳೆಯದಾಗಲು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಮಂಗಳಾರತಿ ನಡೆಸುವಂತೆ ಆದೇಶ ಮಾಡಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಯ ಲಾಭವನ್ನು ಬಿಜೆಪಿ ಪಡೆದುಕೊಳ್ಳಲು ಮುಂದಾಗಿರುವುದಕ್ಕೆ ಎಚ್ಚೆತ್ತ ಕಾಂಗ್ರೆಸ್ ಸರಕಾರ ಅಂದು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸುವಂತೆ ಆದೇಶಿಸಿ ರಾಮ ಭಕ್ತರ ಮೆಚ್ಚುಗೆಗೆ ಪಾತ್ರವಾಗಿದೆ. ರಾಜಕೀಯವಾಗಿ ಎರಡು ಪಕ್ಷಗಳಲ್ಲಿ ಕೆಸರೆರಚಾಟ ನಡೆಯುತ್ತಿದ್ದರೂ ದೇವಾಲಯ ಗಳಲ್ಲಿ ಪೂಜೆ ನಡೆಸುವಂತೆ ಆದೇಶಿಸಿರುವುದು ತಮಗೆ ಸಂತೋಷ ಉಂಟು ಮಾಡಿದೆ ಎಂದು ರಾಮಭಕ್ತರು ಕಾಂಗ್ರೆಸ್ ಸರಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.