ಕೊಪ್ಪಳಜಿಲ್ಲಾ ಸುದ್ದಿಗಳು
ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣ ಕೊಪ್ಪಳ ಬಂದ್; ಅಂಗಡಿ ಮುಂಗಟ್ಟುಗಳು ತೆರೆದಿಲ್ಲ

ಕೊಪ್ಪಳ: ವಾರದ ಹಿಂದೆ ಕೊಪ್ಪಳದಲ್ಲಿ ನಡೆದ ಗವಿಸಿದ್ದಪ್ಪ ನಾಯಕ್ ಕೊಲೆ ಕೃತ್ಯ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಘಟಕವು ಇಂದು ಪ್ರತಿಭಟನೆಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ ನಗರ ಸಂಪೂರ್ಣ ಸ್ತಬ್ಧಗೊಂಡಿದೆ.

ಖಾಸಗಿ ಶಾಲೆಗಳ ಒಕ್ಕೂಟ ಇಂದು ಶಾಲೆಗಳಿಗೆ ರಜೆ ಘೋಷಿಸಿದೆ. ಬಹುತೇಕ ಅಂಗಡಿಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಮುಚ್ಚಿವೆ. ತೆರದಿದ್ದ ಅಂಗಡಿಗಳನ್ನು ಪ್ರತಿಭಟನೆಗೆ ಕರೆಯ ಬೆಂಬಲಿಗರು ಮುಚ್ಚಿಸುತ್ತಿರುವುದು ಕಂಡುಂಬಂದಿದೆ.

ಸರಕಾರಿ ಶಾಲೆಗಳು ಮತ್ತು ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದು, ಇವುಗಳಿಗೆ ಯಾವುದೇ ರಜೆ ಘೋಷಣೆ ಮಾಡಲಾಗಿಲ್ಲ.
ನಗರದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಜಾಗೃತೆ ವಹಿಸಿದ್ದಾರೆ.