ಕೊಪ್ಪಳಜಿಲ್ಲಾ ಸುದ್ದಿಗಳು

ಒಳ ಮೀಸಲಾತಿ ತಾರತಮ್ಯ ಸರಿಪಡಿಸಲು ಸರ್ಕಾರಕ್ಕೆಚಲವಾದಿ ಮಹಾಸಭಾ ಒತ್ತಾಯ

GBNEWS KANNADA NEWS

ಕೊಪ್ಪಳ ಆಗಸ್ಟ್ 13, ಒಳ ಮೀಸಲಾತಿ ವರದಿಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಿ ನ್ಯಾಯ ದೊರಕಿಸಿಕೊಡಲು ಕರ್ನಾಟಕ ರಾಜ್ಯ ಚಲವಾದಿ ಮಹಾಸಭಾ ವತಿಯಿಂದ ಸರ್ಕಾರಕ್ಕೆ ದೂರು ಸಲ್ಲಿಸಿ ಒತ್ತಾಯ ಪಡಿಸಲಾಗಿದೆ ಎಂದು ಚಲವಾದಿ ಮಹಾಸಭಾ ರಾಜ್ಯ ಉಪಾಧ್ಯಕ್ಷ ಕೊಪ್ಪಳದ ಕೃಷ್ಣ ಇಟ್ಟಂಗಿರವರು ಮುಖ್ಯಮಂತ್ರಿ ಅವರಿಗೆ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ
ಅವರು ಮಂಗಳವಾರ ಇಲ್ಲಿನ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತ
ನ್ಯಾಯಮೂರ್ತಿ ನಾಗಮೋಹನ್‌ದಾಸ್‌ರವರ ಅಧ್ಯಕ್ಷತೆಯ ಒಳ ಮೀಸಲಾತಿ, ಏಕ ಸದಸ್ಯ ವಿಚಾರಣಾ ಆಯೋಗವು ದಿನಾಂಕ: 2025 ರ ಆಗಸ್ಟ್ 4 ರಂದು ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಹರೈಯ್ಯ. ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಬಲಗೈ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಅತ್ಯಂತ ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಬಲಗೈ ಸಮುದಾಯದ ಜನ ಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಕಡಿಮೆ ಮಾಡಿರುವುದಲ್ಲದೇ, ಜಾತಿಯೇ ಅಲ್ಲದ ಆದಿಕರ್ನಾಟಕ, ಆದಿದ್ರಾವಿಡ, ಆದಿಅಂದ ಸಮೂಹಕ್ಕೆ ಶೇಕಡ 1ರಷ್ಟು ಮೀಸಲಾತಿ ನಿಗದಿಪಡಿಸಿರುವುದನ್ನು ರದ್ದುಪಡಿಸಿ, ಸದರಿ ಮೀಸಲಾತಿಯನ್ನು ಸಂಬಂಧಿಸಿದ ಜಾತಿಗಳಿಗೆ ಹಂಚಿಕೆ ಮಾಡಲು ಸಚಿವ ಸಂಪುಟದ ಉಪ ಸಮಿತಿ ರಚಿಸಿ ಅಗತ್ಯ ಕ್ರಮ ಕೈಗೊಳ್ಳುವ
ಕುರಿತು
ನ್ಯಾಯಮೂರ್ತಿ ನಾಗಮೋಹನ್ ದಾಸ್, ಒಳ ಮೀಸಲಾತಿ, ಏಕ ಸದಸ್ಯ ವಿಚಾರಣಾ ಆಯೋಗವು ಪರಿಶಿಷ್ಟ ಜಾತಿಯ ಕುಟುಂಬಗಳನ್ನು ಸಮೀಕ್ಷೆ ನಡೆಸಿ ದಿ: 04.ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಸದರಿ ವರದಿ ಸಿದ್ಧಪಡಿಸಲು ಮೇ-5-2025 ರಿಂದ ಜುಲೈ-6-2025ರವರೆಗೆ ನಡೆದ ಸಮೀಕ್ಷೆಯಲ್ಲಿ 27.24 ಲಕ್ಷ ಕುಟುಂಬಗಳ 1.07 ಕೋಟಿ ಜನರನ್ನು ಸಮೀಕ್ಷೆ ಮಾಡಿದ್ದು, ಪ್ರಸ್ತುತ 5 ಗುಂಪುಗಳಾಗಿ ವಿಂಗಡಿಸಿ ಅತೀ ಹಿಂದುಳಿದ ಗುಂಪಿಗೆ ಶೇಕಡ 1 ರಷ್ಟು, ಎಡಗೈ ಗುಂಪಿಗೆ ಶೇಕಡ 6 ರಷ್ಟು, ಬಲಗೈ ಗುಂಪಿಗೆ ಶೇಕಡ 5 ರಷ್ಟು, ಬಂಜಾರ, ಭೋವಿ, ಕೊರಮ, ಕೊರಚ, ಅಸ್ಪೃಶ್ಯರಲ್ಲದ ಜಾತಿಗಳಿಗೆ ಶೇಕಡ 4 ರಷ್ಟು, ಜಾತಿಯೇ ಅಲ್ಲದ ಗುಂಪುಗಳಿಗೆ ಅಂದರೆ, ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಅಂದ್ರ ಗುಂಪುಗಳಿಗೆ ಶೇಕಡ 1ರಷ್ಟು ಮೀಸಲಾತಿಯನ್ನು ನಿಗದಿಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ ಇದನ್ನು ಸರಿಪಡಿಸಿ ಆಗಿರುವ ತಾರತಮ್ಯ ಸರಿ ಮಾಡಿ ಒಳ ಮೀಸಲಾತಿ ನ್ಯಾಯ ಸಮ್ಮತವಾಗಿ ಸಿಗುವಂತೆ ಕರ್ನಾಟಕ ಛಲವಾದಿ ಮಹಾಸಭಾ ರಾಜ್ಯ ಉಪಾಧ್ಯಕ್ಷ ಕೃಷ್ಣ ಇಟ್ಟಂಗಿ ಯವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ದೂರು ಸಲ್ಲಿಸಿ ಪ್ರಕಟಣೆ ಮೂಲಕ ಒತ್ತಾಯ ಮಾಡಿದ್ದಾರೆ
ಈ ಕುರಿತು ಹೇಳಿಕೆ ನೀಡಿದ ಅವರು ಕೂಡಲೇ ಒಳ ಮೀಸಲಾತಿ ವಿಷಯದಲ್ಲಿ ಆಗಿರುವ ತಾರತಮ್ಯ ಸರಿಪಡಿಸಬೇಕು ನಮಗೆ ಆಗುತ್ತಿರುವ ಅನ್ಯಾಯ ಸರಿಪಡಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಅವರು ಒತ್ತಾಯಿಸಿದರು
ಪತ್ರಿಕಾಗೋಷ್ಠಿಯಲ್ಲಿ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಹಾಗೂ ನಗರಸಭಾ ಸದಸ್ಯ ಸಿದ್ದು ಮ್ಯಾಗೇರಿ ನಗರಸಭಾ ಸದಸ್ಯ ಹಾಗೂ ಸಮಾಜದ ಮುಖಂಡ ಮುತ್ತುರಾಜ್ ಕುಷ್ಟಗಿ ನಾಗರಾಜ ನಂದಾಪುರ ಶಾಂತಕುಮಾರ್ ಸೋಂಪುರ್ ಹುಸೇನಪ್ಪ ಹಂಚಿನಾಳ ಸೇರಿದಂತೆ ಅನೇಕರು ಉಪಸಿತರಿದ್ದರು,

Related Articles

Leave a Reply

Your email address will not be published. Required fields are marked *

Back to top button
error: Content is protected !!