ಸಾಮಾಜಿಕ ಜಾಲತಾಣಗಳ ಸದ್ಬಳಕೆ ಅಗತ್ಯ
ಸಾಮಾಜಿಕ ಜಾಲತಾಣಗಳ ಸದ್ಬಳಕೆ ಅಗತ್ಯ
ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಬಿತ್ತಿ ಪತ್ರಗಳ ಬಿಡುಗಡೆಗೊಸಿದ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ವಿದ್ಯಾರ್ಥಿಗಳಿಗೆ ಕಿವಿಮಾತು
ಸಮರ್ಥವಾಣಿ ವಾರ್ತೆ
ಕೊಪ್ಪಳ,ಜ.10: ಪ್ರಸ್ತುತ ಭಾರೀ ಪರಿಣಾಮಕಾರಿಯಾಗಿರುವ ಸಾಮಾಜಿಕ ಜಾಲತಾಣಗಳನ್ನು ಅತ್ಯಂತ ಜಾಗೂರಕತೆಯಿಂಸ ಸದ್ಬಳಕೆ ಮಾಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ಸಾರಿಗೆ ಮತ್ತು ಪೊಲೀಸ್ ಇಲಾಖೆಗಳು ನಗರದ ಶ್ರೀ ಗವಿಸಿದ್ಧೇಶ್ವರ ಮಹಾವಿದ್ಯಾಲಯದಲ್ಲಿ ಜಂಟಿಯಾಗಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಬಿತ್ತಿ ಪತ್ರಗಳ ಬಿಡುಗಡೆ ಹಾಗೂ ವಾಹನ ಕಲಿಕಾ ಲೈಸನ್ಸ್‌ಗೆ ಅರ್ಜಿ ಸಲ್ಲಿಕೆ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ತಯಾರಿ ಕುರಿತಾಗಿ ಹಾಗೂ ಸಾಮಾಜಿಕ ಜಾಲತಾಣಗಳ ಸರಿಯಾದ ಬಳಕೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಲಕ್ಷ್ಮಿಕಾಂತ ನಾಲ್ವರ್ ಮಾತನಾಡಿ, ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳ ಕುರಿತು ಮಾಹಿತಿಯನ್ನು ಹಂಚಿಕೊಂಡರು ಮತ್ತು ಕಲಿಕಾ ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸು ವಿಧಾನವನ್ನು ಕುರಿತು ಪ್ರಾತ್ಯಕ್ಷಿಕತೆ ಮೂಲಕ ಮಾಹಿತಿ ನೀಡಿದರು.
ಹಿರಿಯ ಮೊಟಾರ್ ವಾಹನಗಳ ನಿರೀಕ್ಷಕರುಗಳಾದ ಬಿ.ಪಿ.ಕೃಷ್ಣೆಗೌಡ ಮತ್ತು ಜಿ.ಎನ್.ಸುರೇಶ ಮತ್ತು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಚನ್ನಬಸವ ಎ., ಶ್ರೀ ಗವಿಸಿದ್ದೇಶ್ವರ ಮಹಾವಿದ್ಯಾಲಯದ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಘಟಕದ ಸಂಯೋಜಕ ಪ್ರವೀಣ ಹಾದಿಮನಿ ಉಪಸ್ಥಿತರಿದ್ದರು. ಡಾ.ಪ್ರಶಾಂತ ಕೊಂಕಲ್ ಸ್ವಾಗತಿಸಿದರು. ವಿದ್ಯಾರ್ಥಿನಿಯರುಗಳಾದ ಕಾವೇರಿ ಕಿಲಾರಿ ನಿರೂಪಿಸಿದರು, ಕವಿತಾ ಪ್ರಾರ್ಥಿಸಿದರು.