ಸಮೀಕ್ಷೆ ಕಾರ್ಯದಲ್ಲಿ ಕರ್ತವ್ಯ ಲೋಪ ! ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಮಾನತ್

ವರದಿ ಸುಂದರರಾಜ್ BA ಕಾರಟಗಿ
ಲಿಂಗಸುಗೂರು : ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಲಿಂಗಸೂಗೂರು ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ್ ರಾಠೋಡ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ, ರಮೇಶ್ ರಾಥೋಡ್ ಇವರು ರಾಜ್ಯ ಸರ್ಕಾರದ ಸಮೀಕ್ಷಾ ಕಾರ್ಯ ಆದೇಶಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದು ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಅವರಿಗೆ ವಹಿಸಿಕೊಟ್ಟಿರುವ ಕೆಲಸವನ್ನು ಮಾಡದೆ ಸಮೀಕ್ಷಾ ಕಾರ್ಯಕ್ಕೆ ಸಹಕರಿಸದೆ ಬೇಜವಾಬ್ದಾರಿಯನ್ನು ತೋರಿದ್ದರು.
ಈ ಕುರಿತು ಲಿಂಗಸೂಗೂರು ತಹಸಿಲ್ದಾರರಾದ ಸತ್ಯಮ್ಮ ಇವರು ರಮೇಶ್ ಜಿ ರಾಥೋಡ್ ಇವರಿಗೆ ಸಮೀಕ್ಷಾ ಕಾರ್ಯದಲ್ಲಿ ಪ್ರಗತಿ ಸಾಧಿಸುವಂತೆ ಸೂಚನೆಯೂ ನೀಡಿದ್ದರು.ಆದರೂ ಅವರು ಸಮೀಕ್ಷಾ ಕಾರ್ಯದಲ್ಲಿ ಬೇಜವಾಬ್ದಾರಿತನ ತೋರಿಸಿದ್ದರು. ಇದರಿಂದ ಸಮೀಕ್ಷಾ ಕಾರ್ಯದ ಪ್ರಗತಿ ಕುಂಠಿತಗೊಳ್ಳುತ್ತಿರುವ ಬಗ್ಗೆ ರಮೇಶ್ ರಾಥೋಡ್ ಇವರ ವಿರುದ್ಧ ತಹಸಿಲ್ದಾರರಾದ ಸತ್ಯಮ್ಮ ಜಿಲ್ಲಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದರು.
ಕರ್ತವ್ಯದಲ್ಲಿ ಬೇಜವಾಬ್ದಾರಿತನ ತೋರಿ, ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಇವರನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ. ರಾಜ್ಯ ಸರ್ಕಾರದ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಈಗಾಗಲೇ ರಾಜ್ಯದಲ್ಲಿ ಹಲವೆಡೆ ಅಧಿಕಾರಿಗಳು ಸಮೀಕ್ಷಾ ಕಾರ್ಯದಲ್ಲಿ ಪ್ರಗತಿ ಸಾಧಿಸದೆ ಬೇಜವಾಬ್ದಾರಿತನ ತೋರಿರುವ ಬಗ್ಗೆ ಅಧಿಕಾರಿಗಳಿಗೆ ನೋಟಿಸ್ ಸಹ ನೀಡಲಾಗಿದೆ ಮತ್ತು ಕೆಲವರು ಅಮಾನತ್ತು ಗೊಂಡಿದ್ದಾರೆ ಆ ಸರದಿಯಲ್ಲಿ ಲಿಂಗಸೂಗೂರು ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ್ ರಾಠೋಡ್ ಕರ್ತವ್ಯಲೋಪದಡಿ ಅಮಾನತುಗೊಂಡಿದ್ದಾರೆ.