ಕಾರಟಗಿ

ಸಚಿವ ಶಿವರಾಜ್ ಎಸ್ ತಂಗಡಗಿ ಅವರ ಸ್ವ ಕ್ಷೇತ್ರ ಸಮೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ! ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ಸಚಿವರು

ವರದಿ ಸುಂದರರಾಜ್ BA ಕಾರಟಗಿ 

ಕಾರಟಗಿ ಅಕ್ಟೋಬರ್ 04.2025: ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಸಮೀಕ್ಷೆ ಕಾರ್ಯ ನಡೆಸಲು ಸರ್ಕಾರಿ ಇಲಾಖೆಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಸಮೀಕ್ಷಾ ಕಾರ್ಯದಲ್ಲಿ ಲೋಪಗಳು ನಡೆಯದಂತೆ ಗಣತಿದಾರರಿಗೆ ಸೂಚನೆಗಳನ್ನು ನೀಡಿ ಆಯಾ ಸರ್ಕಾರಿ ಇಲಾಖೆಗಳು ಸಂಬಂಧಿಸಿದ ಅಧಿಕಾರಿಗಳನ್ನು ಗಣತಿದಾರರನ್ನಾಗಿ ನೇಮಿಸಲಾಗಿತ್ತು. ಸಮೀಕ್ಷೆ ಕಾರ್ಯ ಕೈಗೊಳ್ಳದೆ ಸಮೀಕ್ಷಾ ಕಾರ್ಯದಲ್ಲಿ ಪ್ರಗತಿಯನ್ನು ಸಾಧಿಸದೆ ಮತ್ತು ಸಮೀಕ್ಷಾ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳು ಅಮಾನತು ಆಗಿದ್ದಾರೆ.ಕಂದಾಯ ಇಲಾಖೆ ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಮತ್ತು ಶಿಶು ಅಭಿವೃದ್ಧಿ ಇಲಾಖೆಗಳು ಸೇರಿದಂತೆ ಸಮೀಕ್ಷೆಯ ಕಾರ್ಯದಲ್ಲಿ ಹಲವು ಅಧಿಕಾರಿಗಳು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಆಯಾ ತಾಲೂಕಿನ ತಹಸಿಲ್ದಾರರ ನಿರ್ದೇಶನ ಮತ್ತು ಸೂಚನೆಗಳನ್ನು ಅನುಸರಿಸಿ ಸಮೀಕ್ಷಾ ಕಾರ್ಯದಲ್ಲಿ ಪ್ರಗತಿ ಸಾಧಿಸಲು ಹಗಲಿರುಳು ಶ್ರಮಿಸಿ ಗಣತಿದಾರರು ಸಮೀಕ್ಷಾ ಕಾರ್ಯ ಮುಂದುವರಿಸಿದ್ದಾರೆ.
ನಾಡ ಹಬ್ಬ ದಸರಾ ನಡುವೆಯೂ ಅಧಿಕಾರಿಗಳು ರಜೆ ಇಲ್ಲದೆ ಸರ್ಕಾರದ ಆದೇಶದ ಪಾಲನೆಯಲ್ಲಿ ತಲ್ಲೀನರಾಗಿದ್ದಾರೆ. ಸರ್ಕಾರದ ಆದೇಶದ ಪಾಲನೆಯಲ್ಲಿ ಅಧಿಕಾರಿಗಳು ಶಿಸ್ತಿನ ಸಿಪಾಯಿಗಳಂತೆ ಸರ್ವೆ ಕಾರ್ಯ ಮಾಡುತ್ತಿದ್ದಾರೆ. ಸಮೀಕ್ಷಾ ಕಾರ್ಯದಲ್ಲಿ ಪ್ರಗತಿ ಸಾಧಿಸಿದವರಿಗೆ ಪ್ರಶಂಸಾ ಪತ್ರ ಒಂದೆಡೆಯಾದರೆ ಪ್ರಗತಿ ಪ್ರಗತಿ ಸಾಧಿಸದೆ ನಿರ್ಲಕ್ಷ ವಹಿಸಿದವರಿಗೆ ಮೇಲಾಧಿಕಾರಿಗಳಿಂದ ನೋಟಿಸ್ ಮತ್ತು ತಲೆದಂಡ ಆಗಿರುವ ಘಟನೆಗಳು ಕೂಡ ನಡೆದು ಹೋಗಿವೆ,ಕಾರಟಗಿ ಸಮೀಕ್ಷಾ ಕಾರ್ಯದಲ್ಲಿ ರಾಜ್ಯಕ್ಕೆ ಪ್ರಥಮ :
ಈ ನಡುವೆ ಸಮೀಕ್ಷಾ ಕಾರ್ಯದಲ್ಲಿ ರಾಜ್ಯಮಟ್ಟದಲ್ಲಿ ಉತ್ತಮ ಪ್ರಗತಿ ಮತ್ತು ಸಾಧನೆ ಮಾಡಿರುವುದು ಬೆಳಕಿಗೆ ಬಂದಿದೆ, ಕನ್ನಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಅವರು ಪ್ರತಿನಿಧಿಸುವ ಸ್ವ ಕ್ಷೇತ್ರವಾದ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿ ತಾಲೂಕ ಸಮೀಕ್ಷಾ ಕಾರ್ಯದಲ್ಲಿ ಅಪರೂಪದ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಹೆಸರು ಪಡೆದಿದೆ. ಹೌದು ಕಾರಟಗಿ ತಾಲೂಕ ಸಮೀಕ್ಷಾ ಕಾರ್ಯದಲ್ಲಿ ಉತ್ತಮ ಪ್ರಗತಿ ಸಾಧಿಸಿ ರಾಜ್ಯಕ್ಕೆ ಮಾದರಿಯಾಗಿದೆ, ಒಟ್ಟು 274 ಬ್ಲಾಕ್ ಹೊಂದಿರುವ 28803 ಮನೆಗಳ ಸಮೀಕ್ಷಾ ಗುರಿಯನ್ನು ಯಶಸ್ವಿಯಾಗಿ ಮಾಡಲಾಗಿದೆ.100.60%ರಷ್ಟು ಪ್ರಗತಿ ಸಾಧಿಸಲಾಗಿದೆ. ಕಾರಟಗಿ ತಹಶಿಲ್ದಾರರಾದ ಕುಮಾರಸ್ವಾಮಿ ಅವರ ಮಾರ್ಗದರ್ಶನ ಮತ್ತು ಅವರ ನಿರ್ದೇಶನದಲ್ಲಿ ಕಂದಾಯ ಇಲಾಖೆ ಶಿಕ್ಷಣ ಇಲಾಖೆ ಆರೋಗ್ಯ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಗಲಿರುಳು ಶ್ರಮಿಸಿ ಪ್ರಾಮಾಣಿಕ ಕರ್ತವ್ಯ ನಿಷ್ಠೆಯಿಂದ ಸಮೀಕ್ಷಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಶೇಕಡ ನೂರಕ್ಕೆ ನೂರರಷ್ಟು ಸಮೀಕ್ಷಾ ಕಾರ್ಯ ಪ್ರಗತಿ ಸಾಧಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ಸಮೀಕ್ಷಾ ಕಾರ್ಯವನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ನಿರ್ವಹಿಸಿ ಸಮೀಕ್ಷಾ ಕಾರ್ಯದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವಲ್ಲಿ ತಾಲೂಕ ಆಡಳಿತ ಯಶಸ್ವಿಯಾಗಿದೆ.ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಇಲಾಖಾವಾರು ಎಲ್ಲಾ ಅಧಿಕಾರಿಗಳ ಮತ್ತು ಶಿಕ್ಷಕರ ಪ್ರಾಮಾಣಿಕ ಪ್ರಯತ್ನದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಎಲ್ಲಾರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಕುಮಾರಸ್ವಾಮಿ ಎಂ ತಹಸಿಲ್ದಾರರು ಕಾರಟಗಿ

ಸಮೀಕ್ಷಾ ಕಾರ್ಯದಲ್ಲಿ ನನ್ನ ಸ್ವಕ್ಷೇತ್ರ ರಾಜ್ಯಕ್ಕೆ ಪ್ರಥಮ ಬಂದಿರೋದು ತುಂಬಾ ಸಂತೋಷ ತಂದಿದೆ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿಗಳಿಗೆ ಸಹಕರಿಸಿದ ಕ್ಷೇತ್ರದ ಸಮಸ್ತ ಜನತೆಗೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ..

ಶಿವರಾಜ್ ಎಸ್ ತಂಗಡಗಿ
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಕೊಪ್ಪಳ ಜಿಲ್ಲಾ ಉಸ್ತುವಾರಿ

Related Articles

Leave a Reply

Your email address will not be published. Required fields are marked *

Back to top button
error: Content is protected !!