
ಬೇಟಿ ಬಚಾವೋ – ಬೇಟಿ ಪಡಾವೋ ಕಾರ್ಯಕ್ರಮ ತಳಕಲ್ ಗ್ರಾಮದ ಸರ್ಕಾರಿ ಹೆಣ್ಣುಮಕ್ಕಳ ಪ್ರೌಢಶಾಲೆಯಲ್ಲಿ ಯಶಸ್ವಿ


ವರದಿ: ಚನ್ನಯ್ಯ ಹಿರೇಮಠ, ಕುಕನೂರು
ಕುಕನೂರು, ಜು.15: ಕುಕನೂರು ತಾಲೂಕಿನ ತಳಕಲ್ ಗ್ರಾಮದ ಸರ್ಕಾರಿ ಹೆಣ್ಣುಮಕ್ಕಳ ಪ್ರೌಢಶಾಲೆಯಲ್ಲಿ ಬುಧವಾರ ಬೇಟಿ ಬಚಾವೋ – ಬೇಟಿ ಪಡಾವೋ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಮಕ್ಕಳ ಸಾಗಾಣಿಕೆ ತಡೆ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, PCPNDT ಕಾಯ್ದೆ ಹಾಗೂ ಮುಟ್ಟಿನ ನೈರ್ಮಲ್ಯದ ಕುರಿತು ಜಾಗೃತಿ ಮೂಡಿಸಲಾಯಿತು.
ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶಿಕ್ಷಕ ಪ್ರಮೋದರಡ್ಡಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯೋಪಾಧ್ಯಾಯರಾದ ವಿ.ಎಂ. ಸಜ್ಜನ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕಿ ಕೃಷ್ಣವೇಣಿ ಎನ್. ಅವರು ಎಲ್ಲರನ್ನು ಸ್ವಾಗತಿಸಿದರು.
ಹಿರಿಯ ಮೇಲ್ವಿಚಾರಕಿ ಜಯಲಕ್ಷ್ಮೀ ಅವರು ಕಾರ್ಯಕ್ರಮದ ಉದ್ದೇಶ ಮತ್ತು ರೂಪುರೇಷೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಪ್ರತಿಭಾ ಕಾಶಿಮಠ ಅವರು ಬಾಲ್ಯವಿವಾಹ ನಿಷೇಧ ಹಾಗೂ PCPNDT ಕಾಯ್ದೆಗಳ ಕುರಿತು ಮಾಹಿತಿ ನೀಡಿದರು. ಮಿಷನ್ ಶಕ್ತಿ ಯೋಜನೆಯ ಸಂಯೋಜಕರು ಬೇಟಿ ಬಚಾವೋ – ಬೇಟಿ ಪಡಾವೋ ಯೋಜನೆಯ ಉದ್ದೇಶಗಳನ್ನು ವಿವರಿಸಿದರು. ಗ್ರಾಮ ಪಂಚಾಯತ್ ಪಿಡಿಓ ವೀರನಗೌಡ ಪಾಟೀಲ ಅವರು ಕಾವಲು ಸಮಿತಿಯ ಕಾರ್ಯವೈಖರಿ ಮತ್ತು ಅದರ ಮಹತ್ವದ ಬಗ್ಗೆ ತಿಳಿಸಿದರು.
ಕೊನೆಯಲ್ಲಿ ಅಂಗನವಾಡಿ ಶಿಕ್ಷಕಿ ಸರ್ವಮಂಗಳಾ ಅವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ತಳಕಲ್ ಗ್ರಾಮದ ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ, ವಿಸ್ತಾರ ಸಂಸ್ಥೆಯ ಸಿಬ್ಬಂದಿ, ಮಿಷನ್ ಶಕ್ತಿ ಸಿಬ್ಬಂದಿ, ಗ್ರಾಮ ಪಂಚಾಯತ್ ಪಿಡಿಓ, ಆರೋಗ್ಯ ಇಲಾಖೆಯ ಸಿಬ್ಬಂದಿ, ಶಿಕ್ಷಕ ವೃಂದ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ವರದಿ: ಚನ್ನಯ್ಯ ಹಿರೇಮಠ, ಕುಕನೂರು



