Uncategorized

*ವಿದ್ಯಾನಂದ ಗುರುಕುಲ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಸ್ವಚ್ಛತಾ ಹಾಗೂ ಶ್ರಮದಾನ ಕಾರ್ಯಕ್ರಮ*

*ವಿದ್ಯಾನಂದ ಗುರುಕುಲ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದಿಂದ ಸ್ವಚ್ಛತಾ ಹಾಗೂ ಶ್ರಮದಾನ ಕಾರ್ಯಕ್ರಮ*

ಕುಕನೂರು, ಜು. 19: ರಾಷ್ಟ್ರಪ್ರಶಸ್ತಿ ವಿಜೇತ ವಿದ್ಯಾನಂದ ಗುರುಕುಲ ಶಿಕ್ಷಣ ವಿಶ್ವಸ್ಥ ಮಂಡಳಿಯ ಅಂಗಸಂಸ್ಥೆಯಾದ ವಿದ್ಯಾನಂದ ಗುರುಕುಲ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಕುಕನೂರಿನ ಶ್ರೀ ಮಹಮ್ಮಾಯ ದೇವಸ್ಥಾನದ ಆವರಣ ಹಾಗೂ ಕಲ್ಯಾಣಿ ಚಾಲುಕ್ಯರ ಕಾಲದ ಐತಿಹಾಸಿಕ ಶ್ರೀ ನವಲಿಂಗೇಶ್ವರ ದೇವಸ್ಥಾನದ ಸುತ್ತಮುತ್ತ ಸ್ವಚ್ಛತಾ ಮತ್ತು ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ಜಂಟಿ ಕಾರ್ಯದರ್ಶಿ ಶ್ರೀನಿವಾಸ್ ದೇಸಾಯಿ ಅವರ ಮಾರ್ಗದರ್ಶನದಲ್ಲಿ ಎನ್‌ಎಸ್‌ಎಸ್ ಕಾರ್ಯಕ್ರಮದ ಸಮನ್ವಯಾಧಿಕಾರಿ ಆರ್. ಕೆ. ಪಾಟೀಲ್, ದೈಹಿಕ ಶಿಕ್ಷಣ ಶಿಕ್ಷಕರಾದ ನರೇಂದ್ರ ಕುಮಾರ್ ರಾಟೋಡ್, ಉಪಪ್ರಾಚಾರ್ಯ ಸುರೇಶ್ ಹಳ್ಳಿಗುಡಿ, ಉಪನ್ಯಾಸಕಿಯರಾದ ಶ್ರೀಮತಿ ಹರಿಪ್ರಿಯಾ ಕುಲಕರ್ಣಿ, ಈರಮ್ಮ ಇಟಗಿ, ಬಸಮ್ಮ ಹಾಳಕೇರಿ, ಲಕ್ಷ್ಮಿ ಹಾಗೂ ಉಪನ್ಯಾಸಕರಾದ ಮೃತ್ಯುಂಜಯ ಸ್ವಾಮಿ ಮತ್ತು ಶ್ರೀಕಾಂತ್ ಕುಲಕರ್ಣಿ ಸೇರಿದಂತೆ ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಸಾಮಾಜಿಕ ಜವಾಬ್ದಾರಿಯ ಕುರಿತು ಅರಿವು ಮೂಡಿಸಲಾಯಿತು.

ಬಳಿಕ ವಿದ್ಯಾರ್ಥಿಗಳಿಗೆ ಸವಿರುಚಿಯಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ನಿವೃತ್ತ ಪ್ರಾಚಾರ್ಯ ಹಿರಿಯ ಕೆ. ಆರ್. ಕುಲಕರ್ಣಿ ಅವರು “ಶ್ರಮದಾನದ ಮಹತ್ವ” ಕುರಿತು ವಿಶೇಷ ಉಪನ್ಯಾಸ ನೀಡಿದರು. ಶ್ರೀಮತಿ ಹರಿಪ್ರಿಯಾ ಕುಲಕರ್ಣಿ ಅವರು ಹಾಡಿನ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ವಿದ್ಯಾರ್ಥಿಗಳು ಕಾರ್ಯಕ್ರಮದ ಅನುಭವ ಮತ್ತು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮವನ್ನು ಉಪನ್ಯಾಸಕ ಬಸವರಾಜ ಬಂಗಿ ನಿರೂಪಿಸಿದರು. ಆರ್. ಕೆ. ಪಾಟೀಲ್ ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕಾಲೇಜಿನ ಪ್ರಾಚಾರ್ಯ ಎನ್. ಪಾಂಡುರಂಗ ಹಾಗೂ ಆಡಳಿತಾಧಿಕಾರಿ ಬಿ. ಸಿ. ಹಿರೇಮಠ್ ಅವರು ಅಗತ್ಯ ಸಹಕಾರ ಮತ್ತು ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ
ವಿದ್ಯಾನಂದ ಗುರುಕುಲ ಪದವಿ ಪೂರ್ವ ಕಾಲೇಜಿನ ವಿಶ್ವಸ್ಥ ಮಂಡಳಿ, ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿಗಳು ಇತರರು ಇದ್ದರು.

ವರದಿ: ಚನ್ನಯ್ಯ ಹಿರೇಮಠ, ಕುಕನೂರು

Related Articles

Leave a Reply

Your email address will not be published. Required fields are marked *

Back to top button
error: Content is protected !!