Uncategorized

*ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ: ವರಿಷ್ಠರಿಗೆ ಧನ್ಯವಾದ, ಬಂಜಾರ ಸಮಾಜದ ಸಮಸ್ಯೆಗಳಿಗೆ ಆದ್ಯತೆ ನೀಡುವಂತೆ ಸುರೇಶ್ ಬಳೂಟಗಿ ಮನವಿ*

*ಗೋರ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಳೂಟಗಿ ಹೇಳಿಕೆ*

*ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ: ವರಿಷ್ಠರಿಗೆ ಧನ್ಯವಾದ, ಬಂಜಾರ ಸಮಾಜದ ಸಮಸ್ಯೆಗಳಿಗೆ ಆದ್ಯತೆ ನೀಡುವಂತೆ ಸುರೇಶ್ ಬಳೂಟಗಿ ಮನವಿ*

*ಗೋರ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಳೂಟಗಿ ಹೇಳಿಕೆ*

ಕುಕನೂರು, ಆ. 3: ಮಾಜಿ ಉಪಸಭಾಪತಿ ಹಾಗೂ ಶಾಸಕರಾದ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ಸ್ವಾಗತಿಸಿರುವ ಗೋರ ಸೇನಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರೇಶ್ ಬಳೂಟಗಿ, ನಮ್ಮ ಮನವಿಗೆ ಸ್ಪಂದಿಸಿ ಸಚಿವ ಸ್ಥಾನ ನೀಡಿದ ಪಕ್ಷದ ವರಿಷ್ಠರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಾಮಾಜಿಕ ನ್ಯಾಯದ ಪರಿಕಲ್ಪನೆಯಡಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಬಂಜಾರ ಸಮಾಜದ ಏಕೈಕ ಶಾಸಕರಾದ ರುದ್ರಪ್ಪ ಲಮಾಣಿ ಅವರನ್ನು ಸಚಿವರನ್ನಾಗಿ ನೇಮಿಸಬೇಕೆಂದು ಸುಮಾರು ಎರಡು ತಿಂಗಳ ಹಿಂದೆಯೇ ಮನವಿ ಮಾಡಲಾಗಿತ್ತು. ಆ ಮನವಿಗೆ ಮನ್ನಣೆ ನೀಡಿ ಅವರನ್ನು ಸಚಿವರನ್ನಾಗಿ ನೇಮಿಸಿರುವುದು ಸಂತಸದ ವಿಷಯವಾಗಿದೆ ಎಂದು ತಿಳಿಸಿದ್ದಾರೆ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ರುದ್ರಪ್ಪ ಲಮಾಣಿ ಅವರಿಗೆ ಅಭಿನಂದನೆ ಸಲ್ಲಿಸಿದ ಅವರು, ಸಮಾಜದ ಪರವಾಗಿ ನಡೆದ ಪಕ್ಷಾತೀತ ಹೋರಾಟದ ಫಲವಾಗಿ ಈ ಗೌರವ ಲಭಿಸಿದ್ದು, ಇದೀಗ ಸಚಿವರಾಗಿ ಬಂಜಾರ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ವಿಶೇಷವಾಗಿ ಬಂಜಾರ ಸಮುದಾಯಕ್ಕೆ ಒಳಮೀಸಲಾತಿಯಲ್ಲಿ ಆಗಿರುವ ಅನ್ಯಾಯವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸಿ ನ್ಯಾಯ ದೊರಕಿಸಿಕೊಡಬೇಕು. ಗುಳೆ ಹೋಗುವ ಅನಿವಾರ್ಯತೆಯಿಂದ ಸಮಾಜದ ಜನರು ಮಾನಸಿಕ, ಆರ್ಥಿಕ ಹಾಗೂ ಸಾಮಾಜಿಕ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಮಕ್ಕಳ ಶಿಕ್ಷಣಕ್ಕೂ ತೊಂದರೆಯಾಗುತ್ತಿದೆ. ಆದ್ದರಿಂದ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ, ಮೂಲಭೂತ ಸೌಲಭ್ಯಗಳನ್ನು ಒದಗಿಸಿ, ಗುಳೆ ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಒತ್ತಾಯಿಸಬೇಕು ಎಂದು ಸುರೇಶ್ ಬಳೂಟಗಿ ಆಗ್ರಹಿಸಿದ್ದಾರೆ.

ಬಂಜಾರ ಸಮುದಾಯದ ಅಭಿವೃದ್ಧಿ ಹಾಗೂ ಕಲ್ಯಾಣಕ್ಕಾಗಿ ಸರ್ಕಾರದಲ್ಲಿ ಸಮರ್ಥವಾಗಿ ಧ್ವನಿಯಾಗುವ ಮೂಲಕ ಸಮಾಜದ ನಿರೀಕ್ಷೆಗಳನ್ನು ಈಡೇರಿಸುವ ವಿಶ್ವಾಸವಿದೆ ಎಂದು ಅವರು ತಿಳಿಸಿದ್ದಾರೆ.

ವರದಿ: ಚನ್ನಯ್ಯ ಹಿರೇಮಠ, ಕುಕನೂರು

Related Articles

Leave a Reply

Your email address will not be published. Required fields are marked *

Back to top button
error: Content is protected !!