Uncategorized

*ಕುಕನೂರು ತಾಲೂಕು ಪಂಚಾಯತಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ; ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ*

*ತ್ಯಾಗ–ಬಲಿದಾನದ ಫಲವೇ ಸ್ವಾತಂತ್ರ್ಯ: ಬೆಟದೇಶ್ ಮಾಳೆಕೊಪ್ಪ*

*ತ್ಯಾಗ–ಬಲಿದಾನದ ಫಲವೇ ಸ್ವಾತಂತ್ರ್ಯ: ಬೆಟದೇಶ್ ಮಾಳೆಕೊಪ್ಪ*

*ಕುಕನೂರು ತಾಲೂಕು ಪಂಚಾಯತಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ; ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ*

ಕುಕನೂರು: ಲಕ್ಷಾಂತರ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ–ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಈ ಮಹತ್ವದ ದಿನವನ್ನು ಪ್ರತಿಯೊಬ್ಬರೂ ಹೆಮ್ಮೆಯಿಂದ ಆಚರಿಸುವುದರ ಜೊತೆಗೆ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ಸ್ಮರಿಸಬೇಕು ಎಂದು ಕುಕನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬೆಟದೇಶ್ ಮಾಳೆಕೊಪ್ಪ ಹೇಳಿದರು.

ಕುಕನೂರು ತಾಲೂಕು ಪಂಚಾಯಿತಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬ್ರಿಟಿಷರ ವಸಾಹತುಶಾಹಿ ಆಡಳಿತದಿಂದ ದೇಶವನ್ನು ಮುಕ್ತಗೊಳಿಸಲು ಸಾವಿರಾರು ಹೋರಾಟಗಾರರು ನಿರಂತರವಾಗಿ ಹೋರಾಡಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಅನೇಕ ವೀರರು ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಾರ್ಗದ ಹೋರಾಟದ ಫಲವಾಗಿ ಭಾರತ ಸ್ವಾತಂತ್ರ್ಯ ಪಡೆದಿದೆ ಎಂದರು.

ದೇಶದ ಏಕೀಕರಣದಲ್ಲಿ ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆ ಅಪಾರವಾಗಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಮಹನೀಯರ ತ್ಯಾಗವನ್ನು ಪ್ರತಿಯೊಬ್ಬರೂ ಸದಾ ನೆನೆಯಬೇಕು ಎಂದು ಕರೆ ನೀಡಿದರು.

ತಾಲೂಕಿನ ಸಮಸ್ತ ಜನತೆಗೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಇದೇ ಸಂದರ್ಭದಲ್ಲಿ ಕೋರಿದರು.
ನಂತರ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ನೆರವೇರಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕೆ.ಡಿ.ಪಿ. ಸದಸ್ಯರಾದ ಸಂತೋಷ ಬನ್ನಿಕೊಪ್ಪ, ವಿರುಪಾಕ್ಷಪ್ಪ ದೊಡ್ಮನಿ, ತಾಪಂ ಯೋಜನಾಧಿಕಾರಿ ಆನಂದ ಗರೂರ, ಸಹಾಯಕ ನಿರ್ದೇಶಕ (ಗ್ರಾಮೀಣ ಉದ್ಯೋಗ) ಶರಣಪ್ಪ ಕೆಳಗಿನಮನಿ, ಅಕೌಂಟ್ ಆಫೀಸರ್ ಹರೀಶ್ ಟಿ., ನಿವೃತ್ತ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಿರಿಧರ್ ಜ್ಯೋಷಿ, ತಾಪಂ ಸಿಬ್ಬಂದಿ ಹಾಗೂ ತಾಂತ್ರಿಕ ಸಹಾಯಕರು, ಐ.ಇ.ಸಿ. ಸಂಯೋಜಕರು, ಚಾಲಕರು, ಪರಿಚಾರಕರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ ಚನ್ನಯ್ಯ ಹಿರೇಮಠ ಕುಕನೂರು

Related Articles

Leave a Reply

Your email address will not be published. Required fields are marked *

Back to top button
error: Content is protected !!