Uncategorized

*ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪರಿಶೀಲಿಸಿದ ಇಒ ಬೆಟದಪ್ಪ ಮಾಳೆಕೊಪ್ಪ* *18 ವರ್ಷ ಮೇಲ್ಪಟ್ಟ ಯುವಕ

*18 ವರ್ಷ ಮೇಲ್ಪಟ್ಟ ಯುವಕ–ಯುವತಿಯರು ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಕರೆ*

*ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪರಿಶೀಲಿಸಿದ ಇಒ ಬೆಟದಪ್ಪ ಮಾಳೆಕೊಪ್ಪ*

*18 ವರ್ಷ ಮೇಲ್ಪಟ್ಟ ಯುವಕ–ಯುವತಿಯರು ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ಕರೆ*


ಕುಕನೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನ ಮತವು ಮಹತ್ವದ್ದಾಗಿದ್ದು, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಯುವಕ–ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬೆಟದಪ್ಪ ಮಾಳೆಕೊಪ್ಪ ಹೇಳಿದರು.

ಕುಕನೂರು ತಾಲೂಕಿನ ತಳಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಶನಿವಾರ ಭೇಟಿ ನೀಡಿದ ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಹೊಸದಾಗಿ ಅರ್ಹತೆ ಪಡೆದಿರುವ ಯುವ ಮತದಾರರ ನೋಂದಣಿ ಹಾಗೂ ಮತದಾರರ ಪಟ್ಟಿಯಲ್ಲಿನ ವಿವರಗಳ ಪರಿಶೀಲನೆ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಮಾಹಿತಿ ಪಡೆದರು.

ನಂತರ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬ ಯುವಕ–ಯುವತಿಯರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡಿಸಿಕೊಳ್ಳಬೇಕು. ಯುವಜನತೆ ದೇಶದ ಭವಿಷ್ಯದ ಮತದಾರರಾಗಿದ್ದು, ಸದೃಢ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.

ಅರ್ಹ ಯುವಕರು NVSP ವೆಬ್‌ಸೈಟ್ ಅಥವಾ ಮತದಾರರ ಸೇವಾ ಆ್ಯಪ್ ಮೂಲಕ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಯಾವುದೇ ಕಾರಣಕ್ಕೂ ಅರ್ಹರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಅಥವಾ ಅಗತ್ಯ ಬದಲಾವಣೆಗಳಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಮತದಾನವು ಕೇವಲ ಹಕ್ಕು ಮಾತ್ರವಲ್ಲ, ಜವಾಬ್ದಾರಿಯೂ ಹೌದು. ಚುನಾವಣಾ ಸಂದರ್ಭದಲ್ಲಿ ಯಾವುದೇ ಆಸೆ–ಆಮಿಷಗಳಿಗೆ ಒಳಗಾಗದೆ, ಯಾವುದೇ ಒತ್ತಡಕ್ಕೆ ಮಣಿಯದೆ, ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ಅರಿತು ನಿರ್ಭೀತಿಯಿಂದ ಹಾಗೂ ಪ್ರಜ್ಞಾಪೂರ್ವಕವಾಗಿ ಮತದಾನ ಮಾಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೀರನಗೌಡ ಚೆನ್ನವಿರನಗೌಡ, ವಸತಿ ಶಾಲೆಯ ಪ್ರಾಂಶುಪಾಲರು, ತಾಲೂಕು ಪಂಚಾಯಿತಿ ವಿಷಯ ನಿರ್ವಾಹಕ ಬಸಲಿಂಪ್ಪ ಹಂಚಿನಾಳ, ಬಿಎಲ್‌ಒಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚನ್ನಯ್ಯ ಹಿರೇಮಠ. ಕುಕನೂರು.

Related Articles

Leave a Reply

Your email address will not be published. Required fields are marked *

Back to top button
error: Content is protected !!