Uncategorized

ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಸುಷ್ಮಾ ಹೊನ್ನುಂಚಿ

*ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಸುಷ್ಮಾ ಹೊನ್ನುಂಚಿ*

ಕುಕನೂರು: ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಅಕ್ಟೋಬರ್ 6ರಂದು ನಡೆದ ಜಿಲ್ಲಾಮಟ್ಟದ ವೈಯಕ್ತಿಕ ಕ್ರೀಡಾ ಸ್ಪರ್ಧೆಯಲ್ಲಿ ಕುಕನೂರಿನ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸುಷ್ಮಾ ಹೊನ್ನುಂಚಿ ಚಕ್ರ ಎಸೆತ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ತಮ್ಮ ಕಠಿಣ ಪರಿಶ್ರಮ, ನಿರಂತರ ಅಭ್ಯಾಸ ಹಾಗೂ ಕ್ರೀಡಾ ಶಿಕ್ಷಕರ ಮಾರ್ಗದರ್ಶನದ ಫಲವಾಗಿ ಸುಷ್ಮಾ ಈ ಗಮನಾರ್ಹ ಸಾಧನೆ ಮಾಡಿದ್ದಾರೆ. ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸುವುದರ ಜೊತೆಗೆ ಕುಕನೂರಿನ ಕ್ರೀಡಾ ಕ್ಷೇತ್ರಕ್ಕೂ ಹೆಮ್ಮೆ ತಂದಿದ್ದಾರೆ.

ಸುಷ್ಮಾ ಅವರ ಸಾಧನೆಗೆ ಅಭಿನವ ಶ್ರೀಗಳು, ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಸಿಬ್ಬಂದಿ ವರ್ಗ, ದೈಹಿಕ ಶಿಕ್ಷಕರು ಮತ್ತು ಕುಕನೂರಿನ ಹಿರಿಯರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಗೌರವದ ಸ್ಥಾನ ಪಡೆದು ಇನ್ನಷ್ಟು ಎತ್ತರದ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.

 

ವರದಿ ಚನ್ನಯ್ಯ ಹಿರೇಮಠ ಕುಕನೂರು

Related Articles

Leave a Reply

Your email address will not be published. Required fields are marked *

Back to top button
error: Content is protected !!