Uncategorized

ತಹಶೀಲ್ದಾರ್ ಗೈರು: ವಾಲ್ಮೀಕಿ ಜಯಂತಿಯಲ್ಲಿ ಸಮುದಾಯದ ಆಕ್ರೋಶ

ಆರೋಗ್ಯ ಸರಿಯಿಲ್ಲದ ಕಾರಣ ಕಾರ್ಯಕ್ರಮಕ್ಕೆ ಬರಲಾಗಲಿಲ್ಲ ಎಂದ ತಹಶೀಲ್ದಾರ್ ಬಸವರಾಜ್ ಬೆಣ್ಣೆ ಶಿರೂರು

ತಹಶೀಲ್ದಾರ್ ಗೈರು: ವಾಲ್ಮೀಕಿ ಜಯಂತಿಯಲ್ಲಿ ಸಮುದಾಯದ ಆಕ್ರೋಶ

ಆರೋಗ್ಯ ಸರಿಯಿಲ್ಲದ ಕಾರಣ ಕಾರ್ಯಕ್ರಮಕ್ಕೆ ಬರಲಾಗಲಿಲ್ಲ ಎಂದ ತಹಶೀಲ್ದಾರ್ ಬಸವರಾಜ್ ಬೆಣ್ಣೆ ಶಿರೂರು

ಕುಕನೂರು: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಬಸವರಾಜ್ ಬೆಣ್ಣೆ ಶಿರೂರು ಗೈರಾಗಿದ್ದರಿಂದ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಯುವಕರು ಆಕ್ರೋಶ ವ್ಯಕ್ತಪಡಿಸಿದರು.

ಜಯಂತಿ ಆಚರಣೆಗೆ ಸಂಬಂಧಿಸಿದಂತೆ ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ವಿವಿಧ ಗ್ರಾಮಗಳ ಸಮುದಾಯದ ಮುಖಂಡರು ತಹಶೀಲ್ದಾರ್ ಅವರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ಪೂರ್ವಭಾವಿ ಸಭೆ ನಡೆಸಿ ಜಯಂತಿ ಆಚರಿಸಲು ಮನವಿ ಮಾಡಿದ್ದರು.

ಆದರೂ ಅವರು ಕಾರ್ಯಕ್ರಮಕ್ಕೆ ಗೈರಾಗಿರುವುದು ಸಮುದಾಯದ ಅಸಮಾಧಾನಕ್ಕೆ ಕಾರಣವಾಯಿತು.
ನಂತರ ತಹಶೀಲ್ದಾರ್ ಬಸವರಾಜ್ ಬೆಣ್ಣೆ ಶಿರೂರು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ, “ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ” ಎಂದು ಅವರು ಪತ್ರಿಕೆಗೆ ತಿಳಿಸಿದರು.
ತಹಶೀಲ್ದಾರ್ ಬಸವರಾಜ್ ಬೆಣ್ಣೆ ಶಿರೂರು ಅವರು ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಗೈರಾಗಿದ್ದರಿಂದ ಆಕ್ರೋಶಗೊಂಡ ವಾಲ್ಮೀಕಿ ಸಮುದಾಯದ ಮುಖಂಡರು ಹಾಗೂ ಯುವಕರು ಕೆಲಕಾಲ ತಹಶೀಲ್ದಾರ್ ವಿರುದ್ಧ ಪ್ರತಿಭಟನೆ ನಡೆಸಿದರು. ಅಲ್ಲದೆ, ತಹಶೀಲ್ದಾರ್ ಗೈರುಹಾಜರಿಯನ್ನು ಖಂಡಿಸಿ ಪೂಜಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ತಿಳಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬೆಟ್ಟದಪ್ಪ ಮಾಳೆಕೊಪ್ಪ ಹಾಗೂ ಪಿಎಸ್‌ಐ ಮೌನೇಶ ರಾಠೋಡ್ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು. ನಂತರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಗುರು ಹಿರಿಯರು ಯುವಕರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇತರರು ಇದ್ದರು.

 

ವರದಿ ಚನ್ನಯ್ಯ ಹಿರೇಮಠ ಕುಕನೂರು

Related Articles

Leave a Reply

Your email address will not be published. Required fields are marked *

Back to top button
error: Content is protected !!