Uncategorized

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ನಿರ್ಲಕ್ಷ್ಯ: ಪಲ್ಟಿಯಾದ ಟಿಪ್ಪರ್

ಧೂಳಿನಿಂದ ವಾಹನ ಸವಾರರಿಗೆ ತೊಂದರೆ – ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಇಲಾಖೆಯ ವಿರುದ್ಧ ಸಾರ್ವಜನಿಕರ ಆಕ್ರೋಶ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ನಿರ್ಲಕ್ಷ್ಯ: ಪಲ್ಟಿಯಾದ ಟಿಪ್ಪರ್

ಧೂಳಿನಿಂದ ವಾಹನ ಸವಾರರಿಗೆ ತೊಂದರೆ – ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಇಲಾಖೆಯ ವಿರುದ್ಧ ಸಾರ್ವಜನಿಕರ ಆಕ್ರೋಶ

ಕುಕನೂರು: ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ನಿರ್ವಹಣೆಯ ಕೊರತೆ ಹಾಗೂ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಮಸಬಹಂಚಿನಾಳ ಗ್ರಾಮದಿಂದ ರಾಜೂರು ಬೈಪಾಸ್‌ಗೆ ಸಂಪರ್ಕ ಕಲ್ಪಿಸುವ ನಿರ್ಮಾಣ ಹಂತದ ರಸ್ತೆಯಲ್ಲಿ ಸಮರ್ಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿರುವುದು ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ಭಾನುವಾರ ಮಧ್ಯಾಹ್ನ 12 ಗಂಟೆಗೆ ಪಟ್ಟಣದ ವಿದ್ಯಾಶ್ರೀ ಶಾಲೆಯ ಸಮೀಪ ಗರಸು ತುಂಬಿಕೊಂಡು ಸಾಗುತ್ತಿದ್ದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆದರೆ ಕಾಮಗಾರಿ ನಡೆಯುವ ರಸ್ತೆಗೆ ಸಮರ್ಪಕವಾಗಿ ನೀರು ಸಿಂಪಡಿಸದೆ ಇರುವುದರಿಂದ ವಾಹನಗಳು ಸಂಚರಿಸಿದಾಗ ಭಾರಿ ಪ್ರಮಾಣದಲ್ಲಿ ಧೂಳು ಆವರಿಸುತ್ತಿದೆ. ಇದರಿಂದ ಪಾದಚಾರಿಗಳು, ಶಾಲಾ ವಿದ್ಯಾರ್ಥಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ.

ರಸ್ತೆಯ ಧೂಳಿನಿಂದ ವಾಹನ ಸವಾರರಿಗೆ ಎದುರಿನ ವಾಹನಗಳು ಸರಿಯಾಗಿ ಕಾಣದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಅಪಘಾತ ಸಂಭವಿಸುವ ಭೀತಿ ಎದುರಾಗಿದೆ. ಈಗಾಗಲೇ ಟಿಪ್ಪರ್ ಪಲ್ಟಿಯಾದ ಘಟನೆ ನಡೆದಿದ್ದರೂ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಕಾಮಗಾರಿ ನಡೆಯುವ ರಸ್ತೆಗೆ ನಿಯಮಿತವಾಗಿ ನೀರು ಸಿಂಪಡಿಸುವುದು, ಎಚ್ಚರಿಕೆ ಫಲಕ ಅಳವಡಿಸುವುದು ಹಾಗೂ ವಾಹನಗಳ ಸುರಕ್ಷಿತ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ವರದಿ: ಚನ್ನಯ್ಯ ಹಿರೇಮಠ

Related Articles

Leave a Reply

Your email address will not be published. Required fields are marked *

Back to top button
error: Content is protected !!