ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರಂಜಾನ್ ಸಂಭ್ರಮ, ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಹಬ್ಬದ ಶುಭಾಶಯ ವಿನಿಮಯ.
ಹುಬ್ಬಳ್ಳಿ; ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಒಂದಾದ ಪವಿತ್ರ ರಂಜಾನ ಹಬ್ಬವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ರಂಜಾನ್ ಹಬ್ಬದ ಮುಖ್ಯ ಭಾಗವಾಗಿರುವ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಮಸ್ಲಿಂ ರು ಪ್ರಾರ್ಥನೆ ಮುಗಿಸಿದ ಬಳಿಕ ಅಪ್ಪುಗೆ ನೀಡುವ ಒಬ್ಬರಿಗೊಬ್ಬರು ಹಬ್ಬದ ಶುಭಾಶಯವನ್ನು ವಿನಿಮಯ ಮಾಡಿಕೊಂಡರು.
ನಗರದ ಕಿತ್ತೂರು ರಾಣಿ ಚೆನ್ನಮ್ಮ ಮೈದಾನದಲ್ಲಿ ( ಈದ್ಗಾ ಮೈದಾನ) ಮುಸ್ಲಿಂ ಧರ್ಮ ಗುರುಗಳು ಸಾಮೂಹಿಕ ಪ್ರಾರ್ಥನೆ ಭೋಧಿಸುವ ಮೂಲಕ ಚಾಲನೆ ನೀಡಿದ್ದು, ಭಕ್ತಿ ಭಾವದೊಂದಿಗೆ ಉಳಿದಂತೆ ಸರ್ವ ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಮಾಡಿದರು. ಬೊರು ಬಿಸಿಲಿನ ನಡುವೆಯೂ ಹೊಸ ಬಟ್ಟೆ ಧರಿಸಿ ಮಕ್ಕಳು ತಮ್ಮ ಕುಟುಂಬದ ಸಂಬಂಧಿಯೊಂದಿಗೆ ಪ್ರಾರ್ಥನೆಯಲ್ಲಿ ಭಾಗಿಯಾಗಿ ಹಬ್ಬ ಆಚರಣೆ ಮಾಡಿರುವುದು ವಿಶೇಷವಾಗಿತ್ತು.
ಸಾಮೂಹಿಕ ಪ್ರಾರ್ಥನೆಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಹು-ಧಾ ಪೂರ್ವ ವಿಧಾನಸಭಾ ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು, ಹುಬ್ಬಳ್ಳಿ ಅಂಜುಮನ್ ಸಂಸ್ಥೆಯ ಪದಾಧಿಕಾರಿಗಳು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ, ಹಬ್ಬದ ಶುಭಾಶಯಗಳು ತಿಳಿಸಿದರು.