ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಸಾಧು ಹತ್ಯೆ, ಮಿಂಚಿನ ಕಾರ್ಯಾಚರಣೆಯಲ್ಲಿ ಓರ್ವ ಅರೆಸ್ಟ್

ಮಹಾರಾಷ್ಟ್ರದ ಪಾಲ್ಘಾರ್ ನಲ್ಲಿ ಇಬ್ಬರು ಸಾಧುಗಳ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ನಾಂದೇಡ್ ನಲ್ಲಿ ಮತ್ತೊಬ್ಬರನ್ನು ಹತ್ಯೆ ಮಾಡಲಾಗಿದೆ.

ಕರ್ನಾಟಕ ಮೂಲದ ಶಿವಾಚಾರ್ಯ ನಿರ್ವಾಣರುದ್ರ ಪುಷ್ಪಪತಿನಾಥ ಮಹಾರಾಜ್ ಅವರನ್ನು ಹತ್ಯೆ ಮಾಡಲಾಗಿದೆ. ನಾಂದೇಡ್ ಜಿಲ್ಲೆ ಉಮರಿ ಸಮೀಪದ ನಾಗಠಾಣ ನಿರ್ವಾಣಿ ಮಠದ ಆಶ್ರಮದಲ್ಲಿ ಶಿವಾಚಾರ್ಯ ಪುಷ್ಪಪತಿನಾಥ ಮಹಾರಾಜ್ ಅವರನ್ನು ಕೊಲೆ ಮಾಡಲಾಗಿದ್ದು ಸಮೀಪದ ಶೌಚಾಲಯದಲ್ಲಿ ಮತ್ತೊಬ್ಬ ವ್ಯಕ್ತಿಯ ಮೃತದೇಹ ಕಂಡು ಬಂದಿದೆ.

ಯುವಕನೊಬ್ಬ ಆಶ್ರಮದಲ್ಲಿ ಲೂಟಿಗೆ ಬಂದಿದ್ದು ಈ ವೇಳೆ ಆತ ಸಾಧು ಹಾಗೂ ವ್ಯಕ್ತಿಯನ್ನು ಹತ್ಯೆ ಮಾಡಿರುವುದಾಗಿ ಹೇಳಲಾಗಿದೆ. ಕೊಲೆಯ ಹಿಂದೆ ಮತೀಯ ದ್ವೇಷ ಇಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ಸಹ ಆರೋಪಿಯಾಗಿದ್ದು, ಲೈಂಗಿಕ ಕಿರುಕುಳ ಆರೋಪದಲ್ಲಿಯೂ ಜೈಲು ಸೇರಿದ್ದ ಎಂದು ನಾಂದೇಡ್ ಪೊಲೀಸ್ ಅಧೀಕ್ಷಕ ವಿಜಯಕುಮಾರ್ ಮಗರ್ ಮಾಹಿತಿ ನೀಡಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

=11

follow me

Leave a Reply

Your email address will not be published.

error: Content is protected !!
×