ಡಾ. ಬಿ ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಹಿನ್ನೆಲೆ ಬಾಬಾ ಸಾಹೇಬರ ಪ್ರತಿಮೆಗೆ ಗೌರವ ನಮನ
ಬೆಳಗಾವಿ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ ಅವರ 133ನೇ ಜಯಂತಿ ಹಿನ್ನೆಲೆ ಗ್ರಾಮ ಪಂಚಾಯತ ಕಣಗಲಾದಲ್ಲಿ ಮಹಾ ಮಾನವತಾವಾದಿಯ ಪ್ರತಿಮೆಗೆ ಗ್ರಾಮ ಪಂಚಾಯತ ಅಧ್ಯಕ್ಷರು ತಸ್ವಿನಾಬಾನು ಮುಲ್ಲಾ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಇಂದು ‘ಸಂವಿಧಾನ ಶಿಲ್ಪಿ’ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮದಿನ. ಪ್ರತಿ ವರ್ಷ ಏಪ್ರಿಲ್ 14 ರಂದು ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲಾಗುತ್ತದೆ. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಡಾ ಬಾಬಾಸಾಹೇಬ್ ಅಂಬೇಡ್ಕರ್.
ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಬಾಬಾ ಸಾಹೇಬರ ಚಿಂತೆನೆಗಳು ಇಂದಿಗೂ ಯುವಜನೆತೆಗೆ ಸ್ಫೂರ್ತಿ ನೀಡುತ್ತಲೇ ಇದೆ.
ಸದರಿ ಕಾರ್ಯಕ್ರದಲ್ಲಿ ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಸುನೀತಾ ಅಶೋಕ ಪಾಂಡರೆ,ಸದಸ್ಯರಾದ ಮಹಾದೇವ ಸನ್ನಾಯಿಕ,ಅಮೋಲಕುಮಾರ ಗುಡೆ, ಸಂತೋಷ ಹಸೂರೆ, ಗ್ರಾಮ ಪಂಚಾಯತ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿಗಾರರು:ಸಂತೋಷ ನಿರ್ಮಲೆ (ಪಬ್ಲಿಕ್ ರೈಡ್)