ಗ್ಯಾರಂಟಿ ಯೋಜನೆ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ.. ಅಧಿಕಾರ ಸ್ವೀಕಾರ: ಪ್ರಮಾಣಿಕ ಕಾರ್ಯದ ಭರವಸೆ
ಕೊಪ್ಪಳ.
ಗ್ಯಾರಂಟಿ ಯೋಜನೆಗಳ ನಿರ್ವಹಣಾ ಜಿಲ್ಲಾ ಸಮಿತಿಗೆ ಅಧ್ಯಕ್ಷರಾಗಿರುವ ರೆಡ್ಡಿ ಶ್ರೀನಿವಾಸ ಮತ್ತು ಸದಸ್ಯರು ಅಧಿಕಾರ ಸ್ವೀಕರಿಸಿದರು. ಸರಕಾರ ಮತ್ತು ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಕಾಂಗ್ರೆಸ್ ಮುಖಂಡರಿಗೆ ನಾನು ಅಭಿನಂದಿಸುತ್ತೇನೆ. ಮತ್ತು ಈ ಯೋಜನೆ ಅನುಷ್ಟಾನದಲ್ಲಿ ಪ್ರಮಾಣಿಕ ಕಾರ್ಯ ಮಾಡುವುದಾಗಿ ಭರವಸೆ ನೀಡಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುವ ಮತ್ತು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಖಡಿ ಅವರಿಂದ ನೇಮಕಾತಿ ಆದೇಶ ಪ್ರತಿಯನ್ನು ಪಡೆದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಸರಕಾರ ರಾಜ್ಯದ ಬಡ, ಹಿಂದುಳಿದ ಮತ್ತು ಆರ್ಥಿಕ ದುರ್ಬರ ಶ್ರೇಯೋಭಿವೃದ್ಧಿಗೆ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಈಗಾಗಲೇ ಫಲಾನುಭವಿಗಳಿಗೆ ತಲುಪುತ್ತಿವೆ. ಈ ಯೋಜನೆ ಅರ್ಹ ಪ್ರತಿಯೊಬ್ಬರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಸರಕಾರ ನಿರ್ವಹಣಾ ಸಮಿತಿ ನೇಮಕ ಮಾಡಿದ್ದು, ನನಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಿದೆ. ಜಿಲ್ಲಾ ಸಮಿತಿ ಜೊತೆಗೆ ಎಲ್ಲಾ ತಾಲೂಕಿನಲ್ಲಿ ಈ ಸಮಿತಿ ನೇಮಕ ಮಾಡಲಾಗಿದೆ. ಅಪರ ಜಿಲ್ಲಾಧಿಕಾರಿಗಳು ಜಿಲ್ಲಾ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿದ್ದು, ಆಯಾ ತಾಪಂ ಕಾರ್ಯ ನಿರ್ವಾಧಿಕಾರಿಗಳು ತಾಲೂಕು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಇಂದು ಸಮಿತಿಯ ಎಲ್ಲಾ ಸದಸ್ಯರು ಮತ್ತು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದ್ದು, ನನಗೆ ನೀಡಿರುವ ಈ ಜವಬ್ದಾರಿಯನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತೇನೆ. ಮತ್ತು ಜಿಲ್ಲಾ ಉಸ್ತುವಾರಿ ಸಚಿವರು, ಎಲ್ಲಾ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರುಗಳಿಗೆ ನಾನು ಅಭಿನಂದಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ, ಜಿಪಂ ಮಾಜಿ ಅಧ್ಯಕ್ಷ ರಾಜಶೇಖರ ಹಿಟ್ನಾಳ, ಮಾಜಿ ಸದಸ್ಯ ಅಮರೇಶ ಗೋನಾಳ, ಸಿದ್ಧಪ್ಪ ನಿರಲೂಟಿ, ಹನುಮೇಶ ನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶರಣೇಗೌಡ, ಗಂಗಾಧರಸ್ವಾಮಿ, ತಾಪಂ ಮಾಜಿ ಸದಸ್ಯ ಸಿದ್ಧನಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಶಶಿಧರಗೌಡ, ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಎಸ್.ಬಿ.ಖಾದ್ರಿ ಸೇರಿದಂತೆ ಸಮಿತಿಯ ಸದಸ್ಯರು ಮತ್ತಿತರು ಇದ್ದರು.