ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಈ ರೀತಿ ಮಾಡಿ

ಬೆಂಗಳೂರು: ಕೊರೊನಾ ತಡೆಗಾಗಿ ಮುಂಜಾಗ್ರತ ಕ್ರಮಗಳ ಜೊತೆಯಲ್ಲಿ ಪೌಷ್ಠಿಕಾಂಶವುಳ್ಳ ಆಹಾರವನ್ನು ಬಳಸುವುದು ಉತ್ತಮ. ಸೋಂಕಿಕತರಿಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರವನ್ನೇ ನೀಡಲಾಗುತ್ತದೆ. ಮಕ್ಕಳು, ಗರ್ಭಿಣಿ ಮತ್ತು ಹಿರಿಯರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರೋದರಿಂದ ಉತ್ತಮ ಆಹಾರ ಸೇವನೆ ಮಾಡಬೇಕು. ಸೋಂಕಿತರು ಗುಣಮುಖರಾಗಿ ಬಂದ ಮೇಲೆಯೂ ವೈದ್ಯರ ಸಲಹೆಯ ಮೇರೆಗೆ ಆಹಾರ ಸೇವಿಸಬೇಕು.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಸಲಹೆಗಳು:
* ಕುಡಿಯಲು ಯಾವಾಗಲೂ ಬಿಸಿನೀರು ಉಪಯೋಗಿಸುವುದು.
* ಪ್ರತಿದಿನ ಯೋಗಾಸನ, ಪ್ರಾಣಾಯಾಮವನ್ನು ಕನಿಷ್ಠ 30 ನಿಮಿಷಗಳವರೆಗೆ ಮಾಡುವುದು.
* ಅರಿಶಿನ, ಜೀರಿಗೆ, ಬೆಳ್ಳುಳ್ಳಿ ಮತ್ತು ಧನಿಯಾಗಳನ್ನು ಆಹಾರದಲ್ಲಿ ಬೆರೆಸುವುದು.
* ಗಿಡಮೂಲಿಕೆಯ ಟೀಗಳನ್ನು ಕುಡಿಯುವುದು (ವೈದ್ಯರ ಸಲಹೆಯ ಮೇರೆಗೆ)
* ಪುದೀನ ಎಲೆಗಳನ್ನು ಬಿಸಿನೀರಿಗೆ ಹಾಕಿ ಹಬೆಯನ್ನು ತೆಗೆದುಕೊಳ್ಳುವುದು.
* ಕೆಮ್ಮು ಅಥವಾ ಗಂಟಲಿನ ಕಿರಿಕಿರಿ ಇದ್ದರೆ ಸಕ್ಕರೆ ಅಥವಾ ಜೇನು ತುಪ್ಪವನ್ನು ಎರಡು ಮೂಗಿನ ಹೊಳ್ಳೆಗಳಿಗೆ ದಿನಕ್ಕೆರಡು ಬಾರಿ ಸವರಿಕೊಳ್ಳುವುದು.
* 1 ಟೇಬಲ್ ಸ್ಪೂನ್ ಎಳ್ಳೆಣ್ಣೆ ಅಥವಾ ತೆಂಗಿನಕಾಯಿ ಎಣ್ಣೆಯನ್ನು 2-3 ನಿಮಿಷ ಬಾಯಲ್ಲಿಟ್ಟುಕೊಂಡು ತಿರುಗಾಡಿಸಿ ಉಗುಳಬೇಕು. ನಂತರ ಬಿಸಿನೀರಿನಿಂದ ಬಾಯಿ ಮುಕ್ಕಳಿಸಬೇಕು. ಇದನ್ನು ದಿನಕ್ಕೆರಡು ಬಾರಿ ಮಾಡಬೇಕು.

ಒಣಕೆಮ್ಮು ಹಾಗೂ ಗಂಟಲು ಕೆರತವಿದ್ದರೆ:
* ಪುದಿನ ಎಲೆ ಅಥವಾ ಓಮದ ಕಾಳುಗಳನ್ನು ಕುದಿಯುವ ನೀರಿಗೆ ಹಾಕಿ ಹಬೆ (ಆವಿ)ಯನ್ನು ದಿನಕ್ಕೊಂದು ಬಾರಿ ತೆಗೆದುಕೊಳ್ಳುವುದು.
* ಲವಂಗದ ಪುಡಿಯನ್ನು ಕಲ್ಲುಸಕ್ಕರೆ ಅಥವಾ ಜೇನುತುಪ್ಪದೊಂದಿಗೆ ಸೇರಿಸಿ ದಿನಕ್ಕೆ 2-3 ಬಾರಿ ಸೇವಿಸುವುದು.
ಸೂಚನೆಗಳು: ಇವೆಲ್ಲ ಕೇವಲ ಸಾಮನ್ಯ ಜ್ವರ, ಕೆಮ್ಮು, ನೆಗಡಿಗೆ ಶಮನ ನೀಡುತ್ತವೆ. ಒಂದು ವೇಳೆ ಈ ಲಕ್ಷಣಗಳು ಮುಂದುವರಿದ್ರೆ ವೈದ್ಯರನ್ನು ಸಂಪರ್ಕಿಸಬೇಕು

=11

follow me

Leave a Reply

Your email address will not be published.

error: Content is protected !!
×