ಸುರೇಶ್ ಅಂಗಡಿ ನಿಧನ ಸಂಸದ ಸಂಗಣ್ಣ ಕರಡಿ ಸಂತಾಪ

ಮತ್ತೊಂದು ಆಘಾತದ ಸುದ್ದಿ, ಕೇಂದ್ರ ಸಚಿವರು ಬಿಜೆಪಿ ಪಕ್ಷದ ಹಿರಿಯ ನಾಯಕರು ಸುರೇಶ ಅಂಗಡಿ ಅವರು ಇದಿಗತಾನೆ ನಿಧನ ಹೊಂದಿದ ಸುದ್ದಿ ಹೊರಬಿದ್ದಿದೆ.

ಸುರೇಶ್ ಅಂಗಡಿಗೆ ಸಂಸದ ಸಂಗಣ್ಣ ಕರಡಿ ಸಂತಾಪ..

ಕೇಂದ್ರ ರೈಲ್ವೆ ಸಚಿವ ಸುರೇಶ್ ಅಂಗಡಿಯವರು ಕ್ರಿಯಾಶಿಲರಾಗಿ ಕಾರ್ಯ ನಿರ್ವಹಿಸಿದ್ದರು. ರಾಜ್ಯದ ಅನೇಕ ಜ್ವಲಂತ ರೈಲ್ವೆ ಸಮಸ್ಯೆಗಳಿಗೆ ಕೂಡಲೆ ಸ್ಪಂದಿಸಿ ಪರಿಹರಿಸಿದ್ದರು. ಕೊಪ್ಪಳ, ಬಳ್ಳಾರಿ, ರಾಯಚೂರು ಭಾಗದ ರೈಲ್ವೆ ಯೋಜನೆಗಳಿಗೆ ಹೆಚ್ಚು ಒತ್ತು ನೀಡಿ ನಮಗೆಲ್ಲ ಪ್ರೋತ್ಸಾಹಿಸಿದ್ದರು. ರಾಜ್ಯಕ್ಕೆ ಹೊಸ ಹೊಸ ಯೋಜನೆಗಳನ್ನು ಕೇಂದ್ರ ಸರ್ಕಾರದಿಂದ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರನ್ನು ಕಳೆದುಕೊಂಡ ದುಃಖಿತರಾಗಿದ್ದೇವೆ. ವೈಯಕ್ತಿಕವಾಗಿ ನನಗೆ ತೀವ್ರ ನೋವು ತರಿಸಿದೆ. ನನ್ನ ಯಾವುದೇ ಮನವಿಗೆ ಇಲ್ಲ ಎನ್ನದೇ ಎಲ್ಲಾ ರೈಲ್ವೆ ಯೋಜನೆಗಳಿಗೆ ಒಪ್ಪಿಗೆ ನೀಡಿದ ಅಭಿವೃದ್ಧಿ ಪರ ಚಿಂತಕ. ಬೇಗನ ಗುಣಮುಖರಾಗಿ ಸಂಸತ್ ಅಧಿವೇಶನಕ್ಕೆ ಆಗಮಿಸುತ್ತಾರೆ ಎಂಬ ವಿಶ್ವಾಸ ಇತ್ತು. ಆದರೆ ವಿಧಿಯ ಆಟ ಬೇರೆಯದೇ ಆಗಿದೆ. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಎಂದು ಸಂಗಣ್ಣ ಕರಡಿ, ವಿಷಾದ ವ್ಯಕ್ತಪಡಿಸಿದರು.

ಸುರೇಶ್ ರವರು ಸೋಮವ್ವ ಮತ್ತು ಚೆನ್ನಬಸಪ್ಪ ಅಂಗಡಿ ದಂಪತಿಗೆಗ ಜನಿಸಿದರು. ಅವರಿಗೆ ಮದುವೆಯಾಗಿ ೨ ಹೆಣ್ಣು ಮಕ್ಕಳಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಬೆಳಗಾವಿ ತಾಲ್ಲೂಕಿನ ಕೆ.ಕೆ. ಕೊಪ್ಪಾ ಗ್ರಾಮದವರು. ಅವರು ಬೆಳಗಾವಿಯ ಎಸ್.ಎಸ್.ಎಸ್.ಸಮಿತಿ ಕಾಲೇಜ್ ಆಫ್ ಕಾಮರ್ಸ್ ನಿಂದ ಪದವಿಯನ್ನು ಪಡೆದರು. ನಂತರ ಅವರು ಬೆಳಗಾವಿಯ ಪ್ರತಿಷ್ಠಿತ ರಾಜ ಲಖಮ್ ಗೌಡ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದರು. ಸಾರ್ವಜನಿಕ ಜೀವನಕ್ಕೆ ಪ್ರವೇಶಿಸುವ ಮೊದಲು ಅವರು ತಮ್ಮದೇ ಆದ ಖಾಸಗಿ ವ್ಯವಹಾರವನ್ನು ನಡೆಸುತ್ತಿದ್ದರು. ವಾಸವದತ್ತ ಸಿಮೆಂಟ್ [ಪ್ರಸ್ತುತ ಬಿರ್ಲಾ ಶಕ್ತಿ ಸಿಮೆಂಟ್] ಅನ್ನು ಯಶಸ್ವಿಯಾಗಿ ಚಾಲನೆಗೆ ತಂದು ಬೆಳಗಾವಿಯಲ್ಲೇ ಪ್ರಥಮ ಸ್ಥಾನಕ್ಕೆ ಇವರು ತಂದರು. ಇಂದಿಗೂ ಅವರು ತಮ್ಮ ಸಿಮೆಂಟ್ ವ್ಯವಹಾರವನ್ನು ನಡೆಸುತ್ತಿದ್ದರು,

ಭಾರತೀಯ ಜನತಾ ಪಕ್ಷದ ಸದಸ್ಯರಾಗಿರುವ ಅವರು ೧೯೯೬ರಲ್ಲಿ ಪಕ್ಷದ ಬೆಳಗಾವಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದರು. ಅವರು ೧೯೯೯ರವರೆಗೆ ಆ ಕಚೇರಿಯಲ್ಲಿ ಮುಂದುವರೆದರು. ೨೦೦೧ರಲ್ಲಿ ಅವರನ್ನು ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಯಿತು ಮತ್ತು ಅವರು ಆ ಹುದ್ದೆಯಲ್ಲಿ ಮುಂದುವರೆದರು. ೨೦೦೪ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡರು. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಎದುರಾಳಿಯನ್ನು ದೊಡ್ಡ ಅಂತರದಿಂದ ಸೋಲಿಸಿ ೧೪ನೇ ಲೋಕಸಭೆಯ ಸದಸ್ಯರಾಗಿ ಆಯ್ಕೆಯಾದರು. ೨೦೦೯ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾದರು. ಅವರು ೨೦೧೪ರಲ್ಲಿ ಸತತ ಮೂರನೇ ಬಾರಿಗೆ ಆಯ್ಕೆಯಾದ ಇವರು, ೨೦೧೯ರಲ್ಲಿ ೪ನೇ ಬಾರಿಗೆ ಸಂಸತ್ ಪ್ರವೇಶಿಸಿದ್ದರು,

ಮೇ ೨೦೧೯ರಲ್ಲಿ ಅಂಗಡಿಯವರು ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

=4

follow me

Leave a Reply

Your email address will not be published.

error: Content is protected !!
×