ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಚೆನ್ನೈ:ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು ಇಂದು ನಮ್ಮನ್ನು ಆಗಲಿದ್ದಾರೆ

ಎಸ್​ಪಿಬಿ ಅವರಿಗೆ ಆಗಸ್ಟ್ 5ರಂದು ಕರೊನಾ ಸೋಂಕು ದೃಢವಾಗಿತ್ತು. ಅದೇ ದಿನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್​ಪಿಬಿ ಗುಣಮುಖರಾಗಿ ಬರಲೆಂದು ಚಿತ್ರರಂಗ ಸೇರಿದಂತೆ ಅನೇಕರು ಪ್ರಾರ್ಥಿಸಿದ್ದರು. ಹೀಗಿರುವಾಗ ಆಗಸ್ಟ್ 28ರಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಅಲ್ಲದೆ, ಕರೊನಾ ನಗೆಟಿವ್​ ಸಹ ಆಗಿತ್ತು. ಈ ಬಗ್ಗೆ ಎಸ್​ಪಿಬಿ ಮಗ ಎಸ್​.ಪಿ. ಚರಣ್​ ಮಾಧ್ಯಮಗಳಿಗೆ ತಿಳಿಸಿದ್ದರು.
ಇನ್ನೇನು ಬಿಡುಗಡೆಯಾಗಲಿದ್ದಾರೆ ಎನ್ನುವಷ್ಟರಲ್ಲಿ ಸಾವಿನ ದಾರಿ ಹಿಡಿದ ಗಾನಗಂಧರ್ವ

ಭಾರತದ 16 ಭಾಷೆಗಳಲ್ಲಿ ಹಾಡಿರುವ ಎಸ್‌ಪಿಬಿ,

4000 ಸಾವಿರ ಹಾಡುಗಳನ್ನು ಹಾಡಿದ್ದಾರೆ. ಅನೇಕ ವೇದಿಕೆಗಳಲ್ಲಿ ಇವರು ಹಾಡಿದ್ದಾರೆ. ಬಾಲಸುಬ್ರಹ್ಮಣ್ಯಂ ಅವರು 2018ರಲ್ಲಿ ತೆರೆಕಂಡ ‘ದೇವದಾಸ್’ ಚಿತ್ರದಲ್ಲಿ ನಟಿಸಿದ್ದರು. 1969ರಿಂದ ಇಲ್ಲಿಯವರೆಗೆ ಹಲವು ಭಕ್ತಿ ಪ್ರಧಾನ ಸಾಮಾಜಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಎಸ್‌ಪಿಬಿ ನಿರ್ವಹಣೆಯಲ್ಲಿ ಮೂಡಿಬರುತ್ತಿದ್ದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮವನ್ನು ಜನರು ಇಂದೂ ಕೂಡ ಮರೆತಿಲ್ಲ.

ಆಂಧ್ರದಲ್ಲಿ ಹುಟ್ಟಿ ಬೆಳೆದರೂ, ನಾನು ಹಿನ್ನೆಲೆ ಗಾಯಕನಾಗಿ ಹಾಡಿದ ಎರಡನೇ ಹಾಡೇ ಕನ್ನಡದಲ್ಲಿ. ಅಲ್ಲಿಂದ ಪ್ರಾರಂಭವಾದ ಈ ಪಯಣ ಇಲ್ಲಿವರೆಗೂ ಬಂದಿದೆ. ಕನ್ನಡಿಗರು ನೀಡಿದ ಪ್ರೀತಿ, ವಾತ್ಸಲ್ಯ ನನಗೆ ಬೇರೆ ಯಾರಿಂದಲೂ ಸಿಕ್ಕಿಲ್ಲ. ಮುಂದಿನ ಜನ್ಮದಲ್ಲಿ ನಾನು ಕನ್ನಡ ನಾಡಿನಲ್ಲಿ ಹುಟ್ಟಲು ಇಷ್ಟಪಡುತ್ತೇನೆ’ ಎಂದು ಅವರು ಈ ಹಿಂದೆಯೇ ಹೇಳಿದ್ದರು.

=4

follow me

Leave a Reply

Your email address will not be published.

error: Content is protected !!
×