ಮರಾಠ ಪ್ರಾಧಿಕಾರ ರಚನೆ ವಿರುದ್ಧ ಕರ್ನಾಟಕ ಬಂದ್

ಜಿಬಿ ನ್ಯೂಸ್ ಕನ್ನಡ ಸುದ್ದಿ ಬೆಂಗಳೂರು: ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ರಾಜ್ಯಾಧ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಸರ್ಕಾರ ಮರಾಠ ಪ್ರಾಧಿಕಾರ ರಚನೆ ಕೈ ಬಿಡದಿದ್ದಲ್ಲಿ ಡಿಸೆಂಬರ್ 5 ರಂದು ಬಂದ್ ಆಚರಿಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಗಡವು ನೀಡಿವೆ.

ರಾಜ್ಯದಲ್ಲಿ ಮರಾಠ ಸಮುದಾಯದ ಜನಸಂಖ್ಯೆ ಗಣನೀಯವಾಗಿದೆ. ಆದ್ದರಿಂದ 1 ರಂದು ಮರಾಠ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದರು. ಇದೆ ವಿಚಾರ ಕನ್ನಡ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ ರಾಜ್ಯಾದ್ಯಂತ ಪರ ವಿರೋಧ ಚರ್ಚೆಗಳು ನಡೆದಿವೆ.

ಸರ್ಕಾರದ ನಿರ್ಧಾರವನ್ನು ಖಂಡಿಸಿರುವ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್, ಸರ್ಕಾರ ತನ್ನ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಆದೇಶವನ್ನು ವಾಪಸ್ ಪಡೆಯಲು ಸರ್ಕಾರಕ್ಕೆ ಇದೆ 27 ರವರೆಗೂ ಗಡುವು ನೀಡುತ್ತೇವೆ. ಆಗಲೂ ಸರ್ಕಾರ ಆದೇಶ ಪಡೆಯದೆ ಹೋದರೆ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜೊತೆಗೆ ಪ್ರಾಧಿಕಾರ ರಚನೆ 50 ಕೋಟಿ ಹಣ ಮೀಸಲಿಡುವುದಾಗಿ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಕೊರೊನಾ ಸಮಯದಲ್ಲಿ ಜನ ಸಂಕಷ್ಟದಲ್ಲಿದ್ದಾರೆ. ಪರಿಹಾರ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಬೆಳಗಾವಿ ಲೋಕಸಭಾ ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ ಮರಾಠ ಪ್ರಾಧಿಕಾರ ನೆನಪಾಗಿದೆ. ಚುನಾವಣೆಗಾಗಿ ಕನ್ನಡ ನೆಲದಲ್ಲಿ ಮರಾಠ ಪ್ರಾಧಿಕಾರ ಬೇಕಾ ಎಂದು ಸರ್ಕಾರಕ್ಕೆ ಕನ್ನಡ ಪರ ಸಂಘಟನೆಗಳು ಪ್ರಶ್ನಿಸಿವೆ.

=3

follow me

Leave a Reply

Your email address will not be published.

error: Content is protected !!
×