ಜಿಲ್ಲಾ ಸುದ್ದಿಗಳುಯಲಬುರ್ಗಾ

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಕೃಷಿ ಅಧಿಕಾರಿ

ಕಮಲ ಮುಡಿದ ಗುಂಗಾಡಿ

– ಜನಾರ್ದನ ರೆಡ್ಡಿ, ಗುಳಗಣ್ಣನವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆ

ಕೊಪ್ಪಳ: ತಾಲೂಕಿನ ಮೈನಳ್ಳಿ ಗ್ರಾಮದಲ್ಲಿ ಬುಧವಾರ ಯಲಬುರ್ಗಾ ತಾಲೂಕಿನ ಮಾಜಿ ಕೃಷಿ ಅಧಿಕಾರಿ ಶರಣಪ್ಪ ಗುಂಗಾಡಿ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾದರು.
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ, ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್, ಅಭ್ಯರ್ಥಿ ವೈದ್ಯ ಬಸವರಾಜ ಕ್ಯಾವಟರ್, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ, ಮುಖಂಡರಾದ ಮಹಾಂತೇಶ ಮೈನಳ್ಳಿ, ವೀರೇಶ ಸಜ್ಜನ ಸೇರಿ ಇನ್ನಿತರರು ಗುಂಗಾಡಿ ಅವರನ್ನು ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.

ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಸರಕಾರಿ ನೌಕರಿಗೆ ರಾಜಿನಾಮೆ ನೀಡಿ, ರಾಜಕೀಯಕ್ಕೆ ಧುಮುಕಿದ್ದ ಇವರು, ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರೂ ಸಿಕ್ಕಿರಲಿಲ್ಲ.
ಪ್ರಮುಖವಾಗಿ ಮಾಜಿ ಸಚಿವ ಹಾಲಪ್ಪ ಆಚಾರ ಅವರ ವಿರುದ್ಧ ಸಿಡಿದೆದ್ದು ರಾಜಕೀಯಕ್ಕೆ ಕಾಲಿಟ್ಟಿದ್ದರಿಂದ ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಾರಂಭದಲ್ಲಿ ನಿರೀಕ್ಷೆಗಳು ಗರಿಗೆದರಿದ್ದವು. ಟಿಕೆಟ್ ಸಿಗದಿದ್ದರೇ ಕೊನೆಗೆ ಪಕ್ಷೇತರರಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದರು.
ಆದರೆ, ಬದಲಾದ ಕಾಲಘಟ್ಟದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಅಂದಿನಿಂದಲೂ ತಟಸ್ಥರಾಗಿದ್ದ ಇವರನ್ನು ಕೊನೆಗೆ ಬಿಜೆಪಿಗೆ ಬರಮಾಡಿಕೊಳ್ಳಲಾಗಿದೆ.
ಸೇರ್ಪಡೆ ನಂತರ ಮಾತನಾಡಿದ ಮುಖಂಡ ಶರಣಪ್ಪ ಗುಂಗಾಡಿ, ದೇಶದ ಉಳಿವಿಗಾಗಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗುವುದು ಅವಶ್ಯವಾಗಿದೆ. ಹೀಗಾಗಿ ಬಿಜೆಪಿ ಸೇರ್ಪಡೆಗೊಂಡಿರುವೆ. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವೈದ್ಯ ಬಸವರಾಜ ಕ್ಯಾವಟರ್ ಅವರನ್ನು ಗೆಲ್ಲಿಸಿಕೊಂಡು ಬರಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button