ಜಿಲ್ಲಾ ಸುದ್ದಿರಾಜ್ಯ ಸುದ್ದಿ

ಲೈಂಗಿಕ ದೌರ್ಜನ್ಯ ಆರೋಪ ಶ್ರೀ ವಿದ್ಯಾಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮಿಯ ಅರೆಸ್ಟ್

ಪಬ್ಲಿಕ್ ರೈಡ್ ನ್ಯೂಸ್ ತುಮಕೂರು

ಹುಲಿಯೂರುದುರ್ಗ  : ಹಂಗರಹಳ್ಳಿ ಶ್ರೀ ವಿದ್ಯಾ ಚೌಡೇಶ್ವರಿ ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಬಾಲಮಂಜುನಾಥ್ ಸ್ವಾಮೀಜಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರಹಳ್ಳಿ ಶ್ರೀ ವಿದ್ಯೆ ವಿದ್ಯಾಚೌಡೇಶ್ವರಿ ಮಠದ ಬಾಲ ಮಂಜುನಾಥ್ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿಕೊಂಡು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಾಲಮಂಜುನಾಥ್ ಸ್ವಾಮೀಜಿ ಬಂಧಿತ ಆರೋಪಿಯಾಗಿದ್ದಾರೆ.

ಅಭಿಷೇಕ್ ಕೊಟ್ಟ ಮಾಹಿತಿ ಮೇರೆಗೆ ತಡರಾತ್ರಿ ಮಠಕ್ಕೆ ತೆರಳಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಪರಿಶೀಲನೆ ವೇಳೆ ಸ್ವಾಮೀಜಿಯ ಅಸಲಿ ಮುಖವಾಡ ಬಯಲಾಗಿದೆ. ಹೀಗಾಗಿ ಬಾಲಮಂಜುನಾಥ್ ಸ್ವಾಮೀಜಿ ಹಾಗೂ ಆತನ ಆಪ್ತ ಸಹಾಯಕ ಅಭಿಲಾಷ್ ವಿರುದ್ಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಎಸ್‌ಪಿ ಅಶೋಕ್ ಕೆವಿ ನೇತೃತ್ವದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನ ಮುಂದುವರಿಸಿದ್ದಾರೆ.

ಚರ್ಮ ರೋಗಕ್ಕೆ ಚಿಕಿತ್ಸೆ ಕೊಡುವ ನೆಪದಲ್ಲಿ ನನ್ನ ಬೆತ್ತಲೆ ವಿಡಿಯೋ ಮಾಡಿಕೊಂಡು, ನನ್ನನ್ನು ಬೆದರಿಸಿ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆಂದು ಸ್ವಾಮೀಜಿ ದೂರು ದಾಖಲಿಸಿದ್ದರು. ಕಳೆದ ಫೆಬ್ರುವರಿ 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸ್ವಾಮೀಜಿಯ ಆಪ್ತ ಸಹಾಯಕ ಅಭಿಲಾಷ್ ಎಂಬಾತನಿಂದ ಸ್ವಾಮೀಜಿ ಎಫ್ಐಆರ್ ದಾಖಲು ಮಾಡಿದ್ದರು.

ಸ್ವಾಮೀಜಿಯ ಸೇವಕ ಅಭಿಷೇಕ್ ಅಂಡ್ ಟೀಂ ನಿಂದ ಬೆದರಿಕೆ ಹಾಕಿ ಹಣಕ್ಕೆ ಡಿಮ್ಯಾಂಡ್ ಇಡಲಾಗಿದೆ ಎಂದು ದೂರು ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿಂತೆ ಒಟ್ಟು 6 ಜನರ ಮೇಲೆ ದೂರು ನೀಡಲಾಗಿತ್ತು. ಈ ಪ್ರಕರಣ ಬೆನ್ನಲ್ಲೇ ಸ್ವಾಮೀಜಿಯ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ಸ್ವಾಮೀಜಿ ಪೊಲೀಸರ ಅತಿಥಿಯಾಗಿದ್ದಾರೆ.

ವರದಿ :-ವಿಜಯಕುಮಾರ್ ಸಿ

9741550843

Related Articles

Leave a Reply

Your email address will not be published. Required fields are marked *

Back to top button
error: Content is protected !!