ರಾಷ್ಟ್ರೀಯ ಸುದ್ದಿ

ಎಲೆಕ್ಷನ್ ಬ್ರೇಕಿಂಗ್ ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆ

ಎಲೆಕ್ಷನ್ ಬ್ರೇಕಿಂಗ್

ಲೋಕಸಭೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಏಪ್ರಿಲ್‌ 19 ರಂದು ಮೊದಲ ಹಂತದ ಮತದಾನ. 2ನೇ ಹಂತ ಏಪ್ರಿಲ್‌ 26ರಂದು ಕರ್ನಾಟಕದಲ್ಲಿ ಮತದಾನ, ಮೇ 7ರಂದು ಮೂರನೇ ಹಂತ, ಮೇ 13, 4ನೇ ಹಂತದ ಮತದಾನ, ಮೇ 20, 5ನೇ ಹಂತ, ಮೇ 25, 6ನೇ ಹಂತ, ಜೂನ್‌ 1, 7ನೇ ಹಂತದ ಮತದಾನ ನಡೆಯಲಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯುಕ್ತ ರಾಜೀವ್‌ ಕುಮಾರ ಅವರು ದಕ್ಷಿಣ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

ಏಪ್ರಿಲ್ 26ರಂದು ಮೊದಲ ಹಂತದ ಮತದಾನ

ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ,ಕೋಲಾರ (ಎಸ್‌ಸಿ)

ಮೇ 07ರಂದು ಎರಡನೇ ಹಂತದ ಮತದಾನ

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು(ಎಸ್ಎಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ),ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ

ಉಪ ಚುನಾವಣೆ ದಿನಾಂಕ ಘೋಷಣೆ

26 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಆಯೋಗ ದಿನಾಂಕ ಘೋಷಿಸಿದೆ. ಏಪ್ರಿಲ್‌ 19ರಂದು ಸಿಕ್ಕಿಂ ಉಪ ಚುನಾವಣೆ. ಮೇ 13 ಆಂಧ್ರಪ್ರದೇಶ ಉಪ ಚುನಾವಣೆ. ಏಪ್ರಿಲ್‌ 19 ಅರುಣಾಚಲ ಪ್ರದೇಶ ಉಪಚುನಾವಣೆ. ಮೇ 25ರಂದು ಒಡಿಶಾ ವಿಧಾನಸಭಾ ಚುನಾವಣೆ. ಕರ್ನಾಟಕದ ಸುರಪುರ ಉಪಚುನಾವಣೆ

ಮುಖ್ಯಾಂಶಗಳು:

*ದೇಶಾದ್ಯಂತ ಈವರೆಗೆ 400 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗಿದೆ.

*ದೇಶಾದ್ಯಂತ 10.5 ಲಕ್ಷ ಮತಗಟ್ಟೆಗಳ ಸ್ಥಾಪನೆ.

*ದೇಶದಲ್ಲಿ ಒಟ್ಟು 97 ಕೋಟಿ ಮತದಾರರಿದ್ದಾರೆ.

*ಈ ಬಾರಿ 1.82 ಕೋಟಿ ಜನರು ಮೊದಲ ಬಾರಿ ಮತ ಚಲಾಯಿಸಲಿದ್ದಾರೆ.

*1.5 ಕೋಟಿ ಭದ್ರತಾ ಸಿಬಂದಿ, ಅಧಿಕಾರಿಗಳ ನೇಮಕ

*ಮತದಾನಕ್ಕೆ ಒಟ್ಟು 55 ಲಕ್ಷ ಇವಿಎಂಗಳ ಬಳಕೆ

*49.7 ಕೋಟಿ ಪುರುಷ ಮತದಾರರಿದ್ದಾರೆ.

*47.1 ಕೋಟಿ ಮಹಿಳಾ ಮತದಾರರಿದ್ದಾರೆ.

*85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.

*20ರಿಂದ 29 ವರ್ಷದೊಳಗಿನ 19.74 ಕೋಟಿ ಯುವ ಮತದಾರರು ಮತ ಚಲಾಯಿಸಲಿದ್ದಾರೆ.

*12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚು

*48 ಸಾವಿರ ತೃತೀಯ ಲಿಂಗಿ ಮತದಾರರು ಮತ ಚಲಾಯಿಸಲಿದ್ದಾರೆ.

*ಮತಗಟ್ಟೆಗಳಲ್ಲಿ ಹೆಲ್ಫ್‌ ಡೆಸ್ಕ್‌, ವ್ಹೀಲ್‌ ಚೇರ್‌ ವ್ಯವಸ್ಥೆ.

*ಈ ಬಾರಿ 2.18 ಲಕ್ಷ ಶತಾಯುಷಿ ಮತದಾರರು ಮತ ಚಲಾಯಿಸಲಿದ್ದಾರೆ.

*ಬಾರ್ಡರ್‌ ಗಳಲ್ಲಿ ಡ್ರೋನ್‌ ಮೂಲಕ ಕಣ್ಗಾವಲು.

*ಪ್ರತಿ ಜಿಲ್ಲೆಯಲ್ಲಿ ಕಂಟ್ರೋಲ್‌ ರೂಂ.

*ಅಕ್ರಮವಾಗಿ ಹಣ ಸಾಗಿಸಿದರೆ ಕಠಿಣ ಕ್ರಮ.

*ಕುಕ್ಕರ್‌, ಮದ್ಯ, ಹಣ ಹಂಚುವಂತಿಲ್ಲ.

*ವೈಯಕ್ತಿಕವಾಗಿ ಟೀಕೆ ಮಾಡುಂತಿಲ್ಲಾ.

*ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ಹಾಗಿಲ್ಲ.

* ಅಭ್ಯರ್ಥಿಗಳು ಮತದಾರರನ್ನು ಪ್ರಚೋದಿಸುವಂತಿಲ್ಲ.

ದೇಶದ 26 ರಾಜ್ಯಗಳಲ್ಲಿ ವಿಧಾನಸಭೆಯ ಉಪ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ ಕುಮಾರ್ ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button