ಜಿಲ್ಲಾ ಸುದ್ದಿಹುಬ್ಬಳ್ಳಿ
ಸುಳ್ಳ ರಸ್ತೆಯ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಹಣ ವಶಕ್ಕೆ
ಪಬ್ಲಿಕ್ ರೈಡ್ ನ್ಯೂಸ್
ಹುಬ್ಬಳ್ಳಿ:- ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಮೂರುಲಕ್ಷ ಎಂಬತ್ತೆರಡು ಸಾವಿರ ನಗದು ಹಣವನ್ನು ಸುಳ್ಳ ರಸ್ತೆಯ ಚೆಕ್ ಪೋಸ್ಟನಲ್ಲಿ ವಶಪಡಿಸಿಕೊಳ್ಳಲಾಗಿದೆ.
ಕಿರೇಸೂರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬರುತ್ತಿರುವ ಗುಜರಾತ್ ರಾಜ್ಯದ ನೋಂದಣಿ ಹೊಂದಿರುವ ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದಾಗ ಚೆಕ್ ಪೋಸ್ಟ್ ಸಿಬ್ಬಂದಿಗಳು ತಪಾಸಣೆ ವೇಳೆ ಹಣ ಸಿಕ್ಕಿದೆ.
ನಗದು ಹಾಗೂ ಒಂದು ಕಾರು ಮತ್ತು ನಾಲ್ಕು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.